Tamil Nadu: ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ನೂಡಲ್ಸ್ ತಿಂದು ಬಾಲಕಿ ಸಾವು

|

Updated on: Sep 03, 2024 | 6:07 PM

ರಾತ್ರಿ ನೂಡಲ್ಸ್ ತಿಂದು ಮಲಗಿದ ಬಾಲಕಿ ಮರುದಿನ ಬೆಳಗ್ಗೆ ಬಹಳ ಹೊತ್ತಾದರೂ ಏಳಲಿಲ್ಲ ಎನ್ನಲಾಗಿದೆ. ಇದಾದ ಬಳಿಕ ಪೋಷಕರು ಕೂಡಲೇ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಈ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ.

Tamil Nadu: ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ನೂಡಲ್ಸ್  ತಿಂದು ಬಾಲಕಿ ಸಾವು
Follow us on

ತಮಿಳುನಾಡು: ಆನ್ ಲೈನ್ ನಲ್ಲಿ ನೂಡಲ್ಸ್ ಖರೀದಿಸಿ ತಿಂದು ಬಾಲಕಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ತಿರುಚ್ಚಿಯಲ್ಲಿ ನಡೆದಿದೆ. ತಿರುಚ್ಚಿಯ ತಿರುವೆರುಂಪುರ್ ಮೂಲದ ಸ್ಟೆಫಿ ಜಾಕ್ವೆಲಿನ್ (15) ಮೃತ ಬಾಲಕಿ. ಮಗಳಿಗೆ ನೂಡಲ್ಸ್​​ ಇಷ್ಟವೆಂದು ಬಾಲಕಿಯ ತಾಯಿ ಕಳೆದ ಶನಿವಾರ ರಾತ್ರಿ ಆನ್‌ಲೈನ್‌ನಲ್ಲಿ ಮಸಾಲೆಯುಕ್ತ ನೂಡಲ್ಸ್ ಅನ್ನು ಆರ್ಡರ್ ಮಾಡಿದ್ದರು. ರಾತ್ರಿ ನೂಡಲ್ಸ್ ತಿಂದು ಮಲಗಿದ ಬಾಲಕಿ ಮರುದಿನ ಬೆಳಗ್ಗೆ ಬಹಳ ಹೊತ್ತಾದರೂ ಏಳಲಿಲ್ಲ ಎನ್ನಲಾಗಿದೆ. ಇದಾದ ಬಳಿಕ ಪೋಷಕರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆದರೆ ವೈದ್ಯರು ಬಾಲಕಿ ಅದಾಗಲೇ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಘಟನೆ ಕುರಿತು ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಮಾಹಿತಿ ಪಡೆದ ನಂತರ ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ತಿರುಚ್ಚಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ವೇಳೆ ನೂಡಲ್ಸ್ ತಿಂದ ನಂತರ ಬಾಲಕಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಇದನ್ನು ಆರೋಗ್ಯ ಸಚಿವ ಎಂ.ಸುಬ್ರಮಣಿಯನ್ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: Richest Cat: ಇನ್ಸ್ಟಾಗ್ರಾಮ್​​ನಲ್ಲಿ ಪ್ರತೀ ಪೋಸ್ಟ್​​ಗೆ 12ಲಕ್ಷ ರೂ. ಪಡೆಯುವ ವಿಶ್ವದ ಶ್ರೀಮಂತ ಬೆಕ್ಕು

ಇತ್ತೀಚಿನ ದಿನಗಳಲ್ಲಿ, ನೂಡಲ್ಸ್ ಅನ್ನು ಮಕ್ಕಳಿಂದ ಹಿಡಿದು ಹಿರಿಯರ ವರೆಗೂ ಎಲ್ಲರೂ ಇಷ್ಟಪಡುತ್ತಾರೆ. ಇದನ್ನು ಹೆಚ್ಚಾಗಿ ಸೇವಿಸುವುದರಿಂದ ಜೀವಕ್ಕೆ ಅಪಾಯವಾಗುತ್ತದೆ. ಏಕೆಂದರೆ ಈ ನೂಡಲ್ಸ್ ಯಾವುದೇ ಪೋಷಕಾಂಶಗಳನ್ನು ಹೊಂದಿರುವುದಿಲ್ಲ. ಇದರಲ್ಲಿ ಸೋಡಿಯಂ ಅಧಿಕವಾಗಿದ್ದು, ಇದು ರಕ್ತದೊತ್ತಡವನ್ನು ಹೆಚ್ಚಿಸಿ ಜೀವಕ್ಕೆ ಅಪಾಯವನ್ನುಂಟುಮಾಡುತ್ತದೆ. ಆದ್ದರಿಂದ, ನೂಡಲ್ಸ್ ತಿನ್ನುವುದನ್ನು ತಪ್ಪಿಸಬೇಕು ಎಂದು ತಜ್ಞರು ಎಚ್ಚರಿಸುತ್ತಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Tue, 3 September 24