27 ಕೋಟಿ ರೂ. ಮೌಲ್ಯದ ಕಾರಿನಲ್ಲಿ ಕಾಲೇಜಿಗೆ ಬಂದ ವಿದ್ಯಾರ್ಥಿ! ವಿಡಿಯೋ ವೈರಲ್

ಶಾಂಘೈ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ 27 ಕೋಟಿ ರೂ. ಮೌಲ್ಯದ ಆಸ್ಟನ್ ಮಾರ್ಟಿನ್ ವಾಲ್ಕೈರಿ ಹೈಪರ್‌ಕಾರ್‌ನಲ್ಲಿ ಕಾಲೇಜಿಗೆ ಬಂದ ವಿಡಿಯೋ ವೈರಲ್ ಆಗಿದೆ. ಕ್ಯಾಂಪಸ್‌ನಲ್ಲಿ ಐಷಾರಾಮಿ ಕಾರು ನೋಡಿದ ವಿದ್ಯಾರ್ಥಿಗಳು ಅಚ್ಚರಿಗೊಂಡು ವಿಡಿಯೋ, ಫೋಟೋ ತೆಗೆಯುತ್ತಿರುವುದು ವಿಡಿಯೋದಲ್ಲಿದೆ. ವಿಡಿಯೋ ಲಕ್ಷಾಂತರ ವೀಕ್ಷಣೆ ಪಡೆದು ಸಂಚಲನ ಮೂಡಿಸಿದೆ.

27 ಕೋಟಿ ರೂ. ಮೌಲ್ಯದ ಕಾರಿನಲ್ಲಿ ಕಾಲೇಜಿಗೆ ಬಂದ ವಿದ್ಯಾರ್ಥಿ! ವಿಡಿಯೋ ವೈರಲ್
ಆಸ್ಟನ್ ಮಾರ್ಟಿನ್ ವಾಲ್ಕೈರಿ ಹೈಪರ್‌ಕಾರ್‌
Image Credit source: TV9 Network

Updated on: Mar 04, 2026 | 3:02 PM

ಶಾಂಘೈ, ಮಾರ್ಚ್ 4: ವಿಶ್ವವಿದ್ಯಾಲಯಕ್ಕೆ ಬೈಕ್ ಅಥವಾ ಕಾರಿನಲ್ಲಿ ವಿದ್ಯಾರ್ಥಿಗಳು ಬರುವುದು ಇಂದಿನ ದಿನಗಳಲ್ಲಿ ಸಾಮಾನ್ಯ. ಆದರೆ ಸುಮಾರು 27 ಕೋಟಿ ರೂ. ಮೌಲ್ಯದ ಐಷಾರಾಮಿ ಕಾರಿನಲ್ಲಿ ವಿದ್ಯಾರ್ಥಿಯೊಬ್ಬ ಕ್ಯಾಂಪಸ್‌ಗೆ ಬಂದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಭಾರೀ ಸದ್ದು ಮಾಡುತ್ತಿದೆ. ಚೀನಾದ ಶಾಂಘೈ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬ ವಿಶ್ವದ ಅತ್ಯಂತ ದುಬಾರಿ ಮತ್ತು ಸೀಮಿತ ಆವೃತ್ತಿಯ ಕಾರುಗಳಲ್ಲಿ ಒಂದಾದ Aston Martin Valkyrie ಚಾಲನೆ ಮಾಡಿ ಕಾಲೇಜಿಗೆ ಬಂದಿದ್ದಾನೆ ಎನ್ನಲಾಗಿದೆ. ಸದ್ಯ, ಆತ ದುಬಾರಿ ಕಾರಿನಲ್ಲಿ ಬಂದ ವಿಡಿಯೋ ‘ಎಕ್ಸ್​’ನಲ್ಲಿ ಪೋಸ್ಟ್ ಆಗಿದ್ದು, ವೈರಲ್ (Viral Video) ಆಗಿದೆ. ಈ ಕಾರಿನ ಅಂದಾಜು ಮೌಲ್ಯ ಸುಮಾರು 3 ಮಿಲಿಯನ್ ಅಮೆರಿಕನ್ ಡಾಲರ್ ಎನ್ನಲಾಗಿದ್ದು, ಭಾರತೀಯ ಮೌಲ್ಯದಲ್ಲಿ ಅಂದಾಜು 27 ಕೋಟಿ ರೂ. ಆಗಿದೆ.

ಪಾರ್ಕಿಂಗ್ ಸ್ಥಳದಲ್ಲಿ ಹೊಳೆಯುವ ಐಷಾರಾಮಿ ಕಾರು ನಿಲ್ಲಿಸಿರುವುದು ಎಕ್ಸ್ ವಿಡಿಯೋದಲ್ಲಿ ಕಾಣುತ್ತದೆ. ಕಾರನ್ನು ನೋಡಲು ವಿದ್ಯಾರ್ಥಿಗಳ ಗುಂಪು ಕೂಡಿಕೊಂಡಿದ್ದು, ಕೆಲವರು ಫೋಟೋ ಮತ್ತು ವಿಡಿಯೋ ತೆಗೆಯುವುದರಲ್ಲಿ ಮುಳುಗಿದ್ದಾರೆ. ಬಳಿಕ ಯುವಕನೊಬ್ಬ ಬಂದು ಕಾರಿನ ಬಾಗಿಲು ತೆರೆಯುವ ಮೂಲಕ ಆರಾಮವಾಗಿ ಒಳಗೆ ಕುಳಿತುಕೊಳ್ಳುವುದು ವಿಡಿಯೋದಲ್ಲಿದೆ.

Aston Martin Valkyrie ಫಾರ್ಮುಲಾ-1 ತಂತ್ರಜ್ಞಾನದಿಂದ ಪ್ರೇರಿತವಾಗಿ ವಿನ್ಯಾಸಗೊಳಿಸಲಾದ ಅತ್ಯುನ್ನತ ಕಾರ್ಯಕ್ಷಮತೆಯ ಹೈಪರ್ ಕಾರ್ ಆಗಿದೆ. ಇಂತಹ ಅಪರೂಪದ ಕಾರನ್ನು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ನೋಡುವುದು ಅಸಾಮಾನ್ಯ ಎನ್ನಲಾಗುತ್ತಿದೆ.

ಐಷಾರಾಮಿ ಕಾರಿನ ವಿಡಿಯೋ ಇಲ್ಲಿ ನೋಡಿ


ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ @DAMIADENUGA ಎಂಬ ಖಾತೆಯಿಂದ ಹಂಚಿಕೊಳ್ಳಲಾಗಿದೆ. ಶಾಂಘೈ ವಿಶ್ವವಿದ್ಯಾಲಯದ ವಿದ್ಯಾರ್ಥಿಯೊಬ್ಬರು ಸುಮಾರು 3 ಮಿಲಿಯನ್ ಡಾಲರ್ ಮೌಲ್ಯದ ಕಾರಿನಲ್ಲಿ ಕ್ಯಾಂಪಸ್‌ನಿಂದ ಹೊರಡುತ್ತಿರುವುದು ಕಂಡುಬಂದಿದೆ ಎಂದು ಶೀರ್ಷಿಕೆಯೊಂದಿಗೆ ವಿಡಿಯೋ ಪೋಸ್ಟ್ ಮಾಡಲಾಗಿದೆ.

ಸುಮಾರು 21 ಸೆಕೆಂಡುಗಳ ಈ ವಿಡಿಯೋವನ್ನು ಈಗಾಗಲೇ ಲಕ್ಷಾಂತರ ಬಾರಿ ವೀಕ್ಷಿಸಿದ್ದು, ಸಾವಿರಾರು ಮಂದಿ ಲೈಕ್ ಹಾಗೂ ಕಾಮೆಂಟ್ ಮಾಡಿದ್ದಾರೆ. ಆಸ್ಟನ್ ಮಾರ್ಟಿನ್ ಯುರೋಪಿನ ಅತ್ಯುತ್ತಮ ಐಷಾರಾಮಿ ಕಾರುಗಳಲ್ಲಿ ಒಂದು ಎಂದು ಕೆಲವರು ಅಭಿಪ್ರಾಯಪಟ್ಟರೆ, ನಾವು ಇಲ್ಲಿ ಬಸ್ ದರದ ಬಗ್ಗೆ ಚಿಂತಿಸುತ್ತಿದ್ದೇವೆ, ಆದರೆ ಈ ವಿದ್ಯಾರ್ಥಿ ಕೋಟಿ ಮೌಲ್ಯದ ಕಾರಿನಲ್ಲಿ ಬರುತ್ತಿದ್ದಾನೆ ಎಂದು ಇನ್ನೂ ಕೆಲವರು ಹಾಸ್ಯಮಿಶ್ರಿತವಾಗಿ ಪ್ರತಿಕ್ರಿಯಿಸಿದ್ದಾರೆ.

ಒಟ್ಟಿನಲ್ಲಿ, ವಿದ್ಯಾರ್ಥಿಯೊಬ್ಬನ ಐಷಾರಾಮಿ ಜೀವನಶೈಲಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ವಿಡಿಯೋ ವ್ಯಾಪಕವಾಗಿ ಶೇರ್ ಆಗುತ್ತಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us