Shocking News: ವಿಮಾನದ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿ, ಕಸದ ಬುಟ್ಟಿಯಲ್ಲಿ ಬಿಸಾಡಿದ ಮಹಿಳೆ!

ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಆ ಮಗುವನ್ನು ಶೌಚಾಲಯದ ಕಸದ ಬುಟ್ಟಿಯಲ್ಲಿ ಬಿಸಾಡಿದ್ದಾರೆ. ಮಡಗಾಸ್ಕರ್‌ನ 20 ವರ್ಷದ ಮಹಿಳೆ ಮಾರಿಷಸ್‌ನ ಸರ್ ಸೀವೂಸಗೂರ್ ರಾಮ್‌ಗೂಲಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದರು.

Shocking News: ವಿಮಾನದ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿ, ಕಸದ ಬುಟ್ಟಿಯಲ್ಲಿ ಬಿಸಾಡಿದ ಮಹಿಳೆ!
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jan 04, 2022 | 5:05 PM

ಪೋರ್ಟ್ ಲೂಯಿಸ್: ವಿಮಾನದ ಶೌಚಾಲಯದಲ್ಲಿ ನವಜಾತ ಶಿಶುವೊಂದನ್ನು ಬಿಸಾಡಿ ಹೋಗಿರುವ ಹೃದಯವಿದ್ರಾವಕ ಘಟನೆಯೊಂದು ಜನವರ 1ರಂದು ನಡೆದಿದೆ. ಏರ್ ಮಾರಿಷಸ್ ಏರ್‌ಬಸ್ ಎ 330-900ರ ಕಸದ ತೊಟ್ಟಿಯಲ್ಲಿ ರಕ್ತದಲ್ಲಿ ತೊಯ್ದ ಟಾಯ್ಲೆಟ್ ಪೇಪರ್‌ನಲ್ಲಿ ಮುಚ್ಚಿದ ಎಳೆ ಮಗುವನ್ನು ಎಸೆಯಲಾಗಿತ್ತು. ನಿಯಮಿತ ಕಸ್ಟಮ್ಸ್ ತಪಾಸಣೆಯ ಸಮಯದಲ್ಲಿ ವಿಮಾನ ನಿಲ್ದಾಣದ ಅಧಿಕಾರಿಗಳ ಕಣ್ಣಿಗೆ ಈ ಮಗು ಬಿದ್ದಿದೆ. ವಿಮಾನದಲ್ಲೇ ಮಗುವಿಗೆ ಜನ್ಮ ನೀಡಿದ್ದ ಮಹಿಳೆ ಆ ಮಗುವನ್ನು ಶೌಚಾಲಯದ ಕಸದ ಬುಟ್ಟಿಯಲ್ಲಿ ಬಿಸಾಡಿದ್ದಾರೆ ಎಂದು ಅನುಮಾನಿಸಲಾಗಿದೆ.

ಮಡಗಾಸ್ಕರ್‌ನ 20 ವರ್ಷದ ಮಹಿಳೆಯೊಬ್ಬರು ವಿಮಾನದಲ್ಲಿಯೇ ಜನ್ಮ ನೀಡಿದ್ದಾರೆ ಎಂದು ಶಂಕಿಸಲಾಗಿದೆ. ಅವರು ಜನವರಿ 1ರಂದು ಮಾರಿಷಸ್‌ನ ಸರ್ ಸೀವೂಸಗೂರ್ ರಾಮ್‌ಗೂಲಂ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತನ್ನ ತಾಯ್ನಾಡಿನಿಂದ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಆಗ ಆಕೆ ವಿಮಾನದಲ್ಲಿ ಮಗುವಿಗೆ ಜನ್ಮ ನೀಡಿದ್ದರು. ಕಸದ ತೊಟ್ಟಿಯಲ್ಲಿ ಸಿಕ್ಕಿದ್ದ ಮಗುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಮಗು ಸದ್ಯಕ್ಕೆ ಆರೋಗ್ಯವಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ಆರಂಭದಲ್ಲಿ ಗಂಡು ಮಗು ತನ್ನದಲ್ಲ ಎಂದು ವಾದಿಸಿದ ವಿಮಾನ ಪ್ರಯಾಣಿಕಳನ್ನು ಬಳಿಕ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದು ದೃಢಪಟ್ಟಿತು ಎಂದು ಬಿಬಿಸಿ ತನ್ನ ವರದಿಯಲ್ಲಿ ತಿಳಿಸಿದೆ. ಆಸ್ಪತ್ರೆಯಲ್ಲಿ ಆಕೆಯನ್ನು ಪೊಲೀಸ್ ಕಣ್ಗಾವಲಿನಲ್ಲಿ ಇರಿಸಲಾಗಿತ್ತು. ಆಕೆ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಪತ್ರಿಕೆ ಲೆ ಮಾರಿಸಿಯನ್ ಪ್ರಕಾರ, ಮಲಗಾಸಿ ಮಹಿಳೆ ಎರಡು ವರ್ಷಗಳ ಕೆಲಸದ ಪರವಾನಗಿಯ ಮೇಲೆ ಮಾರಿಷಸ್‌ಗೆ ಬಂದಿದ್ದಳು. ಆಸ್ಪತ್ರೆಯಿಂದ ಬಿಡುಗಡೆಯಾದ ನಂತರ ಆಕೆಯನ್ನು ವಿಚಾರಣೆಗೊಳಪಡಿಸಲಾಗುತ್ತದೆ.

ಇದನ್ನೂ ಓದಿ: Shocking News: ಮೊದಲ ರಾತ್ರಿಯಲ್ಲೇ ಹೆಂಡತಿ ಗರ್ಭಿಣಿ ಎಂದು ಗೊತ್ತಾಗಿ ಗಂಡ ಶಾಕ್!

Shocking News: ಧಾರಾವಾಹಿ ತಂದ ಅವಾಂತರ; ಮಹಿಳೆಯರು ಟಿವಿ ನೋಡುತ್ತಿದ್ದಾಗ ಹಣ, ಒಡವೆ ದೋಚಿದ ಕಳ್ಳರು!

Published On - 5:03 pm, Tue, 4 January 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ