Video Viral: ಪ್ರವಾಸಿ ಟ್ರಕ್ ಅನ್ನು ಸೊಂಡಿಲಿನಿಂದ ಎತ್ತಿಬಿಸಾಕಿದ ಆನೆ
ಸಫಾರಿ ಟ್ರಕ್ ಅನ್ನು ಆನೆಯೊಂದು ಅಡ್ಡಗಟ್ಟಿ ದಾಳಿ ಮಾಡಿದೆ. ಎದೆನಡುಕ ಹುಟ್ಟಿಸುವ ಈ ದೃಶ್ಯವನ್ನು ಪ್ರವಾಸಿಗರು ಸೆರೆಹಿಡಿದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಜಂಗಲ್ ಸಫಾರಿಯ ವೇಳೆ ದಕ್ಷಿಣ ಆಫ್ರಿಕಾದ ಸಫಾರಿ ಟ್ರಕ್ ಅನ್ನು ಆನೆಯೊಂದು ಅಡ್ಡಗಟ್ಟಿ ದಾಳಿ ಮಾಡಿದೆ. ಎದೆನಡುಕ ಹುಟ್ಟಿಸುವ ಈ ದೃಶ್ಯವನ್ನು ಪ್ರವಾಸಿಗರು ಸೆರೆಹಿಡಿದಿದ್ದು, ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಜೋಹಾನ್ಸ್‌ಬರ್ಗ್‌ನ ವಾಯುವ್ಯದಲ್ಲಿರುವ ಪಿಲಾನೆಸ್‌ಬರ್ಗ್ ರಾಷ್ಟ್ರೀಯ ಉದ್ಯಾನವನದಲ್ಲಿ ಮಾರ್ಚ್ 18 ರಂದು ಈ ಘಟನೆ ನಡೆದಿದೆ. ಈ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದ ದಕ್ಷಿಣ ಆಫ್ರಿಕಾದ ಸ್ಥಳೀಯರೊಬ್ಬರು ಆನೆಯ ಸಮೀಪಕ್ಕೆ ಬಂದು ಟ್ರಕ್ ನಿಲ್ಲಿಸಿ, ಫೋಟೋ ತೆಗೆಯಲು ಪ್ರಯತ್ನಿಸಿದ್ದಾರೆ. ಅಷ್ಟರಲ್ಲಿ ಆನೆ ಏಕಾಏಕಿ ಸೊಂಡಿಲಿನಿಂದ ಸಫಾರಿ ಟ್ರಕ್ ಮೇಲೆ ದಾಳಿ ಮಾಡಿದೆ.
ಈ ಘಟನೆಯ ಬಗ್ಗೆ ಅಲ್ಲಿನ ಪ್ರವಾಸಿಗರು ಹೇಳುವಂತೆ ಆನೆ ತುಂಬಾ ಕ್ರೂರವಾಗಿ ವರ್ತಿಸಿತು , ನಮಗೆ ಏನು ಮಾಡಬೇಕೆಂದು ತೋಚಲಿಲ್ಲ. ಆನೆ ದಾಳಿಯಿಂದ ಯಾರಿಗೂ ಗಾಯಗಳಾಗದಿದ್ದರೂ ಆತಂಕಕ್ಕೆ ಒಳಗಾದವರಿಗೆ ಕೌನ್ಸೆಲಿಂಗ್ ಮಾಡಲಾಗಿದೆ ಎಂದು ಹೇಳಿರುವುದು ವರದಿಯಾಗಿದೆ.
ವಿಡಿಯೋ ಇಲ್ಲಿದೆ ನೋಡಿ:
An elephant attacks a tourist truck in South Africa 🇿🇦 pic.twitter.com/BX8typkcUq
— Africa In Focus (@AfricaInFocus_) March 19, 2024
ಇದನ್ನೂ ಓದಿ: ಮೂರನೇ ಮಗು ಕೂಡ ಹೆಣ್ಣು ಎಂದು ಹೊಲದಲ್ಲಿ ಎಸೆದ ತಾಯಿ, ಮಗುವಿನ ಶವವನ್ನು ಎಳೆದೊಯ್ದ ಬೀದಿ ನಾಯಿಗಳು
ಸದ್ಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. @AfricaInFocus_ ಎಂಬ ಟ್ವಿಟರ್ ಖಾತೆಯಲ್ಲಿ ಮಾರ್ಚ್ 19ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ಇಲ್ಲಿಯವೆರೆಗೆ ಮೂರು ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ.
ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ