AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video : ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಂಡ ಗೈಡ್​, ಕೋಪಗೊಂಡ ನೆಟ್ಟಿಗರು

Selfie with Leopard : ಎಂಥ ಅಪಾಯಕಾರಿ ವಿಡಿಯೋ ಇದು ಅಂತ ಕೆಲವರು, ಈತನ ಶೌರ್ಯ ಮೆಚ್ಚಲೇಬೇಕು ಅಂತ ಇನ್ನೂ ಕೆಲವರು. ಏನಂತೀರಿ ನೀವಿದಕ್ಕೆ?

Viral Video : ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಂಡ ಗೈಡ್​, ಕೋಪಗೊಂಡ ನೆಟ್ಟಿಗರು
ಚಿರತೆಯೊಂದಿಗೆ ಸೆಲ್ಫೀ ತೆಗೆದುಕೊಳ್ಳುತ್ತಿರುವ ಸಫಾರಿ ಗೈಡ್
TV9 Web
| Edited By: ಶ್ರೀದೇವಿ ಕಳಸದ|

Updated on: Sep 24, 2022 | 10:20 AM

Share

Viral Video : ಅಳಿವಿನಂಚಿನಲ್ಲಿರುವ ಚಿರತೆಗಳ ವಿಷಯ ಕಳೆದ ಕೆಲ ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ  ಚರ್ಚೆಯಲ್ಲಿದೆ. ಹೀಗಿರುವಾಗಲೇ ಚಿರತೆಯ ವಿಡಿಯೋ ಒಂದು ನೆಟ್ಟಿಗರ ಗಮನ ಸೆಳೆದಿದೆ. ಐಎಫ್‌ಎಸ್ ಅಧಿಕಾರಿ ಕ್ಲೆಮೆಂಟ್ ಬೆನ್ ಟ್ವಿಟರ್‌ನಲ್ಲಿ ಈ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಾಹನ ಕಾಡಿನಲ್ಲಿ ಸಫಾರಿಗೆ ಹೊರಟಿದೆ. ಇದರ ತುಂಬಾ ಪ್ರವಾಸಿಗರಿದ್ಧಾರೆ. ಮಧ್ಯೆ  ಚಿರತೆಯೊಂದು ಅಡ್ಡ ಬರುತ್ತದೆ. ಕೆಲ ಸೆಕೆಂಡುಗಳಲ್ಲಿ ವಾಹನದ ಮೇಲೆ ಹಾರುತ್ತದೆ ಚಿರತೆ. ಪ್ರವಾಸಿಗರು ಭಯಭೀತರಾಗುತ್ತಾರೆ. ಸನ್​ ರೂಫ್​ನಿಂದ ಇಣುಕಿದಾಗಲಂತೂ ಜೀವವೇ ಬಾಯಿಗೆ ಬಂದಂತಾಗುತ್ತದೆ. ಅಂಥದ್ದರಲ್ಲಿ ಸಫಾರಿ ಗೈಡ್​ ಎದ್ದುನಿಂತು ಚಿರತೆಯೊಂದಿಗೆ ಸೆಲ್ಫಿ ತೆಗೆದುಕೊಳ್ಳಲಾರಂಭಿಸುತ್ತಾನೆ.

ನೋಡಿದ ಯಾರಿಗೂ ಇದು ಎಂಥ ಅಪಾಯಕಾರಿ ಸ್ಥಿತಿ ಅನ್ನಿಸದೇ ಇರದು. ಇನ್ನು ಹೀಗೆ ವಾಹನಗಳನ್ನು ಏರಿದ ಚಿರತೆಗಳು ಕೆಳಗಿಳಿಯಲು ಸಾಮಾನ್ಯವಾಗಿ ಸಾಕಷ್ಟು ಸಮಯವನ್ನು ತೆಗೆದುಕೊಳ್ಳುತ್ತವೆ. ಆದರೆ ಇಲ್ಲಿ ಈ ಚಿರತೆ ಎಷ್ಟು ಸಮಯ ತೆಗೆದುಕೊಂಡಿತು ಎನ್ನುವುದು ತಿಳಿದುಬಂದಿಲ್ಲ. ಸೆಲ್ಫೀ ತೆಗೆದುಕೊಂಡ ನಂತರ ಈ ವಿಡಿಯೋ ಥಟ್ಟನೆ ಮುಗಿದುಬಿಡುತ್ತದೆ.  78,000ಕ್ಕೂ ಹೆಚ್ಚು ವೀಕ್ಷಣೆಗಳನ್ನು ಮತ್ತು ಅನೇಕ ರೀತಿಯ ಪ್ರತಿಕ್ರಿಯೆಗಳನ್ನು ಈ ವಿಡಿಯೋ ಪಡೆದಿದೆ.

ಸಫಾರಿ ಗೈಡ್​ನ ಶೌರ್ಯಕ್ಕೆ ನೆಟ್ಟಿಗರು ಬೆರಗಾಗಿದ್ದಾರಾದರೂ ಬಹಳಷ್ಟು ಜನರು ಈ ನಡೆ ಅಪಾಯಕಾರಿ ಎಂದಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?