Viral Video: ರೈಲಿನಲ್ಲಿ ಮಲಗಿಕೊಂಡು ಪ್ರೇಮಿಗಳಿಬ್ಬರ ರೊಮಾನ್ಸ್, ಮುಜುಗರಕ್ಕೊಳಗಾದ ಸಹ ಪ್ರಯಾಣಿಕರು

ಕೆಲವೊಂದು ಪ್ರೇಮಪಕ್ಷಿಗಳು ಸಾರ್ವಜನಿಕ ಸ್ಥಳಗಳಲ್ಲಿ ತೋರುವ ಅಸಭ್ಯ ವರ್ತನೆ ಇತರರನ್ನು ಮುಜುಗರಕ್ಕೊಳಪಡಿಸುತ್ತವೆ. ಇಂತಹ ಕೆಲವೊಂದು ಸುದ್ದಿಗಳು ಆಗಾಗ್ಗೆ ಕೇಳಿಬರುತ್ತಿರುತ್ತವೆ. ಇದೀಗ ಅಂತಹದೇ ಸುದ್ದಿಯೊಂದು ವೈರಲ್‌ ಆಗಿದ್ದು, ರೈಲಿನಲ್ಲಿ ಪ್ರೇಮಿಗಳಿಬ್ಬರ ಸರಸ ಸಲ್ಲಾಪ  ಸಹ ಪ್ರಯಾಣಿಕರಲ್ಲಿ ಇರಿಸು ಮುರಿಸು ತರಿಸಿದೆ.  ಈ ವಿಡಿಯೋ ಇದೀಗ ವೈರಲ್‌ ಆಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಇವರುಗಳ ಎಲ್ಲೆ ಮೀರಿದ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

Viral Video: ರೈಲಿನಲ್ಲಿ ಮಲಗಿಕೊಂಡು ಪ್ರೇಮಿಗಳಿಬ್ಬರ ರೊಮಾನ್ಸ್, ಮುಜುಗರಕ್ಕೊಳಗಾದ ಸಹ ಪ್ರಯಾಣಿಕರು
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 13, 2024 | 10:08 AM

ಪ್ರೀತಿ ಕುರುಡು ನಿಜ. ಆದ್ರೆ ಕೆಲವೊಂದು ವಿಚಾರದಲ್ಲಿ ಪ್ರೇಮಿಗಳು ಕುರುಡುತನ ತೋರಿದ್ರೆ ಸಾರ್ವಜನಿಕರಿಂದ ಧರ್ಮದೇಟು ಬೀಳುವುದಂತು ಪಕ್ಕಾ. ಏಕೆಂದ್ರೆ ಬಸ್‌, ಟ್ರೈನ್‌, ಮೆಟ್ರೋ, ಪಾರ್ಕ್‌ ಇತ್ಯಾದಿ ಸಾರ್ವಜನಿಕ ಸ್ಥಳಗಳಲ್ಲಿ ಕೆಲವೊಂದು ಎಲ್ಲೆ ಮೀರಿದ ಪ್ರೇಮಿಗಳು ಅಸಭ್ಯವಾಗಿ ವರ್ತಿಸುತ್ತಿರುತ್ತಾರೆ. ಇಂತಹ ಅನುಚಿತ ವರ್ತನೆಗಳು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗುತ್ತವೆ.  ಇತ್ತೀಚಿಗಂತೂ ಇಂತಹ ಕೆಲವೊಂದು ಸುದ್ದಿಗಳು ಆಗಾಗ್ಗೆ ಕೇಳಿಬರುತ್ತಿರುತ್ತವೆ. ಇದೀಗ ಅಂತಹದೇ ಸುದ್ದಿಯೊಂದು ವೈರಲ್‌ ಆಗಿದ್ದು, ಪ್ರೇಮಿಗಳಿಬ್ಬರು ರೈಲಿನಲ್ಲಿ ರೊಮ್ಯಾನ್ಸ್‌ ಮಾಡಿ ಸಹ ಪ್ರಯಾಣಿಕರಿಗೆ ಮುಜುಗರ ಉಂಟುಮಾಡಿದ್ದಾರೆ. ಈ ವಿಡಿಯೋ ಇದೀಗ ವೈರಲ್‌ ಆಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಇವರುಗಳ ಎಲ್ಲೆ ಮೀರಿದ ವರ್ತನೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಇತ್ತೀಚಿಗೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರೇಮಿಗಳ ಸರಸ ಸಲ್ಲಾಪದ ಸುದ್ದಿಗಳು ಹೆಚ್ಚಾಗಿ ಕೇಳಿ ಬರುತ್ತಿದೆ. ಇದೀಗ ಅಂಹತದೇ ಘಟನೆಯೊಂದು ನಡೆದಿದ್ದು, ಲೋಕದ ಅರಿವೇ ಇಲ್ಲದೆ ಪ್ರೇಮಿಗಳಿಬ್ಬರು ರೈಲಿನಲ್ಲಿ ಸರಸ ಸಲ್ಲಾಪದಲ್ಲಿ ತೊಡಗಿದ್ದಾರೆ. ಈ ವಿಡಿಯೋವನ್ನು HasnaZarurihai ಎಂಬ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಓಯೋ ಸೌಲಭ್ಯವು ಈಗ ಭಾರತೀಯ ರೈಲ್ವಯಲ್ಲಿಯೂ ಲಭ್ಯವಿದೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್‌ ವಿಡಿಯೋದಲ್ಲಿ ರೈಲಿನಲ್ಲಿ ಪ್ರೇಮಿಗಳಿಬ್ಬರು ರೊಮ್ಯಾನ್ಸ್‌ ಮಾಡುತ್ತಾ ಅಸಭ್ಯವಾಗಿ ವರ್ತಿಸುತ್ತಿರುವ ದೃಶ್ಯವನ್ನು ಕಾಣಬಹುದು. ಪ್ರೇಮಿಗಳಿಬ್ಬರು ರೈಲಿನ ಸ್ಲೀಪಿಂಗ್‌ ಕೋಚ್‌ ಅಲ್ಲಿ ಒಂದೇ ಸೀಟ್‌ ಅಲ್ಲಿ ಮಲಗಿ ಲೋಕದ ಅರಿವೇ ಇಲ್ಲದೆ ಲವ್ವಿ ಡವ್ವಿ ಶುರು ಹಚ್ಚಿಕೊಂಡಿದ್ದಾರೆ. ಆ ಸಂದರ್ಭದಲ್ಲಿ ಟಿಕೆಟ್‌ ಚೆಕ್ಕಿಂಗ್‌ಗೆಂದು ಬಂದ ಟಿಸಿ ಕೂಡಾ ಇವರ ಈ ನಡೆಗೆ ಮುಜುಗರಕ್ಕೊಳಗಾಗಿದ್ದಾರೆ. ಆದ್ರೂ ಕೂಡಾ ಈ ಪ್ರೇಮ ಪಕ್ಷಿಗಳು ಅಸಭ್ಯವಾಗಿ ವರ್ತಿಸುವುದನ್ನು ನಿಲ್ಲಿಸಲೇ ಇಲ್ಲ.

ಇದನ್ನೂ ಓದಿ: ಮುತ್ತಾತ-ಮರಿಮೊಮ್ಮಗನ ಅಪೂರ್ವ ಸಂಗಮ, ವೈರಲ್‌ ಆಯ್ತು ನಿಷ್ಕಲ್ಮಶ ಬಾಂಧವ್ಯದ ವಿಡಿಯೋ

ಜೂನ್‌ 11 ರಂದು ಹಂಚಿಕೊಳ್ಳಲಾದ ಈ ವಿಡಿಯೋ 3 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಹೀಗೆ ಅಸಭ್ಯವಾಗಿ ವರ್ತಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಯತ್ನಾಳ್ ದೂರು ನೀಡಿದರೆ ವಿಜಯೇಂದ್ರ ವಿರುದ್ಧ ತನಿಖೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
14 ತಿಂಗಳುಗಳ ಬಳಿಕ ಮೊಹಮ್ಮದ್ ಶಮಿ ಎಂಟ್ರಿ: ವಿಡಿಯೋ ಹಂಚಿಕೊಂಡ ಬಿಸಿಸಿಐ
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ