AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಬೈಕ್​ಗಳಿಗೆ ಡಿಕ್ಕಿ ಹೊಡೆದು, ರಸ್ತೆಯ ಪಕ್ಕದವರ ಮೇಲೆ ಹರಿದ ಐಷಾರಾಮಿ ಕಾರು; ಶಾಕಿಂಗ್ ವಿಡಿಯೋ ವೈರಲ್

Car Accident Video: ಇಂದು ವೇಗವಾಗಿ ಬಂದ ಆಡಿ ಕಾರೊಂದು ರಸ್ತೆ ಬದಿಯಲ್ಲಿದ್ದ ಕೊಳೆಗೇರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡ 9 ಜನರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ, ಒಬ್ಬರು ಸಾವನ್ನಪ್ಪಿದ್ದಾರೆ.

Shocking Video: ಬೈಕ್​ಗಳಿಗೆ ಡಿಕ್ಕಿ ಹೊಡೆದು, ರಸ್ತೆಯ ಪಕ್ಕದವರ ಮೇಲೆ ಹರಿದ ಐಷಾರಾಮಿ ಕಾರು; ಶಾಕಿಂಗ್ ವಿಡಿಯೋ ವೈರಲ್
ಬೈಕ್​ಗಳಿಗೆ ಕಾರು ಡಿಕ್ಕಿ ಹೊಡೆದ ದೃಶ್ಯ
TV9 Web
| Edited By: |

Updated on: Nov 09, 2021 | 8:08 PM

Share

ಜೋಧ್​ಪುರ: ರಸ್ತೆಗಿಳಿಯುತ್ತಿದ್ದಂತೆ ಪ್ರತಿಯೊಬ್ಬರಿಗೂ ಸಾವು ಅವರ ಬೆನ್ನ ಹಿಂದೆಯೇ ಇರುತ್ತದೆ. ಒಂದು ಕ್ಷಣ ನಾವು ಮೈಮರೆತರೂ ಒಂದೋ ನಮ್ಮ ಜೀವ ಹೋಗುತ್ತದೆ ಅಥವಾ ಬೇರೆಯವರ ಪ್ರಾಣ ಹೋಗುತ್ತದೆ. ರಾಜಸ್ಥಾನದ ಜೋಧ್‌ಪುರದಲ್ಲಿ (Jodhpur) ಐಷಾರಾಮಿ ಆಡಿ (Laxury Audi Car) ಕಾರೊಂದು ಬೈಕ್ ಸವಾರರ ಮೇಲೆ ಹರಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಭೀಕರ ಅಪಘಾತದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ (Shocking Video) ವೈರಲ್ ಆಗಿದೆ.

ಈ ಭಯಾನಕ ಘಟನೆಯ ವಿಡಿಯೋದಲ್ಲಿ ಅಪಘಾತದ ಸಂಪೂರ್ಣ ದೃಶ್ಯ ದಾಖಲಾಗಿದೆ. ಟ್ರಾಫಿಕ್ ಇರುವ ರಸ್ತೆಯಲ್ಲಿ ಬರುತ್ತಿದ್ದ ಐಷಾರಾಮಿ ಕಾರು ಎದುರು ಹೋಗುತ್ತಿದ್ದ ಬೈಕ್ ಸವಾರನಿಗೆ ಡಿಕ್ಕಿ ಹೊಡೆದ ಪರಿಣಾಮ ಆತನ ಬೈಕ್ ಮೇಲಕ್ಕೆ ಹಾರಿ ಕೆಳಗೆ ಬಿದ್ದಿದೆ. ಇದರಿಂದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಡಿಕ್ಕಿ ಹೊಡೆಯುತ್ತಿದ್ದಂತೆ ನಿಯಂತ್ರಣ ತಪ್ಪಿದ ಕಾರು ಬಳಿಕ ಇನ್ನೂ ಕೆಲವು ಬೈಕ್​ಗಳಿಗೆ ಡಿಕ್ಕಿ ಹೊಡೆದು, ಅಂಗಡಿಗೆ ಗುದ್ದಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಮೂಲಗಳ ಪ್ರಕಾರ ಆ ಕಾರಿನ ಚಾಲಕನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ರಾಜಸ್ಥಾನದ ಜೋಧ್‌ಪುರದಲ್ಲಿ ವೇಗವಾಗಿ ಬಂದ ಕಾರೊಂದು ಏಮ್ಸ್ ರಸ್ತೆಯ ಕೊಳೆಗೇರಿಯಲ್ಲಿದ್ದ ವಾಹನಗಳಿಗೆ ಹಾಗೂ ಅಂಗಡಿಗಳಿಗೆ ಡಿಕ್ಕಿ ಹೊಡೆದು ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ಕೊಳೆಗೇರಿಯಲ್ಲಿ ವಾಸಿಸುವ ಇತರೆ 9 ಮಂದಿಗೆ ಗಂಭೀರ ಗಾಯಗಳಾಗಿವೆ. ಅವರು ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ವೇಗವಾಗಿ ಬಂದ ಆಡಿ ಕಾರೊಂದು ರಸ್ತೆ ಬದಿಯಲ್ಲಿದ್ದ ಕೊಳೆಗೇರಿಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ಹೆಚ್ಚಿನ ಮಾಹಿತಿಗಾಗಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ನಂತರ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಏಮ್ಸ್ ಆಸ್ಪತ್ರೆಗೆ ತಲುಪಿ ನೊಂದ ಸಂತ್ರಸ್ತರು ಮತ್ತು ಅವರ ಕುಟುಂಬಗಳನ್ನು ಭೇಟಿ ಮಾಡಿದ್ದಾರೆ. ಆ ಪ್ರದೇಶದ ಸಿಸಿಟಿವಿ ದೃಶ್ಯಗಳಲ್ಲಿ, ವಾಹನವು ಜನನಿಬಿಡ ರಸ್ತೆಯಲ್ಲಿ ಬರುತ್ತಿರುವುದು ಕಂಡುಬಂದಿದೆ. ನಿಯಂತ್ರಣ ತಪ್ಪಿದ ವಾಹನವು ರಸ್ತೆಯಿಂದ ಹಾದು ಹೋಗುತ್ತಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ಬದಿಯಲ್ಲಿರುವ ಕೊಳೆಗೇರಿಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಶಿವಮೊಗ್ಗ: ಬೈಕ್- ಕೆಎಸ್​ಆರ್​ಟಿಸಿ ನಡುವೆ ಅಪಘಾತ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

ಉತ್ತರಾಖಂಡ್​​ನಲ್ಲಿ ಭೀಕರ ಅಪಘಾತ; ಆಳವಾದ ಕಂದಕಕ್ಕೆ ಬಿದ್ದ ವಾಹನ, 13 ಮಂದಿ ದುರ್ಮರಣ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ