Viral Video: ನಡು ರಸ್ತೆಯಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ ಆಸಾಮಿ, ಇದಕ್ಕೆ ಟ್ರಾಫಿಕ್ ಕಾರಣ

ಪ್ರತಿನಿತ್ಯ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ಇದ್ದೇ ಇರುತ್ತದೆ. ಈ ಕಾರಣದಿಂದ ಜನರು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ ಟ್ರಾಫಿಕ್ ಕಾರಣದಿಂದ ಮೂತ್ರವನ್ನು ಹಿಡಿದಿಟ್ಟುಕೊಳ್ಳಲಾರದೆ ಕೊನೆಗೆ ಕಾರಿನಿಂದ ಕೆಳಗಿಳಿದು ಯಾವುದೇ ನಾಚಿಕೆಯಿಲ್ಲದೆ ಎಲ್ಲರ ಮುಂದೆ ನಡು ರಸ್ತೆಯಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ಕುರಿತ ವಿಡಿಯೋ ಇದೀಗ ವೈರಲ್ ಆಗಿದ್ದು, ಟ್ರಾಫಿಕ್ ಕಾರಣದಿಂದ ಜನರು ಎಂತೆಂತಹ ಸಮಸ್ಯೆಗಳನ್ನೆಲ್ಲಾ ಎದುರಿಸಬೇಕಾಗುತ್ತದೆ ಅಲ್ವಾ ಅಂತ ನೆಟ್ಟಿಗರು ತಮಾಷೆ ಮಾಡಿದ್ದಾರೆ.  

Viral Video: ನಡು ರಸ್ತೆಯಲ್ಲಿಯೇ ಮೂತ್ರ ವಿಸರ್ಜನೆ ಮಾಡಿದ ಆಸಾಮಿ, ಇದಕ್ಕೆ ಟ್ರಾಫಿಕ್ ಕಾರಣ
ವೈರಲ್​​ ವಿಡಿಯೋ ಇಲ್ಲಿದೆ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 13, 2024 | 2:20 PM

ಇತ್ತೀಚಿನ ದಿನಗಳಲ್ಲಂತೂ ನಗರಗಳಲ್ಲಿ ಟ್ರಾಫಿಕ್ ಜಾಮ್ ದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಪ್ರತಿನಿತ್ಯ ಈ ಟ್ರಾಫಿಕ್ ಕಿರಿಕಿರಿ  ಇದ್ದೇ ಇರುತ್ತದೆ. ಈ ಟ್ರಾಫಿಕ್ ಜಾಮ್ ಕಾರಣದಿಂದ ಜನರು ಹಲವು ರೀತಿಯ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ.  ಕಚೇರಿ ಕೆಲಸಕ್ಕೆ ಹೋಗುವವರಂತೂ ಈ ಕಾರಣದಿಂದ ಬಾಸ್ ಕೈಯಿಂದ ಯಾವಾಗಲೂ ಬೈಗುಳ ತಿನ್ನುತ್ತಿರುತ್ತಾರೆ. ಹೀಗೆ ಹೆಚ್ಚಿನವರು ಟ್ರಾಫಿಕ್ ಜಾಮ್ ನಿಂದಾಗಿ ಒಂದಲ್ಲಾ ಒಂದು ಸಮಸ್ಯೆಯನ್ನು ಎದುರಿಸುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಬ ವ್ಯಕ್ತಿ ಕೂಡಾ  ಒಂದು ಸಮಸ್ಯೆಯಲ್ಲಿ ಸಿಕ್ಕಿ ಹಾಕಿಕೊಂಡಿದ್ದು, ಟ್ರಾಫಿಕ್ ಜಾಮ್ ಇನ್ನೂ ಎರಡು  ಗಂಟೆಯದರೂ ಸರಿಯುವ ಹಾಗೆ ಕಾಣೊಲ್ಲ ಅಂತ ಭಾವಿಸಿ, ಮೂತ್ರವನ್ನು ಹಿಡಿದಿಟ್ಟುಕೊಳ್ಳಲಾರದೆ ಕೊನೆಯಲ್ಲಿ  ಕಾರಿನಿಂದ  ರಸ್ತೆ ಮಧ್ಯೆಯೇ ಮೂತ್ರ ವಿಸರ್ಜನೆ ಮಾಡಿದ್ದಾನೆ. ಇವನ ಕೃತ್ಯವನ್ನು ಯಾರೋ ವಿಡಿಯೋ ರೆಕಾರ್ಡ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಈ ಘಟನೆ ಲಕ್ನೋದಲ್ಲಿ ನಡೆದಿದ್ದು ಎನ್ನಲಾಗುತ್ತಿದೆ. ಲಕ್ನೋದ ನಗರವೊಂದರಲ್ಲಿ ರಾತ್ರಿಯ ವೇಳೆ ಟ್ರಾಫಿಕ್ ಜಾಮ್ ಅಲ್ಲಿ ಸಿಕ್ಕಿಹಾಕೊಕೊಂಡಿದ್ದ ವ್ಯಕ್ತಿಯೊಬ್ಬ ಮೂತ್ರವನ್ನು ತಡೆದುಕೊಳ್ಳಲಾಗದೆ, ಕೊನೆಯಲ್ಲಿ ದಾರಿ ಕಾಣದೆ ರಸ್ತೆ ಮಧ್ಯೆಯೇ ಮೂತ್ರ ವಿಸರ್ಜನೆ ಮಾಡಿದ್ದಾನೆ.  ಈ ವೈರಲ್ ವಿಡಿಯೋವನ್ನು  @adultsociety  ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ವೈರಲ್ ವಿಡಿಯೋದಲ್ಲಿ ಹಲವಾರು ವಾಹನಗಳು ಟ್ರಾಫಿಕ್ ಮಧ್ಯೆ ಸಿಕ್ಕಿ ಹಾಕಿಕೊಂಡಿರುವುದನ್ನು ಕಾಣಬಹುದು. ಆ ಸಂದರ್ಭದಲ್ಲಿ  ಅಲ್ಲೇ ರಸ್ತೆಯ ಪಕ್ಕ ಡಿವೈಡರ್ ಬಳಿ ನಿಂತಿದ್ದ ಬಿಳಿ ಬಣ್ಣದ ಕಾರಿನಿಂದ ಕೆಳಗಿಳಿದಂತಹ ವ್ಯಕ್ತಿಯೊಬ್ಬ, ಮೂತ್ರವನ್ನು ಹಿಡಿದಿಟ್ಟುಕೊಳ್ಳಲಾಗದೆ, ಕೊನೆಗೆ ನಾಚಿಕೆಯನ್ನೆಲ್ಲಾ ಪಕ್ಕಕ್ಕಿಟ್ಟು ನಡುರಸ್ತೆಯಲ್ಲಿಯೇ ಮೂತ್ರ ವಿಸರ್ಜನೆ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು. ಅಬ್ಬಬ್ಬಾ ಈ ಟ್ರಾಫಿಕ್ ಕಾರಣದಿಂದ ಎಂತೆಂತಹ ಸಮಸ್ಯೆಗಳು ಎದುರಾಗುತ್ತವೆ ಅಲ್ವಾ ಅಂತ ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಇದನ್ನೂ ಓದಿ: ಓಯೋ ರೂಮ್ ಬುಕ್ ಮಾಡಿದ ವ್ಯಕ್ತಿ; ರೂಮ್​​ ಕಂಡು ಕಂಗಾಲು

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 5 ಮಿಲಿಯನ್ ವೀಕ್ಷಣೆಗಳನ್ನು ಹಾಗೂ  72 ಸಾವಿರಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಹಾಗೂ ತರಹೇವಾರಿ ಕಮೆಂಟ್ಸ್ಗಳೂ ಹರಿದು ಬಂದಿವೆ. ಒಬ್ಬ ಬಳಕೆದಾರರು ʼಬಹುಶಃ ಆ ವ್ಯಕ್ತಿ ಮಧುಮೇಹ ಕಾಯಿಲೆಯಿಂದ ಬಳಲುತ್ತಿರಬಹುದುʼ ಎಂಬ ಕಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇದೆಲ್ಲಾ ನಾಚಿಕೆಗೇಡಿನ ಕೆಲಸʼ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ʻಈ ಟ್ರಾಫಿಕ್ ಕಾರಣದಿಂದ ಜನರು ಎಂತೆಂತಹ ಸಮಸ್ಯೆಗಳನ್ನೆಲ್ಲಾ ಎದುರಿಸುತ್ತಿದ್ದಾರೆ ಅಲ್ವಾʼ ಎಂದು ತಮಾಷೆ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ