AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ರೋಗಿಯ ಹೊಟ್ಟೆಯಿಂದ 1 ಕೆಜಿಗಿಂತ ಹೆಚ್ಚು ಉಗುರು ಮತ್ತು ಕಬ್ಬಿಣದ ತುಂಡುಗಳನ್ನು ಹೊರತೆಗೆದ ವೈದ್ಯರು!

Viral News: ಎಕ್ಸ್-ರೇ ಬಳಿಕ ವ್ಯಕ್ತಿಯ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳು ಜತೆಗೆ ಉಗುರಿನ ಚೂರುಗಳು ಇರುವುದು ಕಂಡು ಬಂದಿದೆ. ಚಿಕಿತ್ಸೆಯ ಬಳಿಕ ವ್ಯಕ್ತಿಯ ಹೊಟ್ಟೆಯಿದ ವೈದ್ಯರು ಸುಮಾರು ಒಂದು ಕೆಜಿಯಷ್ಟು ತಿರುಪು ಮೊಳೆಗಳನ್ನು ಹೊರತೆಗೆದಿದ್ದಾರೆ.

Shocking News: ರೋಗಿಯ ಹೊಟ್ಟೆಯಿಂದ 1 ಕೆಜಿಗಿಂತ ಹೆಚ್ಚು ಉಗುರು ಮತ್ತು ಕಬ್ಬಿಣದ ತುಂಡುಗಳನ್ನು ಹೊರತೆಗೆದ ವೈದ್ಯರು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 03, 2021 | 11:09 AM

Share

ಹೊಟ್ಟೆ ನೋವಿನಿಂದ ಬಳಲುತ್ತಿರುವ ರೋಗಿಯ  ಹೊಟ್ಟೆಯಲ್ಲಿ 1 ಕೆಜಿಗಿಂತಲೂ ಹೆಚ್ಚಿನ ಉಗುರು ಮತ್ತು ಕಬ್ಬಿಣದ ತುಂಡುಗಳು ಇರುವುದು ಕಂಡು ಬಂದಿದೆ. ತೀವ್ರವಾದ ಹೊಟ್ಟೆ ನೋವು ಎಂದು ಬಳಲುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳಿವೆ, ಸುಮಾರು 1ಕೆಜಿಗಿಂತಲೂ ಹೆಚ್ಚಿನ ಕಬ್ಬಿಣದ ಚೂರುಗಳಿವೆ ಎಂಬುದು ಸ್ಕ್ಯಾನಿಂಗ್​ ಮೂಲಕ ತಿಳಿದು ಬಂದಿದೆ. ಚಿಕಿತ್ಸೆಯ ಬಳಿಕ ಎಲ್ಲಾ ಲೋಹದ ತುಂಡುಗಳನ್ನು ವ್ಯಕ್ತಿಯ ದೇಹದಿಂದ ಹೊರತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವ್ಯಕ್ತಿಯನ್ನು ಕ್ಲೈಪೆಡಾ ಆಸ್ಪತ್ರೆಗೆ ಸೇರಿಸಲಾಯಿತು. ಎಕ್ಸ್-ರೇ ಬಳಿಕ ವ್ಯಕ್ತಿಯ ಹೊಟ್ಟೆಯಲ್ಲಿ ಕಬ್ಬಿಣದ ತುಂಡುಗಳು ಜತೆಗೆ ಉಗುರಿನ ಚೂರುಗಳು ಇರುವುದು ಕಂಡು ಬಂದಿದೆ. ಚಿಕಿತ್ಸೆಯ ಬಳಿಕ ವ್ಯಕ್ತಿಯ ಹೊಟ್ಟೆಯಿದ ವೈದ್ಯರು ಸುಮಾರು ಒಂದು ಕೆಜಿಯಷ್ಟು ತಿರುಪು ಮೊಳೆಗಳನ್ನು ಹೊರತೆಗೆದಿದ್ದಾರೆ.

ವರದಿಗಳ ಪ್ರಕಾರ, ವೈದ್ಯರು ಮೂರು ಗಂಟೆಗಳ ಸುದೀರ್ಘ ಕಾರ್ಯಾಚರಣೆಯ ನಂತರ ಎಲ್ಲಾ ಲೋಹದ ವಸ್ತುಗಳನ್ನು ಯಶಸ್ವಿಯಾಗಿ ಹೊರತೆಗೆದಿದ್ದಾರೆ. ಈ ರೀತಿಯ ಘಟನೆಯನ್ನು ನಾನು ಈ ಹಿಂದೆ ನೋಡಿರಲಿಲ್ಲ. ಆತನ ಹೊಟ್ಟೆಯಲ್ಲಿ ಉಗುರುಗಳು ಮತ್ತು ಸ್ಕ್ರೂಗಳಿದ್ದವು ಎಂದು ಕ್ಲೈಪಡಾ ಯೂನಿವರ್ಸಿಟಿ ಆಸ್ಪತ್ರೆಯ ಸರ್ಜನ್ ಅಲ್ಗಿರ್ದಾಸ್ ಸ್ಲೇಪಾವೀಸಿಯಸ್ ಅವರು ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಇದೇ ರೀತಿಯ ಮತ್ತೊಂದು ಘಟನೆ ನಡೆದಿತ್ತು. ಕಳೆದ ಸಪ್ಟೆಂಬರ್ ತಿಂಗಳಿನಲ್ಲಿ ಇಡೀ ಮೊಬೈಲ್ಅನ್ನೇ ವ್ಯಕ್ತಿ ನುಂಗಿಬಿಟ್ಟಿದ್ದರು. ಶಸ್ತ್ರ ಚಿಕಿತ್ಸೆಯ ಬಳಿಕ ವ್ಯಕ್ತಿಯ ಹೊಟ್ಟೆಯಿಂದ ನೋಕಿಯಾ ಮೊಬೈಲ್ಅನ್ನು ಹೊರತೆಗೆಯಲಾಗಿತ್ತು. ಶಸ್ತ್ರಚಿಕಿತ್ಸೆ ಯಶಸ್ವಿಯಾಯಿತು, ವ್ಯಕ್ತಿಯ ಹೊಟ್ಟೆಯಿಂದ ಮೊಬೈಲ್ ಫೋನ್ಅನ್ನು ಹೊರತೆಗೆಯಲಾಗಿದೆ ಎಂದು ಡಾ. ಸ್ಕೆಂದರ್ ತಿಳಿಸಿದ್ದರು.

ಇದನ್ನೂ ಓದಿ:

Viral News: ಹೆಂಡತಿ ಸ್ನಾನ ಮಾಡಲ್ಲ ಅಂತ ವಿಚ್ಛೇದನ ನೀಡಿದ ಗಂಡ!

Viral News: ಲೇಹ್​ನಿಂದ ಮನಾಲಿಗೆ ಸೊಲೊ ಸೈಕ್ಲಿಂಗ್ ಮಾಡಿದ ಭಾರತೀಯ ಸೇನಾಧಿಕಾರಿ; ಗಿನ್ನಿಸ್ ದಾಖಲೆ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ