Viral Video: ಕುಡಿದ ಮತ್ತಿನಲ್ಲಿ ರೈಲ್ವೆ ಹಳಿಯಲ್ಲಿ ಮಲಗಿದವನ ಮೇಲೆ ಹರಿದ ರೈಲು; ಆಮೇಲಾಗಿದ್ದು ಪವಾಡ!

Shocking News: ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ರೈಲು ಹಳಿಯ ಮೇಲೆ ಮಲಗಿದ್ದ ಕುಡುಕ ಅಚ್ಚರಿಯ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಕುಡಿದ ಅಮಲಿನಲ್ಲಿದ್ದ ಆ ವ್ಯಕ್ತಿಯ ಮೇಲೆ ರೈಲು ಹಾದುಹೋದರೂ ಆತ ಪವಾಡದ ರೀತಿಯಲ್ಲಿ ಪಾರಾಗಿದ್ದಾನೆ.

Viral Video: ಕುಡಿದ ಮತ್ತಿನಲ್ಲಿ ರೈಲ್ವೆ ಹಳಿಯಲ್ಲಿ ಮಲಗಿದವನ ಮೇಲೆ ಹರಿದ ರೈಲು; ಆಮೇಲಾಗಿದ್ದು ಪವಾಡ!
ರೈಲ್ವೆ ಹಳಿಯಲ್ಲಿ ಮಲಗಿದವನ ಮೇಲೆ ಹರಿದ ರೈಲು
Follow us
ಸುಷ್ಮಾ ಚಕ್ರೆ
|

Updated on: Aug 08, 2024 | 9:01 PM

ಬಿಜ್ನೋರ್: ಆಘಾತಕಾರಿ ಘಟನೆಯೊಂದರಲ್ಲಿ ಇಂದು ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ರೈಲು ಹಳಿ ಮೇಲೆ ಮಲಗಿದ್ದ ಕುಡಿದ ವ್ಯಕ್ತಿಯೊಬ್ಬರ ಮೇಲೆ ರೈಲು ಹಾದು ಹೋಗಿದ್ದರೂ ಅವರು ಅಚ್ಚರಿಯ ರೀತಿಯಲ್ಲಿ ಬದುಕುಳಿದಿದ್ದಾರೆ. ಇಂದು ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ ರೈಲು ಹಳಿ ಮೇಲೆ ಮಲಗಿದ್ದ ಕುಡುಕನೊಬ್ಬ ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇಂದು ಮುಂಜಾನೆ 3.30ರ ಸುಮಾರಿಗೆ ಬಿಜ್ನೋರ್ ನಗರದ ಆದಂಪುರ ರೈಲ್ವೇ ಕ್ರಾಸಿಂಗ್‌ನಲ್ಲಿ ವ್ಯಕ್ತಿಯೊಬ್ಬರು ರೈಲಿಗೆ ಡಿಕ್ಕಿ ಹೊಡೆದಿರಬಹುದು ಎಂದು ರೈಲು ಚಾಲಕ ಪೊಲೀಸರಿಗೆ ವರದಿ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದಾಗ, ನೇಪಾಳದ ಅಮರ್ ಬಹದ್ದೂರ್ ಎಂದು ಗುರುತಿಸಲಾದ ವ್ಯಕ್ತಿ ರೈಲ್ವೆ ಹಳಿಯ ಮಧ್ಯದಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಅದೃಷ್ಟವಶಾತ್, ಅಮರ್ ಬಹದ್ದೂರ್ ಜೀವಂತವಾಗಿದ್ದಾರೆ.

ಇದನ್ನೂ ಓದಿ: Viral Video: ಗಂಡ ಬೈದಿದ್ದಕ್ಕೆ ಮೂರನೇ ಮಹಡಿಯಿಂದ ಜಿಗಿದು ಪತ್ನಿ ಆತ್ಮಹತ್ಯೆ; ವಿಡಿಯೋ ವೈರಲ್​​​​​

ಈ ಘಟನೆಯ ವಿಡಿಯೋ ವೈರಲ್ ಆಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸುತ್ತಿದ್ದಂತೆಯೇ ವ್ಯಕ್ತಿ ಟ್ರ್ಯಾಕ್‌ನಿಂದ ಎದ್ದು ಹೋಗುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಮಸ್ಸೂರಿ ಎಕ್ಸ್‌ಪ್ರೆಸ್ ಯಾವುದೇ ಗಾಯವಾಗದೆ ನೇರವಾಗಿ ಅವರ ಮೇಲೆ ಹಾದು ಹೋಗಿತ್ತು. ರೈಲು ಚಾಲಕ ಆರಂಭದಲ್ಲಿ ಕೆಟ್ಟದಕ್ಕೆ ಹೆದರಿ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ನಂತರ ಬಹದ್ದೂರ್ ಅವರನ್ನು ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ