Viral Video: ಫೋಟೋ ಶೂಟ್‌ ವೇಳೆ ಬಂದ ರೈಲು, ಪ್ರಾಣ ಉಳಿಸಿಕೊಳ್ಳಲು ಕಂದಕಕ್ಕೆ ಹಾರಿದ ದಂಪತಿ; ವಿಡಿಯೋ ವೈರಲ್‌

ಕೆಲವರಿಗೆ ಎಲ್ಲೆಂದರಲ್ಲಿ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಳ್ಳುವ ಕ್ರೇಜ್‌. ಕೆಲವೊಮ್ಮೆ ಈ ಫೋಟೋಶೂಟ್‌ ಪ್ರಾಣಕ್ಕೆ ಸಂಚಕಾರ ತಂದೊಡ್ಡುತ್ತವೆ. ಅಂತಹದೇ ಘಟನೆಯೊಂದು ಇದೀಗ ನಡೆದಿದ್ದು, ರೈಲು ಸೇತುವೆಯ ಮೇಲೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವಾಗ, ಇದ್ದಕ್ಕಿದ್ದಂತೆ ರೈಲು ಬಂದಿದ್ದು, ಹೇಗಾದ್ರೂ ಪ್ರಾಣ ಉಳಿಸಿಕೊಂಡರೆ ಸಾಕೆಂದು ದಂಪತಿಗಳಿಬ್ಬರು ಕಂದಕಕ್ಕೆ ಜಿಗಿದಿದ್ದಾರೆ. ಈ ಭೀಕರ ವಿಡಿಯೋ ಇದೀಗ ವೈರಲ್‌ ಆಗುತ್ತಿದೆ.

Viral Video: ಫೋಟೋ ಶೂಟ್‌ ವೇಳೆ ಬಂದ ರೈಲು, ಪ್ರಾಣ ಉಳಿಸಿಕೊಳ್ಳಲು ಕಂದಕಕ್ಕೆ ಹಾರಿದ ದಂಪತಿ; ವಿಡಿಯೋ ವೈರಲ್‌
Follow us
| Updated By: ಅಕ್ಷತಾ ವರ್ಕಾಡಿ

Updated on: Jul 16, 2024 | 1:53 PM

ಕೆಲವೊಬ್ಬರಿಗೆ ಎಲ್ಲೆಂದರಲ್ಲಿ ಸೆಲ್ಫಿ, ಫೋಟೋ ಕ್ಲಿಕ್ಕಿಸಿಕೊಳ್ಳುವುದೆಂದರೆ ವಿಪರೀತ ಕ್ರೇಜ್.‌ ಇನ್ನೂ ಕೆಲವರಂತೂ ತುಂಬಿ ಹರಿಯುವ ನದಿ, ಜಲಪಾತ ಮುಂತಾದ ಅಪಾಯಕಾರಿ ಸ್ಥಳಗಳಿಗೆ ಹೋಗಿ ಫೋಟೋ ಶೂಟ್‌ ಮಾಡಿಸಿಕೊಳ್ಳುತ್ತಾರೆ. ಹೀಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ಪ್ರಾಣ ಕಳೆದುಕೊಂಡ ಅದೆಷ್ಟೋ ಘಟನೆಗಳು ನಡೆದಿವೆ. ಇದೀಗ ಅಂತಹದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ದಂಪತಿಗಳಿಬ್ಬರು ರೈಲ್ವೆ ಹಳಿಯ ಮೇಲೆ ನಿಂತು ಫೋಟೋ ಕ್ಲಿಕ್ಕಿಸಿಕೊಳ್ಳುವಾಗ, ಇದ್ದಕ್ಕಿದ್ದಂತೆ ರೈಲು ಬಂದಿದ್ದು, ಪ್ರಾಣ ಉಳಿದರೆ ಸಾಕೆಂದು ಈ ದಂಪತಿ 90 ಅಡಿ ಕಂದಕಕ್ಕೆ ಹಾರಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಈ ಘಟನೆ ರಾಜಸ್ಥಾನದ ಪಾಲಿ ಎಂಬಲ್ಲಿ ನಡೆದಿದ್ದು, ಇಲ್ಲಿನ ಗೋರ್ಮಾಘಾರ್‌ ರೈಲು ಸೇತುವೆಯ ಮೇಲೆ ದಂಪತಿಗಳಿಬ್ಬರು ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಇದ್ದಕ್ಕಿದ್ದಂತೆ ರೈಲು ಬಂದಿದ್ದು, ಈ ಅಪಾಯದಿಂದ ತಪ್ಪಿಸಿಕೊಳ್ಳಲು ದಂಪತಿ 90 ಅಡಿ ಆಳದ ಕಂದಕಕ್ಕೆ ಜಿಗಿದಿದ್ದಾರೆ. ಈ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿದ್ದು, ಇಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರಲು ಸ್ಥಳೀಯ ಅಧಿಕಾರಿಗಳು ಯೋಜಿಸುತ್ತಿದ್ದಾರೆ.

ಮತ್ತಷ್ಟು ಓದಿ: ವಯಸ್ಸು ಕೇವಲ ಸಂಖ್ಯೆ ಅಷ್ಟೇ, ಆರೂವರೆ ಅಡಿ ಎತ್ತರದ ಗೇಟ್ ಹಾರಿ ವೃದ್ಧಾಶ್ರಮದಿಂದ ಪರಾರಿಯಾದ 92ರ ಅಜ್ಜಿ

TimesNow ಅಧೀಕೃತ ಎಕ್ಸ್‌ ಖಾತೆಯಲ್ಲಿ ಈ ಕುರಿತ ಪೋಸ್ಟ್‌ ಒಂದನ್ನು ಹಂಚಿಕೊಳ್ಳಲಾಗಿದೆ. ವೈರಲ್‌ ವಿಡಿಯೋದಲ್ಲಿ ಗೋರ್ಮಾಘಾರ್‌ ರೈಲು ಸೇತುವೆಯ ಮೇಲೆ ನಿಂತು ದಂಪತಿಗಳಿಬ್ಬರು ಫೋಟೋ ಕ್ಲಿಕ್ಕಿಸಿಕೊಳ್ಳುವಾಗ ಇದ್ದಕ್ಕಿದ್ದಂತೆ ರೈಲು ಬಂದಿದ್ದು, ಆ ಸಂದರ್ಭದಲ್ಲಿ ಪ್ರಾಣ ಉಳಿದರೆ ಸಾಕು ಎಂದು ಇವರಿಬ್ಬರೂ ಒಂದು ಕ್ಷಣ ಯೋಚಿಸದೆ 90 ಅಡಿ ಆಳದ ಕಂದಕಕ್ಕೆ ಜಿಗಿಯುವ ಭೀಕರ ದೃಶ್ಯವನ್ನು ಕಾಣಬಹುದು.

ಜುಲೈ 15 ರಂದು ಹಂಚಿಕೊಳ್ಳಲಾದ ಈ ವಿಡಿಯೋ 399 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಇಂತಹ ಅಪಾಯಕಾರಿ ಸ್ಥಳಗಳಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಅವಶ್ಯಕತೆ ಇದೆಯೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ