ಪರೀಕ್ಷೆಯಲ್ಲಿ ನಕಲು ಮಾಡಿದ್ದಲ್ಲದೆ ಪ್ರಶ್ನಿಸಿದ ಶಿಕ್ಷಕನ ಕೆನ್ನೆಗೆ ಬಾರಿಸಿದ ವಿದ್ಯಾರ್ಥಿ; ಆಘಾತಕಾರಿ ವಿಡಿಯೋ ವೈರಲ್‌

ಸಾಮಾನ್ಯವಾಗಿ ಪರೀಕ್ಷೆಯ ಸಂದರ್ಭದಲ್ಲಿ ಒಂದಷ್ಟು ವಿದ್ಯಾರ್ಥಿಗಳು ಕೆಲವೊಂದಿಷ್ಟು ಸರ್ಕಸ್‌ ಮಾಡಿ ನಕಲು ಮಾಡಲು ಯತ್ನಿಸುತ್ತಾರೆ. ಅದೇ ರೀತಿ ಇಲ್ಲೊಂದು ಆಘಾತಕಾರಿ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಮೊಬೈಲ್‌ ಫೋನ್‌ ಬಳಸಿ ಎಂಟೆಕ್‌ ಪರೀಕ್ಷೆಯಲ್ಲಿ ನಕಲು ಮಾಡಲು ಯತ್ನಿಸಿದ್ದಾನೆ. ಹೀಗೆ ನಕಲು ಮಾಡುವ ಸಂದರ್ಭದಲ್ಲಿ ಶಿಕ್ಷಕನ ಕೈಗೆ ರೆಡ್‌ ಹ್ಯಾಂಡ್‌ ಸಿಕ್ಕಿಬಿದ್ದಿದ್ದು, ಈ ಕೋಪದಲ್ಲಿ ಆತ ಶಿಕ್ಷಕನ ಮೇಲೆಯೇ ಕೈ ಮಾಡಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಪರೀಕ್ಷೆಯಲ್ಲಿ ನಕಲು ಮಾಡಿದ್ದಲ್ಲದೆ ಪ್ರಶ್ನಿಸಿದ ಶಿಕ್ಷಕನ ಕೆನ್ನೆಗೆ ಬಾರಿಸಿದ ವಿದ್ಯಾರ್ಥಿ; ಆಘಾತಕಾರಿ ವಿಡಿಯೋ ವೈರಲ್‌
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 16, 2025 | 10:06 AM

ಶಾಲಾ-ಕಾಲೇಜುಗಳಲ್ಲಿ ಒಂದಷ್ಟು ವಿದ್ಯಾರ್ಥಿಗಳು ಎಕ್ಸಾಮ್‌ನಲ್ಲಿ ಫೇಲ್‌ ಆದ್ರೆ ಅನ್ನೋ ಭಯಕ್ಕೋ ಅಥವಾ ಜಾಸ್ತಿ ಮಾರ್ಕ್ಸ್‌ ಗಳಿಸ್ಬೇಕು ಅಂತಾನೋ ಪರೀಕ್ಷೆಯಲ್ಲಿ ನಕಲು ಮಾಡ್ತಾರೆ. ಹೀಗೆ ನಕಲು ಮಾಡಲು ಹೋಗಿ ಸಿಕ್ಕಿ ಬಿದ್ದವರು ಇದ್ದಾರೆ. ಸಿಕ್ಕಿ ಬಿದ್ದು ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆಯೂ ನಡೆದಿದೆ. ಇದೀಗ ಇಲ್ಲೊಂದು ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದ್ದು, ಪರೀಕ್ಷೆಯಲ್ಲಿ ನಕಲು ಮಾಡುವ ವೇಳೆ ವಿದ್ಯಾರ್ಥಿಯೊಬ್ಬ ಇನ್ವಿಜಿಲೇಟರ್‌ ಕೈಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾನೆ. ಹೌದು ಆ ವಿದ್ಯಾರ್ಥಿ ಮೊಬೈಲ್‌ ಫೋನ್‌ ಬಳಸಿ ಎಂ.ಟೆಕ್‌ ಪರೀಕ್ಷೆಯಲ್ಲಿ ನಕಲು ಮಾಡುವ ಸಂದರ್ಭದಲ್ಲಿ ಸಿಕ್ಕಿ ಬಿದ್ದಿದ್ದು, ಈ ಕೋಪದಲ್ಲಿ ಆತ ಶಿಕ್ಷಕನ ಮೇಲೆಯೇ ಕೈ ಮಾಡಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ರಾಜಸ್ಥಾನದ ಜೋಧ್‌ಪುರದ ಎಂಬಿಬಿ ಎಂಜಿನಿಯರಿಂಗ್‌ ಕಾಲೇಜ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಶಿಕ್ಷನ ಮೇಲೆಯೇ ಕೈ ಮಾಡಿದ್ದಾನೆ. ಎಂಟೆಕ್‌ ಪರೀಕ್ಷೆ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿ ಮೊಬೈಲ್‌ ಬಳಸಿ ನಕಲು ಮಾಡಲು ಯತ್ನಿಸಿದ್ದಾನೆ. ಈ ದೃಶ್ಯ ಶಿಕ್ಷಕನ ಕಣ್ಣಿಗೆ ಬಿದ್ದಿದ್ದು, ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಆ ವಿದ್ಯಾರ್ಥಿ ಶಿಕ್ಷಕನ ಕೆನ್ನೆಗೆ ಬಾರಿಸಿದ್ದಾನೆ. ನಂತರ ಇವರಿಬ್ಬರ ಮಧ್ಯೆ ವಾಗ್ವಾದ ನಡೆದಿದ್ದು, ಶಾಂತಿ ಕದಡಿದ ಆರೋಪದಲ್ಲಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

gharkekalesh ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ನಕಲು ಮಾಡಲು ಹೋಗಿ ಸಿಕ್ಕಿ ಬಿದ್ದ ವಿದ್ಯಾರ್ಥಿ ಶಿಕ್ಷಕನ ಮೇಲೆ ಕೈ ಮಿಲಾಯಿಸಿದ್ದು ಮಾತ್ರವಲ್ಲದೆ ಧಮ್ಕಿ ಹಾಕುತ್ತಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಕೀಟಲೆ ಮಾಡಿದವನನ್ನು ಅಟ್ಟಾಡಿಸಿಕೊಂಡು ಹೋದ ಗಜರಾಜ; ವಿಡಿಯೋ ವೈರಲ್

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 92 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಯುವ ಪೀಳಿಗೆ ಏಕೆ ಹೀಗೆ ನಡೆದುಕೊಳ್ಳುತ್ತಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಆತನ ನಡವಳಿಕೆಯೇ ಎಲ್ಲವನ್ನು ಹೇಳುತ್ತಿದೆʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ವಿದ್ಯಾರ್ಥಿಯ ದರ್ಪವನ್ನು ಕಂಡು ಫುಲ್‌ ಶಾಕ್‌ ಆಗಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಏ ಪಾಂಚಾಲಿ! ಬೀಮನ ಪಾತ್ರದ ಡೈಲಾಗ್ ಹೇಳಿದ ಮಿಂಚಿದ ಶಾಸಕ ಶಿವಲಿಂಗೇಗೌಡ
ಏ ಪಾಂಚಾಲಿ! ಬೀಮನ ಪಾತ್ರದ ಡೈಲಾಗ್ ಹೇಳಿದ ಮಿಂಚಿದ ಶಾಸಕ ಶಿವಲಿಂಗೇಗೌಡ
Video: ಮುಳ್ಳುಗಳ ಮೇಲೆ ಮಲಗುವ ಬಾಬಾ
Video: ಮುಳ್ಳುಗಳ ಮೇಲೆ ಮಲಗುವ ಬಾಬಾ
BBL 2025: ಬೌಲ್ಡ್ ಆಗುವುದನ್ನು ತಪ್ಪಿಸಿ ಅರ್ಧಶತಕ ಸಿಡಿಸಿದ ಸ್ಟೀವ್ ಸ್ಮಿತ್
BBL 2025: ಬೌಲ್ಡ್ ಆಗುವುದನ್ನು ತಪ್ಪಿಸಿ ಅರ್ಧಶತಕ ಸಿಡಿಸಿದ ಸ್ಟೀವ್ ಸ್ಮಿತ್
ಬಿಗ್ ಬಾಸ್​ನಲ್ಲಿ ಧನರಾಜ್ ಮೋಸದಾಟಕ್ಕೆ ಎಲಿಮಿನೇಷನ್ ಶಿಕ್ಷೆ?
ಬಿಗ್ ಬಾಸ್​ನಲ್ಲಿ ಧನರಾಜ್ ಮೋಸದಾಟಕ್ಕೆ ಎಲಿಮಿನೇಷನ್ ಶಿಕ್ಷೆ?
ಐಶ್ವರ್ಯ ವೃದ್ಧಿಯಲ್ಲಿ ಉಪ್ಪಿಗಿದೆ ಬಹಳ ಮಹತ್ವ! ಏನದು? ಇಲ್ಲಿದೆ ನೋಡಿ
ಐಶ್ವರ್ಯ ವೃದ್ಧಿಯಲ್ಲಿ ಉಪ್ಪಿಗಿದೆ ಬಹಳ ಮಹತ್ವ! ಏನದು? ಇಲ್ಲಿದೆ ನೋಡಿ
ದಿನ ಭವಿಷ್ಯ: ಜನವರಿ 16ರಂದು ಹೇಗಿದೆ ದ್ವಾದಶ ರಾಶಿಗಳ ಫಲಾಫಲ? ಇಲ್ಲಿದೆ ನೋಡಿ
ದಿನ ಭವಿಷ್ಯ: ಜನವರಿ 16ರಂದು ಹೇಗಿದೆ ದ್ವಾದಶ ರಾಶಿಗಳ ಫಲಾಫಲ? ಇಲ್ಲಿದೆ ನೋಡಿ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ಕೊಪ್ಪಳ ಗವಿಸಿದ್ದೇಶ್ವರನ ರಥ ಎಳೆದು ಪುನೀತರಾದ ಭಕ್ತ ಸಾಗರ: ವಿಡಿಯೋ ನೋಡಿ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ