Viral: ಬಿಯರ್ ಕ್ಯಾನ್‌ನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಮುದ್ರಿಸಿದ ಮದ್ಯ ಕಂಪನಿ; ವ್ಯಕ್ತವಾಯಿತು ಭಾರಿ ಆಕ್ರೋಶ
ದೇಶವನ್ನು ಬ್ರಿಟೀಷರ ದಾಸ್ಯದಿಂದ ಮುಕ್ತಗೊಳಿಸುವುದರ ಜೊತೆಗೆ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದವರು ಗಾಂಧೀಜಿ. ಆದ್ರೆ ಇಲ್ಲೊಂದು ಮದ್ಯ ಕಂಪೆನಿ ತನ್ನ ಬಿಯರ್ ಕ್ಯಾನ್‌ಗಳಲ್ಲಿ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದ ಗಾಂಧೀಜಿಯವರ ಫೋಟೋವನ್ನು ಪ್ರಿಂಟ್ ಮಾಡಿಸಿದ್ದು, ಈ ಕುರಿತ ವಿಡಿಯೋವೊಂದು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ಬಿಯರ್ ಕ್ಯಾನ್‌ನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಕಂಡು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬ್ರಿಟೀಷರ ದಾಸ್ಯದಿಂದ ದೇಶವವನ್ನು ಮುಕ್ತಗೊಳಿಸುವುದರ ಜೊತೆಗೆ ಪ್ರತಿಯೊಂದು ಕುಟುಂಬದ ಉತ್ತಮ ಬದುಕಿಗಾಗಿ ಮದ್ಯಪಾನ ಮತ್ತು ಮಾದಕ ದ್ರವ್ಯಗಳ ನಿಷೇಧ ಮಾಡಲು ದೊಡ್ಡ ಆಂದೋಲನವನ್ನೇ ಮಾಡಿದವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ. ಆದ್ರೆ ಇದೀಗ ಗಾಂಧೀಜಿಯವರಿಗೆ ಅವಮಾನ ಮಾಡುವಂತಹ ಘಟನೆಯೊಂದು ನಡೆದಿದೆ. ಹೌದು ಇಲ್ಲೊಂದು ಮದ್ಯ ಕಂಪೆನಿ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದ ಗಾಂಧೀಜಿ ಅವರ ಭಾವಚಿತ್ರವನ್ನೇ ಬಿಯರ್ ಕ್ಯಾನ್‌ನಲ್ಲಿ ಪ್ರಿಂಟ್ ಮಾಡಿಸಿದೆ. ಈ ಕುರಿತ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದೆ.
ರಷ್ಯಾದ ಬಿಯರ್ ಕ್ಯಾನ್‌ನಲ್ಲಿ ಮಹಾತ್ಮ ಗಾಂಧಿಯವರ ಚಿತ್ರವನ್ನು ಪ್ರಿಂಟ್ ಮಾಡಿಸಿದ್ದು, ಇದೀಗ ಈ ವಿಷಯ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ವಿವಾದವನ್ನು ಹುಟ್ಟುಹಾಕಿದೆ. ವರದಿಗಳ ಪ್ರಕಾರ, ರೆವರ್ಟ್ ಬ್ರಾಂಡ್‌ನ ಹೇಜಿ ಐಪಿಎ ಬಿಯರ್ ಕ್ಯಾನ್‌ಗಳಲ್ಲಿ ಗಾಂಧಿಯವರ ಫೋಟೋ ಮತ್ತು ಸಹಿಯನ್ನು ಮುದ್ರಿಸಲಾಗಿದೆ. ಈ ಬಿಯರ್ ಕ್ಯಾನ್ ಫೋಟೋ ಭಾರೀ ವೈರಲ್ ಆಗಿದ್ದು, ಮದ್ಯ ಮುಕ್ತ ಸಮಾಜದ ಕನಸು ಕಂಡ ಗಾಂಧೀಜಿಯವರಿಗೆ ಮಾಡಿದ ಅವಮಾನವಿದು ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಮೊದಲಲ್ಲ ಈ ಹಿಂದೆ ಅಮೆರಿಕಾದ ಕಂಪೆನಿಯೊಂದು ತಮ್ಮ ಬಿಯರ್ ಬಾಟಲ್‌ಗಳ ಮೇಲೆ ಗಾಂಧೀಜಿ ಭಾವಚಿತ್ರವನ್ನು ಮುದ್ರಿಸಿತ್ತು. ಈ ಬಗ್ಗೆ ಹೈದರಾಬಾದ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ ನಂತರ ಅಮೆರಿಕದ ಕಂಪನಿ ತನ್ನ ಬಿಯರ್ ಉತ್ಪನ್ನಗಳಿಂದ ಗಾಂಧಿಯವರ ಚಿತ್ರವನ್ನು ತೆಗೆದುಹಾಕಿ ಕ್ಷಮೆಯಾಚಿಸಿತ್ತು.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
View this post on Instagram
ಈ ಕುರಿತ ವಿಡಿಯೋವನ್ನು guruji4legends ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾಗಿದೆ. ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಯುವಕರಿಬ್ಬರು ಗಾಂಧೀಜಿ ಭಾವಚಿತ್ರ ಹಾಗೂ ಅವರ ಸಹಿ ಇರುವ ಬಿಯರ್ ಕ್ಯಾನ್‌ನಗಳನ್ನು ಕೈಯಲ್ಲಿ ಹಿಡಿದಿರುವಂತಹ ದೃಶ್ಯವನ್ನು ಕಾಣಬಹುದು.
ಇದನ್ನೂ ಓದಿ: ಹಸು, ಎಮ್ಮೆಯ ಹಾಲಿಗಿಂತ ಮೂರು ಪಟ್ಟು ಉತ್ತಮವಂತೆ ಜಿರಳೆ ಹಾಲು!
ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 7.6 ಮಿಲಿಯನ್ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದು ರಾಷ್ಟ್ರಪಿತನಿಗೆ ಮಾಡಿದ ಅವಮಾನ, ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲೇಬೇಕುʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದೆಂಥಾ ಅವಮಾನʼ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




