AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಅಡ್ಡ ಹಾಕಿದ ಪೊಲೀಸನ್ನೇ ರಸ್ತೆಯಲ್ಲಿ ಎಳೆದುಕೊಂಡು ಹೋದ ಕಾರು ಚಾಲಕ; ಶಾಕಿಂಗ್ ವಿಡಿಯೋ ವೈರಲ್

Viral Video | ಕಾರಿನ ಮುಂಭಾಗದಲ್ಲಿ ಕಪ್ಪು ಬಾವುಟ ಇದ್ದುದರಿಂದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಅನುಮಾನಗೊಂಡ ಪೊಲೀಸ್ ಕಾರು ನಿಲ್ಲಿಸುವಂತೆ ಅಡ್ಡಗಟ್ಟಿದ್ದಾರೆ. ಆದರೆ ಪೊಲೀಸನ್ನು ಎಳೆದುಕೊಂಡೇ ಹೋಗಿರುವ ಕಾರು ಚಾಲಕ ಪರಾರಿಯಾಗಿರುವ ವಿಡಿಯೋ ವೈರಲ್ ಆಗಿದೆ.

Shocking Video: ಅಡ್ಡ ಹಾಕಿದ ಪೊಲೀಸನ್ನೇ ರಸ್ತೆಯಲ್ಲಿ ಎಳೆದುಕೊಂಡು ಹೋದ ಕಾರು ಚಾಲಕ; ಶಾಕಿಂಗ್ ವಿಡಿಯೋ ವೈರಲ್
ಪೊಲೀಸನ್ನು ಎಳೆದುಕೊಂಡು ಹೋದ ಕಾರು
TV9 Web
| Updated By: ಸುಷ್ಮಾ ಚಕ್ರೆ|

Updated on: Aug 14, 2021 | 8:25 PM

Share

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಭಾರತದ ಎಲ್ಲ ರಾಜ್ಯಗಳಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಯಾವುದೇ ಅಹಿತಕರ ಹಾಗೂ ಶಾಂತಿ ಕದಡುವ ಘಟನೆಗಳು ನಡೆಯಬಾರದೆಂದು ಭದ್ರತೆಯತ್ತ ಹೆಚ್ಚಿನ ಎಚ್ಚರ ವಹಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚೆಕ್​ ಪೋಸ್ಟ್​ಗಳಲ್ಲಿ ಹಾಗೂ ಹೆದ್ದಾರಿಗಳಲ್ಲಿ ಪೊಲೀಸರು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ. ಈ ರೀತಿ ಕಾರೊಂದನ್ನು ಅಡ್ಡಹಾಕಿ ಭದ್ರತಾ ತಪಾಸಣೆಗೆ ಮುಂದಾದ ಪೊಲೀಸ್ ಸಿಬ್ಬಂದಿಯನ್ನು ಕಾರಿನೊಂದಿಗೇ ಎಳೆದುಕೊಂಡು ಹೋದ ಭಯಾನಕ ವಿಡಿಯೋ ವೈರಲ್ ಆಗಿದೆ.

ಪಂಜಾಬ್​ನ ಪಟಿಯಾಲದಲ್ಲಿ ಈ ಘಟನೆ ನಡೆದಿದ್ದು, ಕಾರಿಗೆ ಸಿಕ್ಕ ಪೊಲೀಸ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಎನ್​ಐ ಈ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದು, ವೇಗವಾಗಿ ಬಂದ ಕಾರನ್ನು ಅಡ್ಡಹಾಕಿದ ಪೊಲೀಸ್ ಆ ಕಾರನ್ನು ಪರಿಶೀಲನೆ ಮಾಡಲು ಮುಂದಾಗಿದ್ದಾರೆ. ಆದರೆ, ರಸ್ತೆಯಲ್ಲಿ ನಿಂತು ಅಡ್ಡಹಾಕಿದರೂ ಕಾರು ನಿಲ್ಲಿಸದ ಚಾಲಕ ವೇಗವಾಗಿ ಕಾರು ಚಲಾಯಿಸಿಕೊಂಡು ಮುಂದೆ ಹೋಗಿದ್ದಾನೆ. ಈ ವೇಳೆ ಕಾರಿನ ಎದುರಲ್ಲಿ ನಿಂತಿದ್ದ ಪೊಲೀಸ್ ಸಿಬ್ಬಂದಿ ತನ್ನ ಮೇಲೆ ಕಾರು ಹತ್ತುವುದನ್ನು ತಪ್ಪಿಸಿಕೊಳ್ಳಲು ಪಕ್ಕಕ್ಕೆ ಸರಿದಿದ್ದಾರೆ. ಎಷ್ಟು ಕೂಗಿದರೂ ಕಾರು ನಿಲ್ಲಿಸದ ಚಾಲಕ ಪೊಲೀಸನ್ನು ಎಳೆದುಕೊಂಡು ಕಾರನ್ನು ಚಲಾಯಿಸಿದ್ದಾನೆ. ಈ ವೇಳೆ ಕಾರಿನ ರಭಸಕ್ಕೆ ಪೊಲೀಸ್ ಹಣೆ ಕಾರಿನ ಎಡಭಾಗದ ಕನ್ನಡಿಗೆ ಬಡಿದಿದೆ. ಬಳಿಕ ಅವರು ರಸ್ತೆಯಲ್ಲಿ ಬಿದ್ದಿದ್ದಾರೆ.

ಕಾರಿನ ಮುಂಭಾಗದಲ್ಲಿ ಕಪ್ಪು ಬಾವುಟ ಇದ್ದುದರಿಂದ ಅನುಮಾನಗೊಂಡ ಪೊಲೀಸ್ ಕಾರು ನಿಲ್ಲಿಸುವಂತೆ ಅಡ್ಡಗಟ್ಟಿದ್ದಾರೆ. ಆದರೆ, ಚಾಲಕ ವೇಗವಾಗಿ ಚಲಾಯಿಸಿಕೊಂಡು ಹೋಗಿ ಎಸ್ಕೇಪ್ ಆಗಿದ್ದಾನೆ. ಗಾಯಗೊಂಡ ಪೊಲೀಸನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಕಾರು ಯಾರದ್ದು ಎಂಬುದನ್ನು ಪೊಲೀಸರು ಸಿಸಿಟಿವಿ ಮೂಲಕ ಪತ್ತೆಹಚ್ಚುತ್ತಿದ್ದಾರೆ.

ಇದನ್ನೂ ಓದಿ: Viral Video: ಸೀರೆಯುಟ್ಟು ಸ್ಟಂಟ್ ಮಾಡಿದ ಯುವತಿ ವಿಡಿಯೋ ವೈರಲ್; ಒಲಿಂಪಿಕ್ಸ್​ನಲ್ಲಿ ಸ್ಪರ್ಧಿಸಿ ಎಂದ ನೆಟ್ಟಿಗರು

Shocking Video: ಮಾಸ್ಕ್ ಧರಿಸದ್ದಕ್ಕೆ ದಂಡ ವಿಧಿಸಿದ ಅಧಿಕಾರಿಗೆ ಹಿಗ್ಗಾಮುಗ್ಗ ಥಳಿಸಿದ ಮಹಿಳೆ; ವಿಡಿಯೋ ವೈರಲ್

(Shocking Video: Punjab Police Dragged By Car He Was Trying To Stop For Checking Watch Viral Video)

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ