Shocking Video: 2 ಟ್ರಕ್​​ಗಳ ಮಧ್ಯೆ ಸಿಲುಕಿ ಕಾರು ಅಪ್ಪಚ್ಚಿ; ಭೀಕರ ಅಪಘಾತದಲ್ಲಿ ಓರ್ವ ಸಾವು

Shocking Video: 2 ಟ್ರಕ್​​ಗಳ ಮಧ್ಯೆ ಸಿಲುಕಿ ಕಾರು ಅಪ್ಪಚ್ಚಿ; ಭೀಕರ ಅಪಘಾತದಲ್ಲಿ ಓರ್ವ ಸಾವು
ಕಾರಿನ ಅಪಘಾತದ ವಿಡಿಯೋ

Viral Video: ಡಂಪ್ ಟ್ರಕ್ ಮತ್ತು ಅದರ ಮುಂದೆ ಇರುವ ಟ್ರಕ್ ನಡುವೆ ಸಿಲುಕಿದ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಮತ್ತು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

TV9kannada Web Team

| Edited By: Sushma Chakre

Apr 04, 2022 | 4:45 PM

ಭುವನೇಶ್ವರ: ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Road Accident) ಎರಡು ಟ್ರಕ್‌ಗಳ ನಡುವೆ ಕಾರೊಂದು ಅಪ್ಪಚ್ಚಿಯಾಗಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ದೃಶ್ಯಾವಳಿಗಳಲ್ಲಿ ಟ್ರಕ್ ರಸ್ತೆಯಲ್ಲಿ ನಿಂತಿರುವುದು ಕಂಡುಬಂದಿದೆ. ಅದರ ಹಿಂದೆಯೇ ಎರಡು ಕಾರುಗಳು ಸಹ ನಿಂತಿವೆ. ಕೆಲವು ಕ್ಷಣಗಳ ನಂತರ ಡಂಪ್ ಟ್ರಕ್ ಕಾರ್ ಒಂದಕ್ಕೆ ಡಿಕ್ಕಿ ಹೊಡೆದು, ನಂತರ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಎಡಕ್ಕೆ ತಿರುಗಿತು. ಇದರಿಂದ ಕಾರು ಅಪ್ಪಚ್ಚಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಡಂಪ್ ಟ್ರಕ್ ಮತ್ತು ಅದರ ಮುಂದೆ ಇರುವ ಟ್ರಕ್ ನಡುವೆ ಸಿಲುಕಿದ ಕಾರು ಸಂಪೂರ್ಣವಾಗಿ ನುಜ್ಜುಗುಜ್ಜಾಗಿದ್ದು, ಅದರೊಳಗೆ ಇದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಭುವನೇಶ್ವರದ ಪಲಸುನಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ-16ರಲ್ಲಿ ಈ ದುರ್ಘಟನೆ ನಡೆದಿದೆ. ಒಡಿಶಾದ ದಿನಪತ್ರಿಕೆ ಸಂಬಾದ್ ಪ್ರಕಾರ, ಈ ಅಪಘಾತದಲ್ಲಿ ಕಾರಿನ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಮತ್ತು ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ವಾಹನಗಳು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಟಕ್ ಕಡೆಗೆ ಹೋಗುತ್ತಿದ್ದವು ಎನ್ನಲಾಗಿದೆ.

ಈ ಟ್ರಕ್​ಗಳು ಮತ್ತು ಕಾರಿನ ನಡುವೆ ನಡೆದ ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ 5 ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು ಎಂದು ವರದಿ ತಿಳಿಸಿದೆ. ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಇದನ್ನೂ ಓದಿ: ಬೈಕ್​ನಲ್ಲಿ ತ್ರಿಬಲ್ ರೈಡ್; ಅಪಘಾತ ಸಂಭವಿಸಿ SSLC ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಸಾವು

Viral Video: ದೇವಸ್ಥಾನದ ಹೊರಗೆ ಬೆಂಕಿ ಹೊತ್ತಿಕೊಂಡು ಹೊಸ ರಾಯಲ್ ಎನ್​ಫೀಲ್ಡ್​ ಬೈಕ್​ ಸ್ಫೋಟ

Follow us on

Related Stories

Most Read Stories

Click on your DTH Provider to Add TV9 Kannada