Video: ಆಭರಣದಂಗಡಿಗೆ ನುಗ್ಗಿ ಗುಂಡಿ ಹಾರಿಸಿದ ಖದೀಮರು; ಮಾಲೀಕ ಸಾವು, ಐವರಿಗೆ ಗಾಯ
ಕಾರಿನಲ್ಲಿ ಬಂದ ಖದೀಮರು ಅಂಗಡಿಯಲ್ಲಿದ್ದ ಸಿಬ್ಬಂದಿಗಳ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಅಂಗಡಿ ಮಾಲೀಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಜೈಪುರ: ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಭಿವಾಡಿ ಪ್ರದೇಶದಲ್ಲಿ ಆಗಸ್ಟ್ 23 ರಂದು ಸಂಜೆ 7 ಗಂಟೆ ಸುಮಾರಿಗೆ ಐವರು ದರೋಡೆಕೋರರು ಆಭರಣ ಅಂಗಡಿಗೆ ನುಗ್ಗಿ ಲೂಟಿ ಮಾಡಿದ್ದಾರೆ. ಕಾರಿನಲ್ಲಿ ಬಂದು ಅಂಗಡಿಯಲ್ಲಿದ್ದವರ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾರೆ. ಈ ಘಟನೆಯಲ್ಲಿ ಅಂಗಡಿ ಮಾಲೀಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಂಗಡಿಯ ಹೊರಗಿದ್ದ ಸೆಕ್ಯುರಿಟಿ ಗಾರ್ಡ್ ನನ್ನು ದೊಣ್ಣೆಯಿಂದ ಹೊಡೆದು ಬಳಿಕ ಆಭರಣ ಮಳಿಗೆಗೆ ನುಗ್ಗಿ ಒಳಗಿದ್ದ ಸಿಬ್ಬಂದಿಗೆ ಮನಬಂದಂತೆ ಥಳಿಸಿದ್ದಾರೆ. ತಡೆಯಲು ಯತ್ನಿಸಿದ ಮಾಲೀಕ ಕಮಲೇಶ್ ಸೋನಿಗೆ ತೀವ್ರವಾಗಿ ಥಳಿಸಿದ್ದಾರೆ. ಅವರ ಪುತ್ರ ವೈಭವ್ ಹಾಗೂ ಶೋರೂಂ ಸಿಬ್ಬಂದಿಯನ್ನು ಥಳಿಸಿ ಕಟ್ಟಿಹಾಕಿದ್ದಾರೆ. ಘಟನೆಯಲ್ಲಿ ಸೆಕ್ಯುರಿಟಿ ಗಾರ್ಡ್ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಬಳಿಕ ದುಷ್ಕರ್ಮಿಗಳು ತಮ್ಮೊಂದಿಗೆ ತಂದಿದ್ದ ಎರಡು ಚೀಲಗಳಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ಆಭರಣಗಳನ್ನು ದೋಚಿದ್ದಾರೆ. ದರೋಡೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ವಿದ್ಯುತ್ ತಂತಿ ತಗುಲಿ ಬಾಲಕ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ