AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಮಹಿಳೆ, ವಿಡಿಯೋ ವೈರಲ್​​

ಋಷಿಕೇಶದ ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಮಹಿಳೆಯೊಬ್ಬರು ಬಿಕಿನಿ ಧರಿಸಿ ಸ್ನಾನ ಮಾಡಿದ್ದು, ಇದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಈ ವಿಡಿಯೋ ವೈರಲ್ ಆಗಿದ್ದು, ಕೆಲವರು ಇದನ್ನು ಹಿಂದೂ ಸಂಪ್ರದಾಯಗಳಿಗೆ ಅಗೌರವ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ಮಹಿಳೆಗೆ ತಿಳುವಳಿಕೆ ಇಲ್ಲದಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಪವಿತ್ರ ಸ್ನಾನ ಮಾಡಿದ ಮಹಿಳೆ, ವಿಡಿಯೋ ವೈರಲ್​​
ವೈರಲ್​​ ವಿಡಿಯೋ ಇಲ್ಲಿದೆ ನೋಡಿ
ಅಕ್ಷಯ್​ ಪಲ್ಲಮಜಲು​​
|

Updated on: Nov 11, 2025 | 1:15 PM

Share

ಋಷಿಕೇಶದ ಲಕ್ಷ್ಮಣ್ ಝೂಲಾ ಬಳಿ ಇರುವ ಪವಿತ್ರ ಗಂಗಾ ನದಿಯಲ್ಲಿ ವಿದೇಶಿ ಮಹಿಳೆಯೊಬ್ಬರು ಬಿಕಿನಿ ಧರಿಸಿ ಸ್ನಾನ ಮಾಡಿದ್ದಾರೆ.ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ಕಾರಣವಾಗಿದೆ. ವಿಡಿಯೋದಲ್ಲಿ ಮಹಿಳೆ ಬಿಕಿನಿ ಮತ್ತು ಹೂವಿನ ಹಾರವನ್ನು ಧರಿಸಿ ನದಿಯಲ್ಲಿ ಈಜುವುದನ್ನು ಕಾಣಬಹುದು. ಮಹಿಳೆಯ ವರ್ತನೆಯಿಂದ ಸಂಸ್ಕೃತಿ ಹಾಗೂ ಸಂಪ್ರದಾಯಗಳಿಗೆ ಧಕ್ಕೆಯಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ವಿಡಿಯೋ ಇನ್ಸ್ಟಾಗ್ರಾಮ್​​ನಲ್ಲಿ ವೈರಲ್ಆಗಿದೆ.

ಗಂಗಾ ನದಿಯಲ್ಲಿ ಬಿಕಿನಿ ಹಾಕಿಕೊಂಡು ಸಾನ್ನ ಮಾಡಿರುವುದು ಹಿಂದೂ ಸಂಪ್ರದಾಯಗಳಿಗೆ ಧಕ್ಕೆ ತಂದಿದೆ. ರೀತಿಯ ವರ್ತನೆಗಳಿಗೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ಹಾಗೂ ಪವಿತ್ರ ಸ್ಥಳಗಳಲ್ಲಿ ರೀತಿ ಮಾಡುವುದು ಸರಿಯಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗಿದೆ. ಗಂಗಾ ನದಿ ಜಗತ್ತಿನ ಬೇರೆ ಬೇರೆ ಜನರನ್ನು ಸೆಳೆಯುತ್ತಿದೆ, ಅದರಲ್ಲೂ ಭಾರತೀಯರಿಗೆ ಇದು ಪವಿತ್ರ ನದಿಯಾಗಿದೆ ಎಂದು ಹೇಳಿದ್ದಾರೆ. ವಿದೇಶಿಗರು ತಮಗೆ ಒಪ್ಪಿಗೆ ಆಗುವ ಬಟ್ಟೆಗಳನ್ನು ಧರಿಸುವುದರಲ್ಲಿ ಯಾವ ಸಮಸ್ಯೆಗಳು ಇಲ್ಲ. ಆದರೆ ಧಾರ್ಮಿಕ ಕೇಂದ್ರಗಳಲ್ಲಿ ಕೆಲವೊಂದು ವಿಚಾರಆಚಾರಗಳನ್ನು ಪಾಲಿಸಲೇಬೇಕು ಎಂದು ಸ್ಥಳೀಯರು ಹೇಳಿದ್ದಾರೆ.

ಇದನ್ನೂ ಓದಿ: ಪಾಕ್​​​ ಭಯೋತ್ಪಾದನೆಯಿಂದ ಬೇಸತ್ತು ಭಾರತಕ್ಕೆ ಬಂದ ಮಹಿಳೆಗೆ ಸಿಕ್ತು ಭಾರತೀಯ ಪೌರತ್ವ

ವೈರಲ್ಪೋಸ್ಟ್​​ ಇಲ್ಲಿದೆ ನೋಡಿ:

ನೆಟ್ಟಿಗರು ಹೇಳೋದೇನು?

ಸೋಶಿಯಲ್​​ ಮೀಡಿಯಾದಲ್ಲಿ ನೆಟ್ಟಿಗರು ಬಗ್ಗೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಆಕೆ ಪರಿಶುದ್ಧವಾಗಿದ್ದು, ನದಿಯನ್ನು ಅಗೌರವಿಸುವ ಉದ್ದೇಶ ಹೊಂದಿಲ್ಲ ಎಂದು ಹೇಳಿದ್ದಾರೆ. ಇನ್ನು ಕೆಲವು ನೆಟ್ಟಿಗರು, ಮಹಿಳೆಗೆ ನಮ್ಮ ಸಂಸ್ಕೃತಿ ಹಾಗೂ ಇಲ್ಲಿ ಯಾವ ಬಟ್ಟೆ ಧರಿಸಬೇಕು ಎಂಬ ತಿಳಿವಳಿಕೆ ಇಲ್ಲದಿರಬಹುದು. ಉದ್ದೇಶಪೂರಕವಾಗಿ ಹೀಗೆ ಮಾಡಿರಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇನ್ನು ಕೆಲವರು ಮಹಿಳೆಯ ಬಟ್ಟೆ ಭಾರತೀಯ ಸಂಪ್ರದಾಯ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಿದೆ. ಗಂಗಾ ಪವಿತ್ರವಾಗಿದ್ದು, ಅಲ್ಲಿಗೆ ಬರುವವರು ಗೌರವದಿಂದ ನಡೆಸಿಕೊಳ್ಳಬೇಕು ಎಂದು ಟೀಕಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ