Shocking Video: 22 ಅಂತಸ್ತಿನ‌‌ ಕಟ್ಟಡದ ಮೇಲೆ ಮಕ್ಕಳ ಹುಡುಗಾಟ; ಪೋಷಕರನ್ನು ಬೆಚ್ಚಿಬೀಳಿಸಿರುವ ವಿಡಿಯೋ ಇಲ್ಲಿದೆ

ಮಕ್ಕಳಿಬ್ಬರು 22 ಅಂತಸ್ತಿನ ಕಟ್ಟಡದ ತುತ್ತ ತುದಿಯಲ್ಲಿ ನಿಂತು ಜಂಪಿಂಗ್ ಆಟ ಆಡುತ್ತಿದ್ದಾರೆ. ಶಾಕಿಂಗ್ ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್​ ವೈರಲ್​ ಆಗಿದೆ.

Shocking Video: 22 ಅಂತಸ್ತಿನ‌‌ ಕಟ್ಟಡದ ಮೇಲೆ ಮಕ್ಕಳ ಹುಡುಗಾಟ; ಪೋಷಕರನ್ನು ಬೆಚ್ಚಿಬೀಳಿಸಿರುವ ವಿಡಿಯೋ ಇಲ್ಲಿದೆ
22 ಅಂತಸ್ತಿನ‌‌ ಕಟ್ಟಡದ ಮೇಲೆ ಮಕ್ಕಳ ಹುಡುಗಾಟ
Follow us
TV9 Web
| Updated By: shruti hegde

Updated on: Nov 11, 2021 | 4:13 PM

ಸಾಮಾಜಿಕ ಜಾಲತಾಣದಲ್ಲಿ ಅದೆಷ್ಟೋ ವಿಡಿಯೊಗಳು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ಎಚ್ಚರಿಕೆಯ ಸಂದೇಶವನ್ನು ಸಾರುತ್ತವೆ. ಇದೀಗ ವೈರಲ್ ಆದ ವಿಡಿಯೊವೊಂದು ಎಲ್ಲಾ ಪಾಲಕರನ್ನು ಎಚ್ಚರಿಸುವಂತೆ ಮಾಡಿದೆ. ಮಕ್ಕಳಿಬ್ಬರು ಬಿಲ್ಡಿಂಗ್ ತುತ್ತ ತುದಿಯಲ್ಲಿ ನಿಂತು ಜಂಪ್ ಮಾಡುತ್ತಾ ಆಟವಾಡುತ್ತಿದ್ದಾರೆ. ಪೋಷಕರೇ ಎಚ್ಚರ! ವಿಡಿಯೊ ನೋಡಿದ ಮೇಲಾದರೂ ನೀವು ಎಚ್ಚೆತ್ತುಕೊಳ್ಳಬೇಕು. ಮಕ್ಕಳಿಬ್ಬರು 22 ಅಂತಸ್ತಿನ ಕಟ್ಟಡದ ತುತ್ತ ತುದಿಯಲ್ಲಿ ನಿಂತು ಜಂಪಿಂಗ್ ಆಟ ಆಡುತ್ತಿದ್ದಾರೆ. ಈ ಘಟನೆ ಚೀನಾದಲ್ಲಿ ನಡೆದಿದೆ. ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು ಫುಲ್ ವೈರಲ್ ಆಗಿದೆ.

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊ ಫುಲ್ ವೈರಲ್ ಆಗುತ್ತಿದ್ದಂತೆಯೇ ಜನರು ಮಕ್ಕಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂತಹ ಚಿಕ್ಕ ಮಕ್ಕಳನ್ನು ಕಟ್ಟಡದ ಮೇಲೆ ಹೋಗಲು ಯಾರು ಬಿಡುತ್ತಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ. ವಿಡಿಯೊವನ್ನು ಟ್ವಿಟರ್​ನಲ್ಲಿ ಹಂಚಿಕೊಳ್ಳಲಾಗಿದೆ. ಈ ಶಾಕಿಂಗ್ ವಿಡಿಯೊ ನೋಡಿದ ಕೆಲವರು ತಮ್ಮ ಅಭಿಪ್ರಾಯವನ್ನು ಕಾಮೆಂಟ್ ವಿಭಾಗದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ಎಲ್ಲಿಯದು ಎಂಬುದು ನನಗೆ ತಿಳಿದಿಲ್ಲ, ಆದರೆ ಮಕ್ಕಳಿಗೆ ಜನ್ಮ ನೀಡಿ ತಾಯಿಯಾಗಿರುವ ನನ್ನ ಮನಸ್ಸಿಗೆ ತುಂಬಾ ಹೆದರಿಕೆ ಅನಿಸುತ್ತಿದೆ ಎಂದು ಓರ್ವರು ಹೇಳಿದ್ದಾರೆ.

ವಿಡಿಯೊದಲ್ಲಿ ಗಮನಿಸುವಂತೆ ಕಟ್ಟಡದ ತುತ್ತ ತುದಿಯಲ್ಲಿ ಮಕ್ಕಳಿಬ್ಬರು ಆಟವಾಡುತ್ತಿರುವುದನ್ನು ನೀವು ನೋಡಬಹುದು. ಒಂದು ಬಿಲ್ಡಿಂಗ್​ನಿಂದ ಮತ್ತೊಂದು ಬಿಲ್ಡಿಂಗ್​ಗೆ ಜಂಪ್ ಮಾಡುತ್ತಾ ಇಬ್ಬರು ಆಟವಾಡುತ್ತಿದ್ದಾರೆ. ಈ ವಿಡಿಯೊ ಇದುವರೆಗೆ 28 ಸಾವಿರಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ಈ ವಿಡಿಯೊ ನೋಡಿದ ನೆಟ್ಟಿಗರು ಸಾಕಷ್ಟು ಅನಿಸಿಕೆ, ಅಭಿಪ್ರಾಯಗಳನ್ನು ತಿಳಿಸಿದ್ದು, ಇಬ್ಬರೂ ಮಕ್ಕಳ ಬಗ್ಗೆ ಕಾಳಜಿಯನ್ನು ವ್ಯಕ್ತಪಡಿಸಿದ್ದಾರೆ. ಇದರಿಂದ ಪ್ರತಿಯೊಬ್ಬರೂ ತಮ್ಮ ಮಕ್ಕಳ ಬಗ್ಗೆ ಕಾಳಜಿಯಿಂದಿರಬೇಕು. ಅವರು ಎಲ್ಲಿಗೆ ಹೋಗುತ್ತಾರೆ, ಏನೂ ಮಾಡುತ್ತಿದ್ದಾರೆ ಎಂಬುದರ ಬಗ್ಗೆ ಲಕ್ಷ್ಯವಿರಲಿ ಎಂದು ಕೆಲವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ:

Shocking News: ಮೇಕಪ್ ಇಲ್ಲದೆ ಎದುರು ಬಂದ ಹೆಂಡತಿಗೆ ಡೈವೋರ್ಸ್ ನೀಡಿದ ಪತಿರಾಯ!

Shocking Video: ನಿಯಂತ್ರಣ ತಪ್ಪಿ ರಸ್ತೆ ಬಿಟ್ಟು ಬಟ್ಟೆ ಅಂಗಡಿ ಒಳಗೆ ನುಗ್ಗಿದ ಬೈಕ್​; ಶಾಕಿಂಗ್​ ವಿಡಿಯೊ ವೈರಲ್​

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?