ಯೂನಿಫಾರಂ ಧರಿಸಿ ಬಸ್​ನೊಳಗೆ ಬಿಯರ್ ಕುಡಿದ ಶಾಲಾ ವಿದ್ಯಾರ್ಥಿಗಳ ವಿಡಿಯೋ ವೈರಲ್

ಈ ಘಟನೆ ಶಾಲೆಯ ಹೊರಗೆ ನಡೆದಿರುವುದರಿಂದ, ಪೊಲೀಸರು ಇದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆ ಮುಗಿದ ನಂತರ, ನಾವು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. 

ಯೂನಿಫಾರಂ ಧರಿಸಿ ಬಸ್​ನೊಳಗೆ ಬಿಯರ್ ಕುಡಿದ ಶಾಲಾ ವಿದ್ಯಾರ್ಥಿಗಳ ವಿಡಿಯೋ ವೈರಲ್
ಬಸ್​ನೊಳಗೆ ಬಿಯರ್ ಕುಡಿದ ವಿದ್ಯಾರ್ಥಿಗಳು
Follow us
| Updated By: ಸುಷ್ಮಾ ಚಕ್ರೆ

Updated on:Mar 24, 2022 | 4:16 PM

ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟು ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ಸಿನೊಳಗೆ ಶಾಲಾ ವಿದ್ಯಾರ್ಥಿಗಳು (School Students) ಆಲ್ಕೋಹಾಲ್ ಸೇವಿಸುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ (Social Media) ವೈರಲ್ ಆಗಿದೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್​ಲೋಡ್ ಮಾಡಲಾಗಿದ್ದು, ಅದೇ ಬಸ್​ನಲ್ಲಿದ್ದ ವಿದ್ಯಾರ್ಥಿಯೊಬ್ಬರು ಈ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ. ಶಾಲೆಯ ಯೂನಿಫಾರಂ ಧರಿಸಿ ಬಸ್​ನೊಳಗೆ ಹುಡುಗಿಯರು ಮತ್ತು ಹುಡುಗರ ಗುಂಪು ಬಿಯರ್ ಬಾಟಲಿಯನ್ನು ಓಪನ್ ಮಾಡಿ ಕುಡಿಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ರೀತಿ ಬಸ್​ನಲ್ಲಿ ಮದ್ಯ ಸೇವಿಸಿದ ಎಲ್ಲಾ ವಿದ್ಯಾರ್ಥಿಗಳು ಚೆಂಗಲ್ಪಟ್ಟುವಿನ ಸರ್ಕಾರಿ ಶಾಲೆಯವರು ಎನ್ನಲಾಗಿದೆ.

ಮೊದಲು ಇದು ಹಳೆಯ ವಿಡಿಯೋ ಎಂದು ಭಾವಿಸಲಾಗಿತ್ತು. ಆದರೆ, ಇದು ಮಂಗಳವಾರ ನಡೆದಿರುವ ಘಟನೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳು ತಮ್ಮ ಶಾಲಾ ಸಮವಸ್ತ್ರದಲ್ಲಿ ತಿರುಕಝುಕುಂದ್ರಂನಿಂದ ತಾಚೂರ್‌ಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಈ ಘಟನೆಯನ್ನು ಅಧಿಕಾರಿಗಳು ಗಮನಿಸಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ಈ ಘಟನೆ ಶಾಲೆಯ ಹೊರಗೆ ನಡೆದಿರುವುದರಿಂದ, ಪೊಲೀಸರು ಇದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆ ಮುಗಿದ ನಂತರ, ನಾವು ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.

ಇದಕ್ಕೂ ಮೊದಲು 2017ರಲ್ಲಿ ಕರ್ನಾಟಕದ ತುಮಕೂರು ಜಿಲ್ಲೆಯ ಸರ್ಕಾರಿ ಶಾಲೆಯೊಂದರ ಶಾಲಾ ಶಿಕ್ಷಕರು ಶಾಲಾ ಪ್ರವಾಸದ ವೇಳೆ ನೀರು ಕೇಳಿದಾಗ ವಿದ್ಯಾರ್ಥಿಗಳಿಗೆ ಮದ್ಯ ನೀಡಿದ್ದರು. ಆ ವಿದ್ಯಾರ್ಥಿಗಳು 8, 9 ಮತ್ತು 10ನೇ ತರಗತಿಯವರಾಗಿದ್ದು, ಶಾಲಾ ಮುಖ್ಯೋಪಾಧ್ಯಾಯರು ಮತ್ತು ಇಬ್ಬರು ಶಿಕ್ಷಕರು ಮದ್ಯ ಸೇವಿಸಿದ್ದರು. ಎಲ್ಲಾ ಮೂವರು ಆರೋಪಿ ಅಧ್ಯಾಪಕರನ್ನು ಅಮಾನತುಗೊಳಿಸಲಾಗಿತ್ತು.

ಇದನ್ನೂ ಓದಿ: Shocking News: ಹೆಂಡತಿ ಮಟನ್ ಕರಿ ಮಾಡದಿದ್ದಕ್ಕೆ 6 ಬಾರಿ ಪೊಲೀಸರಿಗೆ ಫೋನ್ ಮಾಡಿ ಕಾಟ ಕೊಟ್ಟ ಗಂಡ!

Shocking News: 5 ವರ್ಷಗಳಿಂದ ಅಪ್ಪ, ಅಣ್ಣ, ಅಜ್ಜನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!

Published On - 4:14 pm, Thu, 24 March 22

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್