AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: 5 ವರ್ಷಗಳಿಂದ ಅಪ್ಪ, ಅಣ್ಣ, ಅಜ್ಜನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!

Rape Case: ಪುಣೆಯಲ್ಲಿ 11 ವರ್ಷದ ಬಾಲಕಿಯ ಮೇಲೆ ಆಕೆಯ ಅಪ್ಪ, ಅಜ್ಜ, ಅಣ್ಣ, ಚಿಕ್ಕಪ್ಪ ನಿರಂತರವಾಗಿ ಅತ್ಯಾಚಾರ ನಡೆಸುತ್ತಿದ್ದ ಘಟನೆ ನಡೆದಿದೆ.

Shocking News: 5 ವರ್ಷಗಳಿಂದ ಅಪ್ಪ, ಅಣ್ಣ, ಅಜ್ಜನಿಂದಲೇ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Mar 19, 2022 | 6:38 PM

Share

ಪುಣೆ: ಜನ್ಮ ಕೊಟ್ಟ ತಂದೆ ಹಾಗೂ ಒಡಹುಟ್ಟಿದ ಸಹೋದರರೇ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ (Rape) ನಡೆಸಿರುವ ಘಟನೆ ನಡೆದಿದೆ. ಆಕೆಯ ಸಹೋದರ ಮತ್ತು ಆಕೆಯ ತಂದೆ ಕಳೆದ 5 ವರ್ಷಗಳಿಂದ ನಿರಂತರವಾಗಿ ಅತ್ಯಾಚಾರವೆಸಗಿದ್ದಾರೆ. ಅಷ್ಟೇ ಅಲ್ಲದೆ, ಆಕೆಯ ಅಜ್ಜ ಮತ್ತು ಚಿಕ್ಕಪ್ಪ ಕೂಡ ಆಗಾಗ ಆಕೆಗೆ ಕಿರುಕುಳ ನೀಡುತ್ತಿದ್ದರು ಎಂಬ ಆಘಾತಕಾರಿ ವಿಷಯವೊಂದು (Shocking News) ಮಹಾರಾಷ್ಟ್ರದಲ್ಲಿ ಬೆಳಕಿಗೆ ಬಂದಿದೆ. ಈ ಕುರಿತು ಪುಣೆ ಪೊಲೀಸರು ಕೇಸ್ ದಾಖಲಿಸಿಕೊಂಡು, ಅಪ್ರಾಪ್ತ ಬಾಲಕಿಯ ತಂದೆ, ಅಣ್ಣ, ಅಜ್ಜ, ಚಿಕ್ಕಪ್ಪನನ್ನು ವಶಕ್ಕೆ ಪಡೆದಿದ್ದಾರೆ.

ಅತ್ಯಾಚಾರ ಮತ್ತು ಕಿರುಕುಳಕ್ಕಾಗಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ. ಪುಣೆಯ ಪೊಲೀಸ್ ಠಾಣೆಯಲ್ಲಿ 11 ವರ್ಷ ವಯಸ್ಸಿನ ಹುಡುಗಿಯ ಸಹೋದರ ಮತ್ತು 45 ವರ್ಷದ ತಂದೆಯ ವಿರುದ್ಧ ಐಪಿಸಿ ಸೆಕ್ಷನ್ 376ರ ಅಡಿಯಲ್ಲಿ ಅತ್ಯಾಚಾರದ ಪ್ರಕರಣವನ್ನು ದಾಖಲಿಸಲಾಗಿದೆ. ಆಕೆಯ ಅಜ್ಜ (60 ವರ್ಷ) ಮತ್ತು ದೂರದ ಚಿಕ್ಕಪ್ಪ (25 ವರ್ಷ) ವಿರುದ್ಧ ಸೆಕ್ಷನ್ 354 ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.

ಆ ಬಾಲಕಿ ತನ್ನ ತಂದೆ, ಅಣ್ಣನ ಜೊತೆ ಪುಣೆಯಲ್ಲಿ ವಾಸಿಸುತ್ತಿದ್ದಳು. ಬಾಲಕಿಯ ಶಾಲೆಯಲ್ಲಿ ‘ಗುಡ್ ಟಚ್ ಮತ್ತು ಬ್ಯಾಡ್ ಟಚ್’ ಕುರಿತು ಶಿಕ್ಷಕರು ಪಾಠ ಮಾಡಿದಾಗ ಆಕೆಗೆ ತನ್ನ ತಂದೆ ಮತ್ತು ಅಣ್ಣ, ಅಜ್ಜ, ಚಿಕ್ಕಪ್ಪನದ್ದು ಬ್ಯಾಡ್ ಟಚ್ ಎಂಬುದು ಅರ್ಥವಾಗಿದೆ. 5 ವರ್ಷಗಳಿಂದ ನಿರಂತರವಾಗಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿತ್ತು.

2017ರಲ್ಲಿ ಬಿಹಾರದಲ್ಲಿ ವಾಸಿಸುತ್ತಿದ್ದಾಗ ಆ ಬಾಲಕಿಯ ತಂದೆ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಆರಂಭಿಸಿದ್ದ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆ ಬಾಲಕಿಯ ಅಣ್ಣ 2020ರಿಂದ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಿದ್ದಾರೆ. ಆಕೆಯ ಅಜ್ಜ ಮತ್ತು ಚಿಕ್ಕಪ್ಪ ಕೂಡ ಆಕೆಯೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದರು. ಇದು ಸಾಮೂಹಿಕ ಅತ್ಯಾಚಾರದ ಪ್ರಕರಣವಲ್ಲ. ಆದರೆ, ಆ ನಾಲ್ವರಿಗೂ ಇತ್ತೀಚೆಗೆ ತಾವು ಮಾತ್ರವಲ್ಲದೆ ಬೇರೆಯವರೂ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿರುವ ವಿಷಯ ಗೊತ್ತಾಗಿದೆ.

ಇದನ್ನೂ ಓದಿ: Shocking News: ಬೆಕ್ಕು ಕಚ್ಚಿ ಇಬ್ಬರು ಮಹಿಳೆಯರು ಸಾವು; ಆಂಧ್ರ ಪ್ರದೇಶದಲ್ಲೊಂದು ದಾರುಣ ಘಟನೆ

Gang Rape: ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ; 14 ವರ್ಷದ ಬಾಲಕಿಯ ಶವ ಗೋಣಿಚೀಲದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆ

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ