Viral Video: ರಿಯಲ್ ಹೀರೋ; ಸಾವಿನ ದವಡೆಯಿಂದ ನಾಯಿ ಮರಿಯನ್ನು ರಕ್ಷಿಸಿದ ವ್ಯಕ್ತಿ

ಈ ಕೆಲವೊಬ್ಬರು ಹೆಂಗಪ್ಪಾ ಅಂದ್ರೆ, ಸಾಕು ಪ್ರಾಣಿಗಳನ್ನು ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿ ಮಾಡ್ತಾರೆ. ಆ ಸಾಕು ಪ್ರಾಣಿಗಳಿಗೆ ಕಿಂಚಿತ್ತು ನೋವಾದರೂ ಕೂಡಾ ಅವರುಗಳು ಸಹಿಸಿಕೊಳ್ಳೋದಿಲ್ಲ. ಅವುಗಳ ರಕ್ಷಣೆಗಾಗಿ ಪ್ರಾಣವನ್ನು ಬೇಕಾದರೂ ಪಣಕಿಡುತ್ತಾರೆ. ಇದಕ್ಕೆ ನಿದರ್ಶನದಂತಿರುವ ಹಲವಾರು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ಹರಿದಾಡುತ್ತಿದ್ದು, ವಯಸ್ಸಾದ ವ್ಯಕ್ತಿಯೊಬ್ಬರು ಮೊಸಳೆಯ ದವಡೆಯಲ್ಲಿ ಸಿಕ್ಕಿಹಾಕಿಕೊಂಡಿದ್ದ ಸಾಕು ನಾಯಿಯನ್ನು ರಕ್ಷಿಸಿದ್ದಾರೆ. ಇಳಿ ವಯಸ್ಸಿನಲ್ಲೂ ಇವರ ಈ ಧೈರ್ಯವನ್ನು ಕಂಡು ನೆಟ್ಟಿಗರು ಆಶ್ಚರ್ಯಚಕಿತರಾಗಿದ್ದಾರೆ.

Viral Video: ರಿಯಲ್ ಹೀರೋ; ಸಾವಿನ  ದವಡೆಯಿಂದ ನಾಯಿ ಮರಿಯನ್ನು ರಕ್ಷಿಸಿದ ವ್ಯಕ್ತಿ
Viral Video
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Feb 11, 2024 | 9:44 AM

ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಸಂಬಂಧ ತುಂಬಾ ವಿಶೇಷವಾದದ್ದು. ಇದೇ ಕಾರಣಕ್ಕೆ ಹೆಚ್ಚಿನವರು ತಮ್ಮ ಮನೆಗಳಲ್ಲಿ ಸಾಕು ಪ್ರಾಣಿಗಳನ್ನು ಸಾಕಲು ಬಯಸುತ್ತಾರೆ. ಅದರಲ್ಲೂ ಕೆಲವೊಬ್ಬರು ತಮ್ಮ ಸಾಕು ಪ್ರಾಣಿಗಳಾದ ನಾಯಿ ಬೆಕ್ಕುಗಳನ್ನು ಮನೆ ಮಕ್ಕಳಂತೆ ನೋಡಿಕೊಳ್ಳುತ್ತಾರೆ. ಈ ಸಾಕು ಪ್ರಾಣಿಗಳಿಗೆ ಕಿಂಚಿತ್ತು ನೋವಾದರೂ ಕೂಡಾ ಸಹಿಸಿಕೊಳ್ಳೋದಿಲ್ಲ. ಅವುಗಳ ರಕ್ಷಣೆಗಾಗಿ ಪ್ರಾಣವನ್ನು ಬೇಕಾದರೂ ಪಣಕಿಡುತ್ತಾರೆ. ಮಾಲೀಕರು ತಮ್ಮ ಸಾಕು ಪ್ರಾಣಿಗಳನ್ನು ರಕ್ಷಿಸಲು ಜೀವದ ಹಂಗು ತೊರೆದ ಉದಾಹರಣೆಗಳೂ ಇವೆ. ಅಷ್ಟೇ ಅಲ್ಲದೆ ಸಾಕಷ್ಟು ಸಂದರ್ಭಗಳಲ್ಲಿ ಸಾಕು ಪ್ರಾಣಿಗಳ ಕಾರಣದಿಂದಾಗಿ ಮಾಲೀಕರ ಜೀವ ಉಳಿದಿದ್ದು ಇದೆ. ಸದ್ಯ ಅಂತಹದ್ದೇ ವಿಡಿಯೋವೊಂದು ಹರಿದಾಡುತ್ತಿದ್ದು, ವೃದ್ಧರೊಬ್ಬರು ಹೀರೋನಂತೆ ಸಿನಿಮೀಯ ರೀತಿಯಲ್ಲಿ ಮರಿ ಮೊಸಳೆಯ ಬಲೆಯಲ್ಲಿ ಸಿಕ್ಕಿಹಾಕಿಕೊಂಡಿದ್ದ ನಾಯಿ ಮರಿಯನ್ನು ರಕ್ಷಿಸಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದ್ದು, ಇವರ ಧೈರ್ಯಕ್ಕೆ ಮೆಚ್ಚಲೇಬೇಕು ಎಂದು ನೆಟ್ಟಿಗರು ಹೇಳಿದ್ದಾರೆ.

ಈ ಘಟನೆ ಅಮೇರಿಕಾದ ಫ್ಲೋರಿಡಾದಲ್ಲಿ ನಡೆದಿದ್ದು ಎನ್ನಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ವೃದ್ಧರೊಬ್ಬರು ತಮ್ಮ ಸಮಯಪ್ರಜ್ಞೆಯಿಂದ ಮೊಸಳೆಯ ದವಡೆಯಿಂದ ಸಾಕು ನಾಯಿಯನ್ನು ರಕ್ಷಿಸುವಂತಹ ದೃಶ್ಯವನ್ನು ಕಾಣಬಹುದು. @cctvidiots ಎಂಬ ಹೆಸರಿನ X ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಈ ವ್ಯಕ್ತಿ ತನ್ನ ನಾಯಿ ಮರಿಯನ್ನು ಪುಟ್ಟದಾದ ಮೊಸಳೆ ಬಾಯಿಯಿಂದ ರಕ್ಷಿಸಿದ್ದಾನೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ಕೆರೆಯ ಬಳಿ ಬಂದಂತಹ ನಾಯಿ ಮರಿಯೊಂದು ಮೊಸಳೆಯ ಬಲೆಗೆ ಸಿಕ್ಕಿಹಾಕಿಕೊಳ್ಳುತ್ತದೆ. ಈ ದೃಶ್ಯವನ್ನು ಕಂಡಂತಹ ಶ್ವಾನದ ಮಾಲೀಕ ತನ್ನ ಇಳಿ ವಯಸ್ಸಿನಲ್ಲೂ ಹಿರೋನಂತೆ ಕೆರೆಗೆ ಜಿಗಿದು ಮೊಸಳೆಯನ್ನು ಕೆರೆಯ ದಡದ ಬಳಿಗೆ ಎತ್ತಿಕೊಂಡು ಬಂದು, ಅದರ ದವಡೆಯಲ್ಲಿ ಸಿಕ್ಕಿಹಾಕಿಕೊಂಡಿದ್ದ ಶ್ವಾನವನ್ನು ಬಿಡಿಸಿ, ಅದರ ರಕ್ಷಣೆ ಮಾಡುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಈ ಕಣ್ಣಲ್ಲಿ ಇನ್ನು ಏನೇನ್ ನೋಡ್ಬೇಕೋ; ಆಲೂ, ಪನೀರ್ ಪರೋಟ ಆಯ್ತು, ಈಗ ಚಾಕೊಲೇಟ್ ಪರೋಟ

ಫೆಬ್ರವರಿ 05 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4.7 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 39 ಸಾವಿರ ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ಗಳನ್ನು ಪಡದುಕೊಂಡಿದೆ. ಒಬ್ಬ ಬಳಕೆದಾರರು ʼವ್ಹಾವ್, ಅವರ ಧೈರ್ಯ ಮತ್ತು ಸಮಯಪ್ರಜ್ಞೆಗೆ ಮೆಚ್ಚಲೇಬೇಕುʼ ಎಂಬ ಕಮೆಂಟ್ ಬರೆದುಕೊಂಡಿದೆ. ಇನ್ನೊಬ್ಬ ಬಳಕೆದಾರರು ʼರಿಯಲ್ ಹೀರೋʼ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಅವರು ಈ ಸಂದರ್ಭದಲ್ಲೂ ಸಿಗಾರ್ ಸೇದುವ ದೃಶ್ಯ ನೋಡಲು ಕೂಲ್ ಆಗಿದೆʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಇಳಿ ವಯಸ್ಸಿನಲ್ಲೂ ಈ ವ್ಯಕ್ತಿಯ ಧೈರ್ಯ ಮತ್ತು ಸಾಹಸಕ್ಕೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ