ಅಯೋಧ್ಯೆಯಲ್ಲಿ ಮತ್ತೊಂದು ಪುಟ್ಟ ರಾಮಲಲ್ಲಾನ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್, ಫೋಟೋ ವೈರಲ್  

Small Ram Lalla Idol: ಸದ್ಯ ಸಾಮಾಜಿಕ ಜಾಲತಾಣದಲ್ಲಿ  ಪ್ರಸಿದ್ಧ ಶಿಲ್ಪಿ ಅರುಣ್ ಯೋಗಿರಾಜ್ ಅವರು  ಬಾಲರಾಮನ  ಪುಟ್ಟ  ಮೂರ್ತಿಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ  ವೈರಲ್ ಆಗುತ್ತಿದೆ. 

ಅಯೋಧ್ಯೆಯಲ್ಲಿ ಮತ್ತೊಂದು ಪುಟ್ಟ ರಾಮಲಲ್ಲಾನ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್, ಫೋಟೋ ವೈರಲ್  
ಪುಟ್ಟ ರಾಮಲಲ್ಲಾನ ವಿಗ್ರಹ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 25, 2024 | 11:55 AM

ಸುಮಾರು 500 ವರ್ಷಗಳ ಕಾಯುವಿಕೆಯ ಬಳಿಕ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಿದೆ. ಜನವರಿ ತಿಂಗಳಲ್ಲಿ ರಾಮ ಮಂದಿರದ ಲೋಕಾರ್ಪಣೆ ಕಾರ್ಯಕ್ರಮವೂ ಅದ್ಧೂರಿಯಾಗಿ ನೆರವೇರಿದೆ.  ಇನ್ನೂ ರಾಮ ಮಂದಿರದಲ್ಲಿ ವಿರಾಜಮಾನನಾಗಿರುವ ಬಾಲರಾಮನನನ್ನು ಕಾಣಲು ದೇಶದ ಮೂಲೆಮೂಲೆಯಿಂದ ಪ್ರತಿನಿತ್ಯ ಭಕ್ತರು ಅಯೋಧ್ಯೆಗೆ ಭೇಟಿ ನೀಡುತ್ತಿದ್ದಾರೆ.  ಅತ್ಯಂತ ಆಕರ್ಷಕವಾಗಿ ಮೂಡಿಬಂದಿರುವ ರಾಮಮಲ್ಲಾನ ವಿಗ್ರಹ ಕೆತ್ತನೆ ಮಾಡಿದವರು  ಕನ್ನಡಿಗ ಅರುಣ್ ಯೋಗಿರಾಜ್. ಈ ಮೂಲಕ ಇವರು ಜಗದ ಗನ ಸೆಳೆದಿದ್ದರು. ಇದೀಗ ಇವರು ಬಾಲರಾಮನ  ಪುಟ್ಟ ವಿಗ್ರಹವನ್ನು ಕೈಯಲ್ಲಿ ಹಿಡಿದು ನಿಂತಿರುವ ಫೋಟೊವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಶಿಲ್ಪಿ ಅರುಣ್ ಯೋಗಿರಾಜ್ ಈ ಹಿಂದೆ ರಾಮ ಲಲ್ಲಾ ವಿಗ್ರಹದ ಕಣ್ಣುಗಳನ್ನು ಕೆತ್ತಲು ಬಳಸಿದಂತಹ ಚಿನ್ನದ ಉಳಿ ಮತ್ತು ಬೆಳ್ಳಿಯ ಸುತ್ತಿಗೆ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದರು.  ಇದೀಗ ಅವರು ಪುಟ್ಟ ರಾಮಲಲ್ಲಾನನ ವಿಗ್ರಹವನ್ನು  ಕೈಯಲ್ಲಿ ಹಿಡಿದು ನಿಂತಿರುವ ಫೋಟೋವೊಂದನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಕನ್ನಡಿಗ ಅರುಣ್ ಯೋಗಿರಾಜ್ ಅಯೋಧ್ಯೆಯಲ್ಲಿಯೇ ಕೃಷ್ಣಶಿಲೆಯಿಂದ 51 ಇಂಚು ಎತ್ತರದ ರಾಮಲಲ್ಲಾ ವಿಗ್ರಹವನ್ನು ಕೆತ್ತನೆ ಮಾಡಿದ್ದರು. ಇದಾದ ಬಳಿಕ ಅಲ್ಲಿ  ಬಿಡುವಿನ ವೇಳೆಯಲ್ಲಿ ಇವರು ಮತ್ತೊಂದು ಪುಟ್ಟ ವಿಗ್ರಹವನ್ನು ಕೆತ್ತನೆ ಮಾಡಿದ್ದಾರೆ. ಈ ಫೋಟೋವನ್ನು ಇದೀಗ ಅವರು ತಮ್ಮ ಅಧೀಕೃತ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದು, “ನಾನು ಕೆತ್ತನೆ ಮಾಡಿದಂತಹ ಬಾಲರಾಮನ ಮೂರ್ತಿ ಆಯ್ಕೆಯಾದ ನಂತರ,  ಆಯೋಧ್ಯೆಯಲ್ಲಿ ನಾನು ಬಿಡುವಿನ ವೇಳೆಯಲ್ಲಿ ಮತ್ತೊಂದು  ರಾಮ ಲಲ್ಲಾನ ಪುಟ್ಟ ಮೂರ್ತಿಯನ್ನು ಕೆತ್ತಿದ್ದೇನೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ಫೋಟೋ ಇಲ್ಲಿದೆ:

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಫೋಟೋದಲ್ಲಿ ಶಿಲ್ಪಿ ಅರುಣ್ ಯೋಗಿರಾಜ್ ಅವರು  ಬಾಲರಾಮನ ಪುಟ್ಟ ಮೂರ್ತಿಯನ್ನು ತಮ್ಮ ಕೈಯಲ್ಲಿ ಹಿಡಿದು ನಿಂತಿರುವ ದೃಶ್ಯವನ್ನು ಕಾಣಬಹುದು. ಈ ಪುಟ್ಟ ಬಾಲರಾಮ ಮೂರ್ತಿ ಕೂಡ ಅದ್ಭುತವಾಗಿ ಮೂಡಿಬಂದಿದ್ದು, ನೆಟ್ಟಿಗರ ಗಮನ ಸೆಳೆದಿದೆ.

ಇದನ್ನೂ ಓದಿ; ಇಂದು ಹೋಳಿ; ಈ ಹಬ್ಬವನ್ನು ಏಕೆ ಆಚರಿಸಲಾಗುತ್ತದೆ?

ಮಾರ್ಚ್ 23 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ನಾಲ್ಕು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಈ ಮೂರ್ತಿಯೂ ಸಹ ತುಂಬಾನೇ ಅದ್ಭುತವಾಗಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼತುಂಬಾನೇ ಚೆನ್ನಾಗಿದೆ. ದಯಮಾಡಿ ಇದೇ ರೀತಿ ಶ್ರೀಕೃಷ್ಣನ ಮೂರ್ತಿಯನ್ನು ಸಹ ಕೆತ್ತನೆ ಮಾಡಿʼ ಎಂದು ಹೇಳಿದ್ದಾರೆ.  ಇನ್ನೂ ಅನೇಕರು ಕನ್ನಡಿಗ ಅರುಣ್ ಯೋಗಿರಾಜ್ ಅವರ ಕೈ ಚಳಕವನ್ನು ಕೊಂಡಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು