AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನಡುರಸ್ತೆಯಲ್ಲಿ ರಾಜಾರೋಷವಾಗಿ ಓಡಾಡುತ್ತಿರುವ ಚಿರತೆ; ವಿಡಿಯೋ ವೈರಲ್​​

ಶಿಯೋಪುರ್ ಜಿಲ್ಲೆಯಲ್ಲಿ ರಾತ್ರಿಯ ವೇಳೆ ರಸ್ತೆಯಲ್ಲಿ ಚಿರತೆ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕುನೋ ರಾಷ್ಟ್ರೀಯ ಉದ್ಯಾನದಿಂದ ತಪ್ಪಿಸಿಕೊಂಡ 'ಅಗ್ನಿ' ಎಂಬ ಚಿರತೆ ಇದಾಗಿದ್ದು, ಅಮರಲ್ ನದಿಯನ್ನು ದಾಟಿ ನಗರಕ್ಕೆ ಬಂದಿದೆ ಎಂದು ತಿಳಿದುಬಂದಿದೆ. ಸ್ಥಳೀಯರು ಭಯಭೀತರಾಗಿದ್ದು, ಜನರು ಅನಾವಶ್ಯಕವಾಗಿ ಗದ್ದೆ, ಅರಣ್ಯಕ್ಕೆ ಹೋಗದಂತೆ ಹಾಗೂ ಹೊರಗೆ ತಿರುಗಾಡದಂತೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಅಕ್ಷತಾ ವರ್ಕಾಡಿ
|

Updated on:Dec 26, 2024 | 12:40 PM

Share

ಮಧ್ಯಪ್ರದೇಶ: ನಡುರಸ್ತೆಯಲ್ಲಿ ಚಿರತೆಯೊಂದು ಓಡಾಡಿ ಅವಾಂತರ ಸೃಷ್ಟಿಸಿರುವ ಘಟನೆ ಮಧ್ಯಪ್ರದೇಶದ ಶಿಯೋಪುರ್ ಜಿಲ್ಲೆಯಲ್ಲಿ ನಡೆದಿದೆ. ರಾತ್ರಿ ಬೀದಿಗಳಲ್ಲಿ ಚಿರತೆ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೋದಲ್ಲಿ ಚಿರತೆ ಶಿಯೋಪುರ್ ರಸ್ತೆಯಲ್ಲಿ ನಡೆಯುವುದನ್ನು ಕಾಣಬಹುದು. ಅದರ ಹಿಂದೆ ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಈ ದೃಶ್ಯವನ್ನು ಮೊಬೈಲ್‌ನಲ್ಲಿ ವಿಡಿಯೋ ಮಾಡಿದ್ದಾರೆ.

ರಸ್ತೆಯಲ್ಲಿ ಕಾಣಿಸಿಕೊಂಡ ಚಿರತೆಯನ್ನು ಕುನೊ ರಾಷ್ಟ್ರೀಯ ಉದ್ಯಾನವನದ ಅಧಿಕಾರಿಗಳು ಬಿಟ್ಟುಹೋದ ‘ಅಗ್ನಿ’ ಎಂದು ಗುರುತಿಸಲಾಗಿದೆ. ಚಿರತೆ ದಾರಿ ತಪ್ಪಿ ನಗರಕ್ಕೆ ಬಂದು ತಲುಪಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚಿರತೆ ಅಮರಲ್ ನದಿಯನ್ನು ದಾಟಿ ನಗರಕ್ಕೆ ನುಗ್ಗಿದ್ದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ. ಮಂಗಳವಾರ ಮತ್ತು ಬುಧವಾರ ರಾತ್ರಿ ನಗರದ ಜನವಸತಿ ಪ್ರದೇಶದಲ್ಲಿ ಚರತೆ ತಿರುಗಾಡುತ್ತಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಚಿರತೆ ಬೀದಿನಾಯಿಯನ್ನು ಆಹಾರಕ್ಕಾಗಿ ಬೇಟೆಯಾಡಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಅಂಗಾಂಗ ದಾನಕ್ಕೂ ಜಿಎಸ್‌ಟಿ; ತಮಾಷೆಯಾಗಿ ವಿತ್ತ ಸಚಿವೆಯ ಕಾಲೆಳೆದ ಇನ್‌ಫ್ಲುಯೆನ್ಸರ್‌

ಚಿರತೆಯ ಚಲನವಲನದ ಬಗ್ಗೆ ಜಾಗರೂಕರಾಗಿರಿ ಎಂದು ಅರಣ್ಯ ಇಲಾಖೆ ಶಿಯೋಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳ ಜನರಿಗೆ ಮನವಿ ಮಾಡಿದೆ. ಜನರು ಅನಾವಶ್ಯಕವಾಗಿ ಗದ್ದೆ, ಅರಣ್ಯಕ್ಕೆ ಹೋಗದಂತೆ ಹಾಗೂ ಹೊರಗೆ ತಿರುಗಾಡದಂತೆ ಎಚ್ಚರಿಕೆ ನೀಡಲಾಗಿದೆ. ಆದರೆ ಕುನೋ ಚಿರತೆಗಳು ರಾಷ್ಟ್ರೀಯ ಉದ್ಯಾನವನದಿಂದ ಹೊರಬರುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ ಕೆಲ ಚಿರತೆಗಳು ಈ ರೀತಿ ಬಡಾವಣೆಗಳಿಗೆ ನುಗ್ಗಿವೆ ಎನ್ನುತ್ತಾರೆ ಸ್ಥಳೀಯರು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:39 pm, Thu, 26 December 24

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ