AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ; ಕಾಸರಗೋಡಿನಲ್ಲೊಂದು ಆಘಾತಕಾರಿ ಘಟನೆ

ಕೇರಳದ ಕಾಸರಗೋಡಿನ ಹೋಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಏಕೆ ಸಾವನ್ನಪ್ಪಿದೆ.

Shocking News: ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ; ಕಾಸರಗೋಡಿನಲ್ಲೊಂದು ಆಘಾತಕಾರಿ ಘಟನೆ
ಮೇಕೆ
TV9 Web
| Edited By: |

Updated on: Mar 31, 2022 | 3:45 PM

Share

ಕಾಸರಗೋಡು: ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಗರ್ಭಿಣಿ ಮೇಕೆಯ (Pregnant Goat) ಮೇಲೆ ಅತ್ಯಾಚಾರವೆಸಗಿ (Rape)  ಕೊಂದು ಹಾಕಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ತಮಿಳುನಾಡು ಮೂಲದ ಹೋಟೆಲ್ ಉದ್ಯೋಗಿಯಾದ ಸೆಂಥಿಲ್ ಎಂದು ಗುರುತಿಸಲಾಗಿದೆ. ಹೋಟೆಲ್ ಮಾಲೀಕರು ದೂರು ನೀಡಿದ ನಂತರ ಆತನನ್ನು ಬಂಧಿಸಲಾಗಿದೆ.

ಹೋಟೆಲ್ ಮಾಲೀಕರ ದೂರಿನ ಪ್ರಕಾರ, ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಜೋರಾಗಿ ಕಿರುಚಾಡುತ್ತಿರುವ ಶಬ್ದದಿಂದ ಇತರ ಉದ್ಯೋಗಿಗಳು ಎಚ್ಚರಗೊಂಡರು. ಅವರು ಹೊರಗೆ ಬಂದಾಗ ಗರ್ಭಿಣಿ ಮೇಕೆ ರಕ್ತಸ್ರಾವವಾಗಿ ಕೆಳಗೆ ಬಿದ್ದಿರುವುದನ್ನು ನೋಡಿದರು. ಅಷ್ಟರಲ್ಲಿ ಒಬ್ಬ ವ್ಯಕ್ತಿಯು ಆ ಸ್ಥಳದಿಂದ ಓಡಿಹೋಗುವುದನ್ನು ನೋಡಿದರು. ನಂತರ ಆತನನ್ನು ಆರೋಪಿ ಎಂದು ಖಚಿತವಾದ ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಲಾಯಿತು. ಸೆಂಥಿಲ್ ಸುಮಾರು ಎರಡು ವರ್ಷಗಳಿಂದ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ.

ಈ ಪ್ರಕರಣದಲ್ಲಿ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಆರೋಪಿಗಳ ವಿರುದ್ಧ ಪ್ರಾಣಿ ಹಿಂಸೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಈ ಕೃತ್ಯದಲ್ಲಿ ಮತ್ತಿಬ್ಬರು ಭಾಗಿಯಾಗಿದ್ದಾರೆ ಎಂದು ಹೋಟೆಲ್ ಮಾಲೀಕರು ಹೇಳಿದ್ದಾರೆ. ಆದರೆ, ಪೊಲೀಸರು ಸೆಂಥಿಲ್ ಒಬ್ಬನೇ ಆರೋಪಿ ಎಂದು ಹೇಳುತ್ತಿದ್ದು, ಇದೀಗ ಆತನನ್ನು ಬಂಧಿಸಿದ್ದಾರೆ.

ಹೋಟೆಲ್ ಮಾಲೀಕ ನೀಡಿದ ದೂರಿನ ಆಧಾರದ ಮೇಲೆ ಆರೋಪಿ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಹೊಸದುರ್ಗ ಠಾಣಾಧಿಕಾರಿ ತಿಳಿಸಿದ್ದಾರೆ. ಮೇಕೆಯ ಮರಣೋತ್ತರ ಪರೀಕ್ಷೆ ನಡೆಸಿದ ಸರ್ಕಾರಿ ಪಶು ವೈದ್ಯಾಧಿಕಾರಿಗಳ ಪ್ರಾಥಮಿಕ ವರದಿಯಲ್ಲಿ ಮೇಕೆ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒಳಗಾಗಿರುವುದು ಖಚಿತವಾಗಿದೆ. ವಿವರವಾದ ವರದಿಯಲ್ಲಿ ಮಾತ್ರ ಸಾವಿಗೆ ಕಾರಣ ತಿಳಿದುಬರಲಿದೆ’’ ಎಂದಿದ್ದಾರೆ.

ಇದನ್ನೂ ಓದಿ: Bengaluru Gang Rape: ಬೆಂಗಳೂರಿನ ನರ್ಸ್​ ಮೇಲೆ ಸಾಮೂಹಿಕ ಅತ್ಯಾಚಾರ; ನಾಲ್ವರು ರಾಷ್ಟ್ರೀಯ ಮಟ್ಟದ ಈಜುಗಾರರ ಬಂಧನ

Shocking News: ಅಕ್ಕನ ಬಾಯ್​ಫ್ರೆಂಡ್​ನಿಂದ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಗುಪ್ತಾಂಗಕ್ಕೆ ಕೋಲು ತುರುಕಿ ಚಿತ್ರಹಿಂಸೆ!

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್