ಶಾಲಾ-ಕಾಲೇಜುಗಳಲ್ಲಿ ಒಂದಷ್ಟು ವಿದ್ಯಾರ್ಥಿಗಳು ಎಕ್ಸಾಮ್‌ನಲ್ಲಿ ಫೇಲ್ ಆದ್ರೆ ಅನ್ನೋ ಭಯಕ್ಕೋ ಅಥವಾ ಜಾಸ್ತಿ ಮಾರ್ಕ್ಸ್ ಗಳಿಸ್ಬೇಕು ಅಂತಾನೋ ಪರೀಕ್ಷೆಯಲ್ಲಿ ನಕಲು ಮಾಡ್ತಾರೆ. ಹೀಗೆ ನಕಲು ಮಾಡಲು ಹೋಗಿ ಸಿಕ್ಕಿ ಬಿದ್ದವರು ಇದ್ದಾರೆ. ಸಿಕ್ಕಿ ಬಿದ್ದು ಅವಮಾನ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಂತಹ ಘಟನೆಯೂ ನಡೆದಿದೆ. ಇದೀಗ ಇಲ್ಲೊಂದು ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದ್ದು, ಪರೀಕ್ಷೆಯಲ್ಲಿ ನಕಲು ಮಾಡುವ ವೇಳೆ ವಿದ್ಯಾರ್ಥಿಯೊಬ್ಬ ಇನ್ವಿಜಿಲೇಟರ್ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಹೌದು ಆ ವಿದ್ಯಾರ್ಥಿ ಮೊಬೈಲ್ ಫೋನ್ ಬಳಸಿ ಎಂ.ಟೆಕ್ ಪರೀಕ್ಷೆಯಲ್ಲಿ ನಕಲು ಮಾಡುವ ಸಂದರ್ಭದಲ್ಲಿ ಸಿಕ್ಕಿ ಬಿದ್ದಿದ್ದು, ಈ ಕೋಪದಲ್ಲಿ ಆತ ಶಿಕ್ಷಕನ ಮೇಲೆಯೇ ಕೈ ಮಾಡಿದ್ದಾನೆ. ಈ ಕುರಿತ ವಿಡಿಯೋವೊಂದು ಇದೀಗ ಸಖತ್ ವೈರಲ್ ಆಗುತ್ತಿದೆ.
ರಾಜಸ್ಥಾನದ ಜೋಧ್‌ಪುರದ ಎಂಬಿಬಿ ಎಂಜಿನಿಯರಿಂಗ್ ಕಾಲೇಜ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ವಿದ್ಯಾರ್ಥಿಯೊಬ್ಬ ಶಿಕ್ಷನ ಮೇಲೆಯೇ ಕೈ ಮಾಡಿದ್ದಾನೆ. ಎಂಟೆಕ್ ಪರೀಕ್ಷೆ ನಡೆಯುತ್ತಿದ್ದ ವೇಳೆ ವಿದ್ಯಾರ್ಥಿ ಮೊಬೈಲ್ ಬಳಸಿ ನಕಲು ಮಾಡಲು ಯತ್ನಿಸಿದ್ದಾನೆ. ಈ ದೃಶ್ಯ ಶಿಕ್ಷಕನ ಕಣ್ಣಿಗೆ ಬಿದ್ದಿದ್ದು, ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಆ ವಿದ್ಯಾರ್ಥಿ ಶಿಕ್ಷಕನ ಕೆನ್ನೆಗೆ ಬಾರಿಸಿದ್ದಾನೆ. ನಂತರ ಇವರಿಬ್ಬರ ಮಧ್ಯೆ ವಾಗ್ವಾದ ನಡೆದಿದ್ದು, ಶಾಂತಿ ಕದಡಿದ ಆರೋಪದಲ್ಲಿ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ.
Kalesh b/w Student and Examiner during exam, Student got caught cheating during Exam, Jodhpur RJ
pic.twitter.com/QklA5IHdYR— Ghar Ke Kalesh (@gharkekalesh) January 15, 2025
gharkekalesh ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ನಕಲು ಮಾಡಲು ಹೋಗಿ ಸಿಕ್ಕಿ ಬಿದ್ದ ವಿದ್ಯಾರ್ಥಿ ಶಿಕ್ಷಕನ ಮೇಲೆ ಕೈ ಮಿಲಾಯಿಸಿದ್ದು ಮಾತ್ರವಲ್ಲದೆ ಧಮ್ಕಿ ಹಾಕುತ್ತಿರುವಂತಹ ದೃಶ್ಯವನ್ನು ಕಾಣಬಹುದು.
ಇದನ್ನೂ ಓದಿ: ಕೀಟಲೆ ಮಾಡಿದವನನ್ನು ಅಟ್ಟಾಡಿಸಿಕೊಂಡು ಹೋದ ಗಜರಾಜ; ವಿಡಿಯೋ ವೈರಲ್
ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ವಿಡಿಯೋ 92 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಯುವ ಪೀಳಿಗೆ ಏಕೆ ಹೀಗೆ ನಡೆದುಕೊಳ್ಳುತ್ತಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಆತನ ನಡವಳಿಕೆಯೇ ಎಲ್ಲವನ್ನು ಹೇಳುತ್ತಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ವಿದ್ಯಾರ್ಥಿಯ ದರ್ಪವನ್ನು ಕಂಡು ಫುಲ್ ಶಾಕ್ ಆಗಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ