ಟೀಮ್ ಇಂಡಿಯಾ ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ 7 ರನ್‌ಗಳ ರೋಚಕ ಗೆಲುವನ್ನು ಸಾಧಿಸಿದ್ದು, ಬರೋಬ್ಬರಿ 17 ವರ್ಷಗಳ ಬಳಿಕ ಭಾರತ ವಿಶ್ವಕಪ್ ಗೆದ್ದು ಹೊಸ ಇತಿಹಾಸ ನಿರ್ಮಿಸಿದೆ. ಟೀಮ್ ಇಂಡಿಯಾದ ಈ ರೋಚಕ ಗೆಲುವನ್ನು ಇಡೀ ಭಾರತವೇ ಸಂಭ್ರಮಿಸುತ್ತಿದೆ. ಈ ನಡುವೆ ಗೆಲುವು ಸಾಧಿಸಿದ ಬಳಿಕ ಮೈದಾನದಲ್ಲಿ ರೋಹಿತ್ ಶರ್ಮಾ ಹಾರ್ದಿಕ್ ಪಾಂಡ್ಯಗೆ ಪ್ರೀತಿಯ ಮುತ್ತಿಟ್ಟ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಒಂದೆಡೆ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ, ಇನ್ನೊಂದೆಡೆ ಅನುಭವಿ ಆಟಗಾರರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಹಾಗೂ ರಾಹುಲ್ ದ್ರಾವಿಡ್ ಟೀಮ್ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ವಿದಾಯ ಘೋಷಿಸಿ ಅಭಿಮಾನಿಗಳಲ್ಲಿ ಅಚ್ಚರಿಯನ್ನು ಮೂಡಿಸಿದ್ದಾರೆ. ಇವರ ನಿವೃತ್ತಿಯ ಬಗ್ಗೆ ಹಾರ್ದಿಕ್ ಪಾಂಡ್ಯ ಭಾವುಕ ಮಾತುಗಳನ್ನಾಡಿದ್ದು, ಆ ವೇಳೆ ರೋಹಿತ್ ಶರ್ಮಾ ಪಾಂಡ್ಯರನ್ನು ತಬ್ಬಿಕೊಂಡು, ಕೆನ್ನೆಗೆ ಪ್ರೀತಿಯ ಮುತ್ತಿಟ್ಟಿದ್ದಾರೆ. ಈ ಭಾವನಾತ್ಮಕ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ವೈರಲ್ ವಿಡಿಯೋದಲ್ಲಿ ಹಾರ್ದಿಕ್ ಪಾಂಡ್ಯ, ಟೀಮ್ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ವಿದಾಯ ಘೋಷಿಸಿದ ರಾಹುಲ್ ದ್ರಾವಿಡ್ ಅವರ ನಿವೃತ್ತಿಯ ಬಗ್ಗೆ ಭಾವನಾತ್ಮಕ ಮಾತುಗಳನ್ನಾಡುವ ದೃಶ್ಯವನ್ನು ಕಾಣಬಹುದು. ಅವರು ತುಂಬಾನೇ ಒಳ್ಳೆಯ ಮನುಷ್ಯ. ಅವರೊಂದಿಗೆ ಕೆಲಸ ಮಾಡಿದ್ದು, ನನಗೆ ತುಂಬಾ ಸಂತೋಷವಿದೆ ಎಂದು ರಾಹುಲ್ ದ್ರಾವಿಡ್ ಬಗ್ಗೆ ಭಾವನಾತ್ಮಕ ಮಾತುಗಳನ್ನಾಡುವಾಗ ಅಲ್ಲಿಗೆ ಬಂದ ರೋಹಿತ್ ಶರ್ಮಾ ಹಾರ್ದಿಕ್ ಪಾಂಡ್ಯ ಅವರನ್ನು ತಬ್ಬಿಕೊಂಡು ಕೆನ್ನೆಗೆ ಪ್ರೀತಿಯ ಮುತ್ತನ್ನಿಟ್ಟಿದ್ದಾರೆ.
ಇದನ್ನೂ ಓದಿ: ಪುತ್ತೂರಿನಲ್ಲಿ ಫ್ರಿಡ್ಜ್ ಸ್ಫೋಟಗೊಂಡು ಹೊತ್ತಿ ಉರಿದ ಮನೆ, ಕಲ್ಲುರ್ಟಿ ದೈವದ ಪೀಠಕ್ಕೆ ತಗಲದ ಬೆಂಕಿ
ನಿನ್ನೆ ರಾತ್ರಿ ಹಂಚಿಕೊಂಡ ಈ ವಿಡಿಯೋ 8.3 ಮಿಲಿಯನ್ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಈ ಇಬ್ಬರ ಬಾಂಧವ್ಯವನ್ನು ಕಂಡು ನೆಟ್ಟಿಗರು ಭಾವುಕರಾಗಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ