Shocking Video: ವಿದ್ಯಾರ್ಥಿಗಳ ಮೊಬೈಲ್​ಗಳನ್ನು ಕಸಿದುಕೊಂಡು ಸುಟ್ಟು ಹಾಕಿದ ಶಿಕ್ಷಕರು; ಶಾಕಿಂಗ್ ವಿಡಿಯೋ ಇಲ್ಲಿದೆ

Viral Video: ಇಂಡೋನೇಷ್ಯಾದಲ್ಲಿ ಶಾಲಾ ಶಿಕ್ಷಕರ ಗುಂಪೊಂದು ಕ್ಲಾಸ್​ ರೂಂನಲ್ಲಿ ಮಕ್ಕಳಿಂದ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಂಡು, ಬೆಂಕಿ ಹೊತ್ತಿಸಿರುವುದನ್ನು ವಿಡಿಯೋ ಮಾಡಲಾಗಿದೆ.

Shocking Video: ವಿದ್ಯಾರ್ಥಿಗಳ ಮೊಬೈಲ್​ಗಳನ್ನು ಕಸಿದುಕೊಂಡು ಸುಟ್ಟು ಹಾಕಿದ ಶಿಕ್ಷಕರು; ಶಾಕಿಂಗ್ ವಿಡಿಯೋ ಇಲ್ಲಿದೆ
ವಿದ್ಯಾರ್ಥಿಗಳ ಮೊಬೈಲ್​ಗೆ ಬೆಂಕಿ ಹಚ್ಚಿದ ಶಿಕ್ಷಕರು
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Feb 25, 2022 | 12:47 PM

ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ತಪ್ಪು ಮಾಡಿದರೆ ಶಿಕ್ಷಕರು ಶಿಕ್ಷೆ ನೀಡುವುದು ಸಾಮಾನ್ಯ. ಆದರೆ, ಶಾಲಾ- ಕಾಲೇಜಿನ ನಿಯಮಗಳನ್ನು ಉಲ್ಲಂಘಿಸುವ ಅಥವಾ ಕೆಟ್ಟದಾಗಿ ವರ್ತಿಸುವ ವಿದ್ಯಾರ್ಥಿಗಳು ಶಿಸ್ತಿನಿಂದ ಇರಲು ಶಿಕ್ಷೆಯ ಮೂಲಕ ಬುದ್ಧಿ ಕಲಿಸಲಾಗುತ್ತದೆ. ಭವಿಷ್ಯದಲ್ಲಿ ಮಕ್ಕಳು ತಪ್ಪು ಕೆಲಸಗಳನ್ನು ಮಾಡಬಾರದು ಎಂಬುದು ಇದರ ಉದ್ದೇಶವಾಗಿರುತ್ತದೆ. ಈ ದಿನಗಳಲ್ಲಿ ಅತ್ಯಂತ ಸಾಮಾನ್ಯವಾದ ಸ್ಮಾರ್ಟ್‌ಫೋನ್‌ಗಳನ್ನು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬಳಸಬಾರದು ಎಂದು ನಿಯಮವಿದೆ. ಅದರಿಂದ ಶಿಕ್ಷಕರು ತಮ್ಮ ವಿದ್ಯಾರ್ಥಿಗಳು ಕ್ಲಾಸ್​ರೂಂನೊಳಗೆ ಮೊಬೈಲನ್ನು ತಂದಿದ್ದನ್ನು ನೋಡಿ ಕೋಪಗೊಂಡು ಆ ಸ್ಮಾರ್ಟ್​​ಫೋನ್​​ಗಳನ್ನು (Smart phones) ಸುಟ್ಟು ಹಾಕಿರುವ ವಿಡಿಯೋ ಭಾರೀ ವೈರಲ್ ಆಗಿದೆ.

ಇಂಡೋನೇಷ್ಯಾದಲ್ಲಿ ಶಾಲಾ ಶಿಕ್ಷಕರ ಗುಂಪೊಂದು ಕ್ಲಾಸ್​ ರೂಂನಲ್ಲಿ ಮಕ್ಕಳಿಂದ ಸ್ಮಾರ್ಟ್‌ಫೋನ್‌ಗಳನ್ನು ವಶಪಡಿಸಿಕೊಂಡು, ಬೆಂಕಿ ಹೊತ್ತಿಸಿರುವುದನ್ನು ವಿಡಿಯೋ ಮಾಡಲಾಗಿದೆ. ವಿದ್ಯಾರ್ಥಿಗಳಿಂದ ಆ ಮೊಬೈಲ್​ಗಳನ್ನು ತೆಗೆದುಕೊಂಡು ಬೆಂಕಿಗೆ ಹಾಕಲಾಗಿದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್ ವಾಪಾಸ್ ನೀಡಬೇಕೆಂದು ಮನವಿ ಮತ್ತು ಅತ್ತರೂ ಶಿಕ್ಷಕರು ಕೇಳದೆ ಆ ಮೊಬೈಲ್​ಗಳನ್ನು ಸುಟ್ಟು ಹಾಕಿ, ಶಿಕ್ಷೆಯನ್ನು ನೀಡಿದ್ದಾರೆ.

ಈ ವಿಡಿಯೋ ತುಣುಕನ್ನು ಟಿಕ್‌ಟಾಕ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡ ನಂತರ ವೈರಲ್ ಆಗಿದೆ. ವಿದ್ಯಾರ್ಥಿಗಳು ಶಿಕ್ಷಕರಿಗೆ ಬೆಂಕಿ ಹೊತ್ತಿಸುವುದನ್ನು ನಿಲ್ಲಿಸುವಂತೆ ಮನವಿ ಮಾಡಿದರೂ ಅದು ವ್ಯರ್ಥವಾಗಿದೆ. ಇಂಡೋನೇಷ್ಯಾದಲ್ಲಿ ಈ ಘಟನೆ ಎಲ್ಲಿ ನಡೆದಿದೆ ಎಂಬ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಇಂಡೋನೇಷ್ಯಾದ ಬೋರ್ಡಿಂಗ್ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಹೇಳಿವೆ.

ಈ ವಿಡಿಯೋ ನೋಡಿ ಹಲವು ನೆಟ್ಟಿಗರು ಗರಂ ಆಗಿದ್ದಾರೆ. ಆಸ್ತಿಗೆ ಹಾನಿ ಮಾಡಿದ ಶಿಕ್ಷಕರನ್ನು ಶಿಕ್ಷಿಸಬೇಕು ಮತ್ತು ಮೊಕದ್ದಮೆ ಹೂಡಬೇಕು ಎಂದು ಕೆಲವರು ಹೇಳಿದ್ದಾರೆ. ಬಹುಶಃ ಬೋರ್ಡಿಂಗ್ ಶಾಲೆಯಲ್ಲಿ ಮೊಬೈಲ್ ಬಳಸುವುದನ್ನು ಅನೇಕ ಬಾರಿ ಖಂಡಿಸಲಾಗಿತ್ತು. ಆದರೂ ವಿದ್ಯಾರ್ಥಿಗಳು ಸೆಲ್‌ಫೋನ್‌ಗಳನ್ನು ತಂದಿದ್ದರಿಂದ ಈ ರೀತಿ ಮಾಡಲಾಗಿದೆ.

ಆ ಮೊಬೈಲ್ ಫೋನ್​ಗಳನ್ನು ಹಾಗೇ ವಾಪಾಸ್ ಕೊಟ್ಟು ಬುದ್ಧಿ ಹೇಳಬಹುದಿತ್ತು, ಆ ಮಕ್ಕಳ ಮನೆಗೆ ಮೊಬೈಲ್ ಫೋನ್​ಗಳನ್ನು ಕಳುಹಿಸಬಹುದಿತ್ತು. ಈ ರೀತಿ ಫೋನ್​​ಗಳನ್ನು ಸುಟ್ಟು ಹಾಕಬಾರದಿತ್ತು ಎಂದು ಹಲವರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Shocking Video: ಕೊರೊನಾ ಲಸಿಕೆಯಿಂದ ಪಾರಾಗಲು ಮರವೇರಿ ಕುಳಿತ ವ್ಯಕ್ತಿ; ವೈರಲ್ ವಿಡಿಯೋ ಇಲ್ಲಿದೆ

Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್

Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ