ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್‌ ಪಾರ್ಟಿಯಲ್ಲಿ ರಾಮೇಶ್ವರಂ ಕೆಫೆ ಫುಡ್​

ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್ ಕ್ರೂಸ್ ಪಾರ್ಟಿ ಮೇ 29ರಿಂದ ಜೂ.1ರವರೆಗೆ ಅದ್ಧೂರಿಯಾಗಿ ನಡೆದಿದೆ. ಸುಮಾರು 800 ಅತಿಥಿಗಳನ್ನೊಳಗೊಂಡ ಈ ಕಾರ್ಯಕ್ರಮಕ್ಕೆ ಬೆಂಗಳೂರಿನ ರಾಮೇಶ್ವರಂ ಕೆಫೆ ಆಹಾರ ಪೂರೈಸಿದೆ. ಈ ಕುರಿತು ರಾಮೇಶ್ವರಂ ಕೆಫೆ ಮಾಲೀಕ ರಾಘವೇಂದ್ರ ರಾವ್ ಸಾಮಾಜಿಕ ಮಾಧ್ಯಮದಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್‌ ಪಾರ್ಟಿಯಲ್ಲಿ ರಾಮೇಶ್ವರಂ ಕೆಫೆ ಫುಡ್​
Follow us
ಅಕ್ಷತಾ ವರ್ಕಾಡಿ
|

Updated on:Jun 02, 2024 | 12:02 PM

ರಾಮೇಶ್ವರಂ ಕೆಫೆ ಶುರುವಾದ ಕೆಲವೇ ವರ್ಷಗಳಲ್ಲಿ ಭಾರತದಾದ್ಯಂತ ಬ್ರಾಂಚ್​ಗಳನ್ನ ತೆರೆದು ಜನರ ಮನೆ ಮಾತಾಗಿದೆ. ರಿಲಾಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿಯ ಕಿರಿಯ ಪುತ್ರ ಅನಂತ್ ಅಂಬಾನಿಯ ಎರಡನೇ ಪ್ರೀ ವೆಡ್ಡಿಂಗ್‌ ಪಾರ್ಟಿ ಅದ್ಧೂರಿಯಾಗಿ ನಡೆದಿದ್ದು, ವಿಶೇಷ ಅಂದರೆ ಈ ಕಾರ್ಯಕ್ರಮಕ್ಕೆ ಬೆಂಗಳೂರಿನ ರಾಮೇಶ್ವರಂ ಕೆಫೆ ಆಹಾರ ಪೂರೈಸಿದೆ. ಈ ಕುರಿತು ಸಂತಸವನ್ನು ರಾಮೇಶ್ವರಂ ಕೆಫೆ ಮಾಲೀಕ ರಾಘವೇಂದ್ರ ರಾವ್ ಸಾಮಾಜಿಕ ಮಾಧ್ಯಮದ ಮೂಲಕ ಹಂಚಿಕೊಂಡಿದ್ದಾರೆ.

ಮುಖೇಶ್ ಅಂಬಾನಿಯ ಕಿರಿಯ ಪುತ್ರನ ಪ್ರೀ ವೆಡ್ಡಿಂಗ್ ಕ್ರೂಸ್ ಪಾರ್ಟಿ ಮೇ 29ರಿಂದ ಜೂ.1ರವರೆಗೆ ಅದ್ಧೂರಿಯಾಗಿ ನಡೆದಿದೆ. ಸುಮಾರು 800 ಅತಿಥಿಗಳನ್ನೊಳಗೊಂಡ ಐಷಾರಾಮಿ ಹಡಗು ಮೇ 29ರಂದು ಇಟಲಿಯಿಂದ ಹೊರಟು ಜೂ.1 ಕ್ಕೆ ಸ್ವಿಜರ್‌ಲ್ಯಾಂಡ್ ತಲುಪಿದ್ದು, ಈ ಮೂರು ದಿನಗಳ ಐಷಾರಾಮಿ ಸಂಭ್ರಮದಲ್ಲಿ ಅಂಬಾನಿಯ ಕುಟುಂಬದ ಅತಿಥಿಗಳಿಗೆ ಬೆಂಗಳೂರಿನ ರಾಮೇಶ್ವರಂ ಕೆಫೆ ರುಚಿ ರುಚಿಯಾಗಿ ಆಹಾರವನ್ನು ಉಣಬಡಿಸಿದೆ. ಸದ್ಯ ಊಟದ ಗುಣಮಟ್ಟ, ಜನಪ್ರಿಯತೆ, ರುಚಿ, ವೆರೈಟಿ ಊಟದ ಬಗ್ಗೆ ಮನೆಯ ಮಾತಾಗಿರುವ ರಾಮೇಶ್ವರಂ ಕೆಫೆ,‌ ಮುಖೇಶ್ ಅಂಬಾನಿಯ ಮಗನ ಮದುವೆಯಲ್ಲಿಯೂ ತಮ್ಮ ರುಚಿಯ ಮೂಲಕ ಕಮಾಲ್‌ ಮಾಡಲಿದೆ ಎಂದು ವರದಿಯಾಗಿದೆ.‌

ಇದನ್ನೂ ಓದಿ: ಅನಂತ್ ಅಂಬಾನಿಯ 2ನೇ ಪ್ರೀ ವೆಡ್ಡಿಂಗ್ ಸಂಭ್ರಮದ ಐಷಾರಾಮಿ ಹಡಗು ಹೇಗಿದೆ ನೋಡಿ

2023ರ ಜನವರಿ 19ರಂದು ಅನಂತ್​​ ಅಂಬಾನಿ ಮತ್ತು ರಾಧಿಕ ಮರ್ಚೆಂಟ್ ಜೋಡಿ​​ ಮುಂಬೈನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿತ್ತು. ಈ ಜೋಡಿಯ ಅದ್ಧೂರಿ ವಿವಾಹ ಕಾರ್ಯಕ್ರಮವು ಜುಲೈ 12 ರಂದು ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿರುವ (ಬಿಕೆಸಿ) ಜಿಯೋ ವರ್ಲ್ಡ್‌ ಕನ್ವೆನ್ಷನ್‌ ಸೆಂಟರ್‌ನಲ್ಲಿ ಹಿಂದೂ ಸಂಪ್ರದಾಯದಂತೆ ನಡೆಯಲಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:01 pm, Sun, 2 June 24

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ