‘ಇದು ಮದರಸಾ ಅಲ್ಲ, ಕಾಲೇಜು’ ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು ಹೊರದಬ್ಬಿದ ಪ್ರಾಂಶುಪಾಲ

"ಇದು ಮದರಸಾ ಅಲ್ಲ,ಕಾಲೇಜು. ಯಾವುದೇ ಪಂಗಡದ ಮಗುವಾಗಿದ್ದರೂ ಗಡ್ಡ ಬೆಳೆಸಿ ವಿದ್ಯಾಸಂಸ್ಥೆಗೆ ಬರಬಾರದು" ಎಂದು ಪ್ರಾಂಶುಪಾಲರು ಹೇಳಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿಯ ಹಿರಿಯ ಸಹೋದರ ಜಾತಿ ಆಧಾರದ ಮೇಲೆ ನಿಂದಿಸಿದ್ದಾರೆ ಎಂದು ಪ್ರಾಂಶುಪಾಲರ ವಿರುದ್ಧ ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯಮಂತ್ರಿ ಪೋರ್ಟಲ್‌ಗೆ ದೂರು ನೀಡಿದ್ದಾರೆ.

'ಇದು ಮದರಸಾ ಅಲ್ಲ, ಕಾಲೇಜು'  ಗಡ್ಡ ಬಿಟ್ಟ ವಿದ್ಯಾರ್ಥಿಯನ್ನು  ಹೊರದಬ್ಬಿದ ಪ್ರಾಂಶುಪಾಲ
ಸಾಂದರ್ಭಿಕ ಚಿತ್ರ
Follow us
ಅಕ್ಷತಾ ವರ್ಕಾಡಿ
|

Updated on: Aug 03, 2024 | 5:32 PM

ಉತ್ತರಪ್ರದೇಶ: ವಿದ್ಯಾರ್ಥಿಯೊಬ್ಬ ಗಡ್ಡ ಬಿಟ್ಟುಕೊಂಡು ಕಾಲೇಜಿಗೆ ಬಂದಿದ್ದಕ್ಕೆ ಆತನನ್ನು ಕಾಲೇಜಿನಿಂದ ಪ್ರಾಂಶುಪಾಲರು ಹೊರಹಾಕಿರುವ ಘಟನೆ ಉತ್ತರಪ್ರದೇಶದ ಬರೇಲಿಯಲ್ಲಿ ನಡೆದಿದೆ. ಇದಲ್ಲದೇ ವಿದ್ಯಾರ್ಥಿಯನ್ನು ಜಾತಿ ಆಧಾರದ ಮೇಲೆ ಅಂದರೆ ‘ಇದು ಮದರಸಾ ಅಲ್ಲ, ಕಾಲೇಜು’ ಎಂದು ನಿಂದಿಸಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಪ್ರಕರಣದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೀಗ ವಿದ್ಯಾರ್ಥಿಯ ಹಿರಿಯ ಸಹೋದರ ಪ್ರಾಂಶುಪಾಲರ ವಿರುದ್ಧ ಬರೇಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಮುಖ್ಯಮಂತ್ರಿ ಪೋರ್ಟಲ್‌ಗೆ ದೂರು ನೀಡಿದ್ದಾರೆ.

ಆಜಾದ್ ನೌರಂಗ್ ಇಂಟರ್ ಕಾಲೇಜ್ ಸೈಂಥಲ್ ನಲ್ಲಿ ವಿದ್ಯಾರ್ಥಿ ಫರ್ಮಾನ್ ಅಲಿ ಓದುತ್ತಿದ್ದು, ಕೆಲ ದಿನಗಳ ಹಿಂದೆ ಫರ್ಮಾನ್ ಅಲಿಗೆ ಗಡ್ಡ ಬೋಳಿಸಿಕೊಂಡು ಬರುವಂತೆ ಪ್ರಾಂಶುಪಾಲರು ಹೇಳಿದ್ದಾರೆ. ಆದರೆ ಗಡ್ಡ ಬೋಳಿಸಿಕೊಂಡಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿ ಫರ್ಮಾನ್ ಅಲಿಗೆ ಶಾಲೆಗೆ ಬರದಂತೆ ಪ್ರಾಂಶುಪಾಲರು ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರಸ್ತೆಯುದ್ದಕ್ಕೂ ಲಿಪ್ ಕಿಸ್​​ ಮಾಡುತ್ತಾ ಬೈಕಿನಲ್ಲಿ ಜಾಲಿ ರೈಡ್​​​ ಹೊರಟ ಜೋಡಿ; ವಿಡಿಯೋ ವೈರಲ್​​​​

“ಇದು ಮದರಸಾ ಅಲ್ಲ,ಕಾಲೇಜು. ಯಾವುದೇ ಪಂಗಡದ ಮಗುವಾಗಿದ್ದರೂ ಗಡ್ಡ ಬೆಳೆಸಿ ಶಾಲೆಗೆ ಬರಬಾರದು ಎಂಬ ಸರ್ಕಾರಿ ಆದೇಶವಿದೆ” ಎಂದು ಪ್ರಾಂಶುಪಾಲರು ಹೇಳಿದ್ದರು. ಇದರಿಂದ ಕೋಪಗೊಂಡ ವಿದ್ಯಾರ್ಥಿಯ ಸಹೋದರ “ಇಂಟರ್ ಕಾಲೇಜಿನ ಪ್ರಾಂಶುಪಾಲ ಹುದ್ದೆಯಲ್ಲಿರುವ ರಾಮ್ ಅಚಲ್ ಖಾರ್ವಾರ್ ಅವರ ಈ ನಡವಳಿಕೆ ತಾರತಮ್ಯ ಮತ್ತು ಸಾಮಾಜಿಕ ಸಾಮರಸ್ಯವನ್ನು ಹದಗೆಡಿಸುತ್ತದೆ” ಎಂದು ಇಡೀ ವಿಷಯದ ಬಗ್ಗೆ ಡಿಎಂ ಮತ್ತು ಮುಖ್ಯಮಂತ್ರಿ ಪೋರ್ಟಲ್‌ನಲ್ಲಿ ದೂರು ನೀಡಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್