ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ಗೆ ದೃಷ್ಟಿ ತೆಗೆದು ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸಿದ ಜೋಗತಿ ಮಂಜಮ್ಮ; ವಿಡಿಯೋ ಫುಲ್ ವೈರಲ್
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಕೈಯಿಂದ ಪ್ರಶಸ್ತಿಯನ್ನು ಪಡೆಯುವ ಮೊದಲು ಜೋಗತಿ ಮಂಜಮ್ಮ ರಾಷ್ಟ್ರಪತಿಗೆ ದೃಷ್ಟಿ ತೆಗೆದಿದ್ದಾರೆ. ಸದ್ಯ ಈ ದೃಶ್ಯ ವೈರಲ್ ಆಗಿದೆ.
ಜಾನಪದ ಕ್ಷೇತ್ರಕ್ಕೆ ಕೊಡುಗೆ ನೀಡಿರುವ ಜೋಗತಿ ಮಂಜಮ್ಮ (Jogati Manjamma) ಪದ್ಮಶ್ರೀ ಪ್ರಶಸ್ತಿಯನ್ನು (Padma Shri Award) ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರ ಕೈಯಿಂದ ಪ್ರಶಸ್ತಿಯನ್ನು ಪಡೆಯುವ ಮೊದಲು ಜೋಗತಿ ಮಂಜಮ್ಮ ರಾಷ್ಟ್ರಪತಿಗೆ ದೃಷ್ಟಿ ತೆಗೆದಿದ್ದಾರೆ. ಜೋಗತಿ ಮಂಜಮ್ಮ ರಾಷ್ಟ್ರಪತಿ ಕೈಯಿಂದ ಪ್ರಶಸ್ತಿಯನ್ನು ಸ್ವೀಕರಿಸುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿದೆ.
ಕರ್ನಾಟಕ ಜಾನಪದ ಅಕಾಡೆಮಿಯ ಮೊದಲ ತೃತೀಯ ಲಿಂಗಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರು ಜಾನಪದ ಕ್ಷೇತ್ರದಲ್ಲಿ ಸಾಧನೆಗೈದಿದ್ದಾರೆ. ಇವರ ಕೊಡುಗೆಯನ್ನು ಗುರುತಿಸಿ ಮಂಗಳವಾರ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಮಂಜಮ್ಮ ಜೋಗತಿಯವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಪಡೆಯುವ ಮುನ್ನಾ ರಾಷ್ಟ್ರಪತಿ ಬಳಿ ಹೋದ ಮಂಜಮ್ಮ ತನ್ನ ಸೀರೆ ಸರಗಿನಿಂದ ರಾಮ್ ನಾಥ್ ಕೋವಿಂದ್ಗೆ ದೃಷ್ಟಿ ತೆಗೆದಿದ್ದಾರೆ.
ರಾಮ್ ನಾಥ್ ಕೋವಿಂದ್ಗೆ ಮಂಜಮ್ಮ ಜೋಗತಿ ಅವರು ದೃಷ್ಟಿ ತೆಗೆಯುತ್ತಿದ್ದಂತೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇತರರು ಜೋರಾಗಿ ಚಪ್ಪಾಳೆ ತಟ್ಟಿದರು.
#WATCH | Transgender folk dancer of Jogamma heritage and the first transwoman President of Karnataka Janapada Academy, Matha B Manjamma Jogati receives the Padma Shri award from President Ram Nath Kovind. pic.twitter.com/SNzp9aFkre
— ANI (@ANI) November 9, 2021
ಜೋಗತಿ ಮಂಜಮ್ಮ ಬಗ್ಗೆ ಜೋಗತಿ ಮಂಜಮ್ಮ ಜಾನಪದ ನೃತ್ಯಗಾರ್ತಿ. ಜೋಗತಿ ನೃತ್ಯ, ಜನಪದ ಹಾಡುಗಳು ಸೇರಿದಂತೆ ಹಲವಾರು ಕಲಾ ಪ್ರಕಾರಗಳನ್ನು ಕರಗತ ಮಾಡಿಕೊಂಡಿದ್ದಾರೆ. ಬಳ್ಳಾರಿ ಸಮೀಪದ ಹಳ್ಳಿಯೊಂದರಲ್ಲಿ ಮಂಜುನಾಥ ಶೆಟ್ಟಿಯಾಗಿ ಜನಿಸಿದ ಜೋಗತಿ ಮಂಜಮ್ಮ 10ನೇ ತರಗತಿ ಬಳಿಕ ಹೆಣ್ಣಾಗಿ ಗುರುತಿಸಿಕೊಳ್ಳುತ್ತಾರೆ. ಸಮಾಜದಲ್ಲಿ ಹತ್ತು ಹಲವು ಸವಾಲುಗಳನ್ನು ಎದುರಿಸಿದ ಸಾಧಿಸಿದ ಮಂಜಮ್ಮನವರಿಗೆ ಹಲವು ಪ್ರಶಸ್ತಿಗಳು ಲಭಿಸಿವೆ. ಜಾನಪದ ಕ್ಷೇತ್ರಕ್ಕೆ ಇವರ ಕೊಡುಗೆಯನ್ನು ಗುರುತಿಸಿ ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷೆಯರನ್ನಾಗಿ ಮಾಡಲಾಗಿದೆ.
ಇದನ್ನೂ ಓದಿ
Viral Video: ಮದುವೆ ದಿನ ಅಪ್ಪನ ಜೊತೆಗೆ ವೇದಿಕೆಯ ಮೇಲೆ ಕುಣಿದ ಮಗಳು; ಹೃದಯಸ್ಪರ್ಶಿ ವಿಡಿಯೊ ವೈರಲ್
Published On - 1:00 pm, Wed, 10 November 21