ಶಾಲೆ ಮತ್ತು ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ತಪ್ಪು ಮಾಡಿದರೆ ಶಿಕ್ಷಕರು ಶಿಕ್ಷೆ ನೀಡುವುದು ಸಾಮಾನ್ಯ. ಆದರೆ, ಶಾಲಾ- ಕಾಲೇಜಿನ ನಿಯಮಗಳನ್ನು ಉಲ್ಲಂಘಿಸುವ ಅಥವಾ ಕೆಟ್ಟದಾಗಿ ವರ್ತಿಸುವ ವಿದ್ಯಾರ್ಥಿಗಳು ಶಿಸ್ತಿನಿಂದ ಇರಲು ಶಿಕ್ಷೆಯ ಮೂಲಕ ಬುದ್ಧಿ ಕಲಿಸಲಾಗುತ್ತದೆ. ಭವಿಷ್ಯದಲ್ಲಿ ಮಕ್ಕಳು ತಪ್ಪು ಕೆಲಸಗಳನ್ನು ಮಾಡಬಾರದು ಎಂಬುದು ಇದರ ಉದ್ದೇಶವಾಗಿರುತ್ತದೆ. ಈ ದಿನಗಳಲ್ಲಿ ಅತ್ಯಂತ ಸಾಮಾನ್ಯವಾದ ಸ್ಮಾರ್ಟ್ಫೋನ್ಗಳನ್ನು ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಬಳಸಬಾರದು ಎಂದು ನಿಯಮವಿದೆ. ಅದರಿಂದ ಶಿಕ್ಷಕರು ತಮ್ಮ ವಿದ್ಯಾರ್ಥಿಗಳು ಕ್ಲಾಸ್ರೂಂನೊಳಗೆ ಮೊಬೈಲನ್ನು ತಂದಿದ್ದನ್ನು ನೋಡಿ ಕೋಪಗೊಂಡು ಆ ಸ್ಮಾರ್ಟ್ಫೋನ್ಗಳನ್ನು (Smart phones) ಸುಟ್ಟು ಹಾಕಿರುವ ವಿಡಿಯೋ ಭಾರೀ ವೈರಲ್ ಆಗಿದೆ.
ಇಂಡೋನೇಷ್ಯಾದಲ್ಲಿ ಶಾಲಾ ಶಿಕ್ಷಕರ ಗುಂಪೊಂದು ಕ್ಲಾಸ್ ರೂಂನಲ್ಲಿ ಮಕ್ಕಳಿಂದ ಸ್ಮಾರ್ಟ್ಫೋನ್ಗಳನ್ನು ವಶಪಡಿಸಿಕೊಂಡು, ಬೆಂಕಿ ಹೊತ್ತಿಸಿರುವುದನ್ನು ವಿಡಿಯೋ ಮಾಡಲಾಗಿದೆ. ವಿದ್ಯಾರ್ಥಿಗಳಿಂದ ಆ ಮೊಬೈಲ್ಗಳನ್ನು ತೆಗೆದುಕೊಂಡು ಬೆಂಕಿಗೆ ಹಾಕಲಾಗಿದೆ. ವಿದ್ಯಾರ್ಥಿಗಳು ತಮ್ಮ ಮೊಬೈಲ್ ವಾಪಾಸ್ ನೀಡಬೇಕೆಂದು ಮನವಿ ಮತ್ತು ಅತ್ತರೂ ಶಿಕ್ಷಕರು ಕೇಳದೆ ಆ ಮೊಬೈಲ್ಗಳನ್ನು ಸುಟ್ಟು ಹಾಕಿ, ಶಿಕ್ಷೆಯನ್ನು ನೀಡಿದ್ದಾರೆ.
ಈ ವಿಡಿಯೋ ತುಣುಕನ್ನು ಟಿಕ್ಟಾಕ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡ ನಂತರ ವೈರಲ್ ಆಗಿದೆ. ವಿದ್ಯಾರ್ಥಿಗಳು ಶಿಕ್ಷಕರಿಗೆ ಬೆಂಕಿ ಹೊತ್ತಿಸುವುದನ್ನು ನಿಲ್ಲಿಸುವಂತೆ ಮನವಿ ಮಾಡಿದರೂ ಅದು ವ್ಯರ್ಥವಾಗಿದೆ. ಇಂಡೋನೇಷ್ಯಾದಲ್ಲಿ ಈ ಘಟನೆ ಎಲ್ಲಿ ನಡೆದಿದೆ ಎಂಬ ಬಗ್ಗೆ ಯಾವುದೇ ಉಲ್ಲೇಖವಿಲ್ಲ. ಇಂಡೋನೇಷ್ಯಾದ ಬೋರ್ಡಿಂಗ್ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್ಗಳು ಹೇಳಿವೆ.
ಈ ವಿಡಿಯೋ ನೋಡಿ ಹಲವು ನೆಟ್ಟಿಗರು ಗರಂ ಆಗಿದ್ದಾರೆ. ಆಸ್ತಿಗೆ ಹಾನಿ ಮಾಡಿದ ಶಿಕ್ಷಕರನ್ನು ಶಿಕ್ಷಿಸಬೇಕು ಮತ್ತು ಮೊಕದ್ದಮೆ ಹೂಡಬೇಕು ಎಂದು ಕೆಲವರು ಹೇಳಿದ್ದಾರೆ. ಬಹುಶಃ ಬೋರ್ಡಿಂಗ್ ಶಾಲೆಯಲ್ಲಿ ಮೊಬೈಲ್ ಬಳಸುವುದನ್ನು ಅನೇಕ ಬಾರಿ ಖಂಡಿಸಲಾಗಿತ್ತು. ಆದರೂ ವಿದ್ಯಾರ್ಥಿಗಳು ಸೆಲ್ಫೋನ್ಗಳನ್ನು ತಂದಿದ್ದರಿಂದ ಈ ರೀತಿ ಮಾಡಲಾಗಿದೆ.
ಆ ಮೊಬೈಲ್ ಫೋನ್ಗಳನ್ನು ಹಾಗೇ ವಾಪಾಸ್ ಕೊಟ್ಟು ಬುದ್ಧಿ ಹೇಳಬಹುದಿತ್ತು, ಆ ಮಕ್ಕಳ ಮನೆಗೆ ಮೊಬೈಲ್ ಫೋನ್ಗಳನ್ನು ಕಳುಹಿಸಬಹುದಿತ್ತು. ಈ ರೀತಿ ಫೋನ್ಗಳನ್ನು ಸುಟ್ಟು ಹಾಕಬಾರದಿತ್ತು ಎಂದು ಹಲವರು ಕಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ: Shocking Video: ಕೊರೊನಾ ಲಸಿಕೆಯಿಂದ ಪಾರಾಗಲು ಮರವೇರಿ ಕುಳಿತ ವ್ಯಕ್ತಿ; ವೈರಲ್ ವಿಡಿಯೋ ಇಲ್ಲಿದೆ
Shocking Video: ಹೋಟೆಲ್ ಊಟದಲ್ಲಿ ಶಿಶ್ನದ ತುಂಡು ಪತ್ತೆ!; ತಿನ್ನೋ ಆಹಾರದಲ್ಲಿ ಗುಪ್ತಾಂಗ ಕಂಡು ಮಹಿಳೆ ಶಾಕ್