Video Viral: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್​​​

ಮದುವೆಯ ಬಂದ ಅತಿಧಿಗಳಿಗೆ 5 ದಿನಗಳ ಕಾಲ ತಂಗಲು ಐಷಾರಾಮಿ ಹೋಟೆಲ್‌ನಲ್ಲಿ ವ್ಯವಸ್ಥೆ, ಅತಿಥಿಗಳಿಗೆ ಓಡಾಡಲು ರೋಲ್ಸ್ ರಾಯ್ಸ್ನಂತಹ ಕಾರುಗಳ ವ್ಯವಸ್ಥೆ. ಇದಲ್ಲದೇ ಮದುವೆಯಲ್ಲಿ ಉಡುಗೊರೆಗಳನ್ನು ಸ್ವೀಕರಿಸುವ ಬದಲು, ಪ್ರತಿ ಅತಿಥಿಗೆ ಅಂದಾಜು 66,000 ರೂ. ನಗದು​ ಕೂಡ ನೀಡಲಾಗಿದೆ.

Video Viral: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್​​​
Rich Asian Wedding
Follow us
|

Updated on:Jun 30, 2024 | 3:47 PM

ಇತ್ತೀಚಿನ ದಿನಗಳಲ್ಲಿ ಅಂಬಾನಿ ಮನೆಯ ಅದ್ಧೂರಿ ಮದುವೆ ಕಾರ್ಯಕ್ರಮ ಎಲ್ಲೆಡೆ ಭಾರೀ ಸುದ್ದಿಯಲ್ಲಿದೆ. ಇದರ ನಡುವೆ ಮತ್ತೊಂದು ಮದುವೆ ಕಾರ್ಯಕ್ರಮದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​​ ಆಗಿದೆ. ಈ ಅದ್ಧೂರಿ ಮದುವೆ ಚೀನಾದಲ್ಲಿ ನಡೆದಿದ್ದು, ಇಲ್ಲಿನ ಸಂಭ್ರಮ ಕಂಡು ನೆಟ್ಟಿಗರು ದಂಗಾಗಿ ಹೋಗಿದ್ದಾರೆ.

ಕಂಟೆಂಟ್ ಕ್ರಿಯೇಟರ್ ಡಾನಾ ವಾಂಗ್(@bydanawang) ತನ್ನ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಮದುವೆಯ ವಿಡಿಯೋ ಹಂಚಿಕೊಂಡಿದ್ದಾರೆ. ವೈರಲ್​​ ಆಗಿರುವ ವಿಡಿಯೋದಲ್ಲಿ ಹೇಳಿರುವ ಪ್ರಕಾರ ” ಐದು ದಿನಗಳ ವರೆಗೆ ನಡೆಯುವ ಮದುವೆ ಸಮಾರಂಭದಲ್ಲಿ ಭಾಗಿಯಾದ ಅತಿಧಿಗಳಿಗೆ ಐಷಾರಾಮಿ ಪಂಚತಾರಾ ಹೋಟೆಲ್‌ನಲ್ಲಿ ಎಲ್ಲಾ ವ್ಯವಸ್ಥೆ ಮಾಡಲಾಗಿತ್ತು. ಇದಲ್ಲದೇ ಅತಿಥಿಗಳಿಗೆ ಓಡಾಡಲು ರೋಲ್ಸ್ ರಾಯ್ಸ್ ಮತ್ತು ಬೆಂಟ್ಲಿ ಕಾರುಗಳನ್ನು ಒದಗಿಸಲಾಗಿದೆ. ಇದಲ್ಲದೇ ಮದುವೆಯಲ್ಲಿ ಉಡುಗೊರೆಗಳನ್ನು ಸ್ವೀಕರಿಸುವ ಬದಲು, ಪ್ರತಿ ಅತಿಥಿಗೆ $ 800 ಅಂದರೆ (ಅಂದಾಜು 66,000 ರೂ.) ನಗದು ಇರುವ ಗಿಫ್​ಟ್​ ಆಗಿ ನೀಡಲಾಗಿದೆ. ಇದಲ್ಲದೇ ಬಂದ ಅತಿಥಿಗಳು ಹಿಂದಿರುಗಲು ಖಾಸಗಿ ವಿಮಾನಗಳನ್ನು ಕೂಡ ಒದಗಿಸಲಾಗಿದೆ.

ಐಷಾರಾಮಿ ಮದುವೆಯ ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕಾಲಿನ ಗಾಯಕ್ಕೆ ಆಸ್ಪತ್ರೆಗೆ ದಾಖಲಾದ ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು

ಸದ್ಯ ಈ ಐಷಾರಾಮಿ ಮದುವೆ ಸಮಾರಂಭವನ್ನು ಕಂಡು ನೆಟ್ಟಿಗರು ದಂಗಾಗಿ ಹೋಗಿದ್ದಾರೆ. ಏಪ್ರಿಲ್​ 24ರಂದು ಹಂಚಿಕೊಂಡ ಈ ವಿಡಿಯೋ ಇಲ್ಲಿಯವರೆಗೆ 7.1 ಮಿಲಿಯನ್​​ ಅಂದರೆ 70ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:42 pm, Sun, 30 June 24

ತಾಜಾ ಸುದ್ದಿ
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ಸಿಎಂ ಪತ್ನಿಯವರ ಜಮೀನು ಸ್ವಾಧೀನ ಆಗಿದ್ದು ಬಿಜೆಪಿ ಅಧಿಕಾರದಲ್ಲಿ: ಶಿವಕುಮಾರ್
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಉದ್ದೇಶಿಸಿ ಮೋದಿ ಮಾತು
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಪ್ರಜ್ವಲ್ ಭೇಟಿಯಾಗಲ್ಲ; ನಮಗೆ ದೇವರು, ನ್ಯಾಯಾಂಗವೇ ಗತಿಯೆಂದ ರೇವಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ಸಿದ್ದರಾಮಯ್ಯ ಏಯ್ ಭೀಮ ಅಂತ ಕೂಗಿದಾಗ ಓಡಿಬಂದಿದ್ದು ಕೋಟುಧಾರಿ ಕೆಎನ್ ರಾಜಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ನನ್ನ ಮಗ ಸೂರಜ್ ದೈವಭಕ್ತ, ತಾಯಿ ಚಾಮುಂಶೇಶ್ವರಿ ಕೃಪೆ ಅವನ ಮೇಲಿದೆ: ರೇವಣ್ಣ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮೇಲ್ಮನೆ ಮತ್ತು ಕೆಳಮನೆಗೆ ಯೋಗ್ಯ ಪ್ರತಿಪಕ್ಷ ನಾಯಕರ ಅಯ್ಕೆಯಾಗಲಿ:ತೇಜಸ್ವಿನಿ
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಮಂಗಳೂರಿನಲ್ಲಿ ಮಳೆ ಅವಾಂತರ: ರಾಜಕಾಲುವೆಯ ತಡೆಗೋಡೆ ಕುಸಿದು ರಸ್ತೆ ಬಂದ್
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಜಿಯೋ ಬಳಿಕ ಏರ್​ಟೆಲ್ ರೀಚಾರ್ಜ್ ಪ್ಲ್ಯಾನ್​ ಬೆಲೆಯಲ್ಲಿ ಹೆಚ್ಚಳ
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಕಲರ್​ ಬಳಸಿದ್ದ ಕಬಾಬ್, ಚಿಕನ್ ತಂದೂರಿ, ಗೋಬಿ ಸೀಜ್ ಮಾಡಿದ ಅಧಿಕಾರಿಗಳು
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ
ಮುಳುಗಡೆಯಾಗಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಬೈಕರ್ಸ್ ಚೆಲ್ಲಾಟ