ಫೋನ್​​​ ಪಕ್ಕಕಿಡು ಎಂದು ಗದರಿಸಿದ ಹೆತ್ತವರ ವಿರುದ್ದ ಎಫ್ಐಆರ್ ದಾಖಲಿಸಿದ ಮಕ್ಕಳು

21 ವರ್ಷದ ಯುವತಿ ಆಕೆಯ 8 ವರ್ಷದ ಸಹೋದರನೊಂದಿಗೆ ಪೊಲೀಸ್​​ ಠಾಣೆಗೆ ಹೋಗಿ ತನ್ನ ಪೋಷಕರ ವಿರುದ್ದ ಕೇಸು ದಾಖಲಿಸಿದ್ದಾಳೆ. ಮೊಬೈಲ್ ಬಳಸಿದರೆ ಮನೆಯಲ್ಲಿ ಅಪ್ಪ ಅಮ್ಮ ಗದರಿಸುತ್ತಾರೆ, ಕೆಲವೊಮ್ಮೆ ಹೊಡೆಯುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ದಂಪತಿ ವಿರುದ್ಧ ಬಾಲನ್ಯಾಯ ಕಾಯ್ದೆಯಡಿ ಕೇಸು ದಾಖಲಾಗಿದೆ.

ಫೋನ್​​​ ಪಕ್ಕಕಿಡು ಎಂದು ಗದರಿಸಿದ ಹೆತ್ತವರ ವಿರುದ್ದ ಎಫ್ಐಆರ್ ದಾಖಲಿಸಿದ ಮಕ್ಕಳು
Follow us
ಅಕ್ಷತಾ ವರ್ಕಾಡಿ
|

Updated on:Aug 03, 2024 | 2:50 PM

ಮಧ್ಯಪ್ರದೇಶ: ಫೋನ್​​ ನೋಡಿದ್ದು ಸಾಕು, ಪಕ್ಕಕಿಡು ಎಂದು ಗದರಿಸಿದ ಪೋಷಕರ ವಿರುದ್ದ ಇಬ್ಬರು ಮಕ್ಕಳು ಎಫ್ಐಆರ್ ದಾಖಲಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. 21 ವರ್ಷದ ಯುವತಿ ಆಕೆಯ 8 ವರ್ಷದ ಸಹೋದರನೊಂದಿಗೆ ಚಂದನ್ ನಗರ ಪೊಲೀಸ್ ಠಾಣೆಗೆ ಆಗಮಿಸಿ ತಮ್ಮ ಪೋಷಕರ ವಿರುದ್ಧ ದೂರು ದಾಖಲಿಸಿದ್ದಾರೆ.

ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಪೊಲೀಸರು ಪೋಷಕರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. ಇದನ್ನು ಪ್ರಶ್ನಿಸಿ ದಂಪತಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಬಳಿಕ ಜಿಲ್ಲಾ ನ್ಯಾಯಾಲಯದಲ್ಲಿ ದಂಪತಿ ವಿರುದ್ಧ ಆರಂಭವಾದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.

ವಕೀಲ ಧರ್ಮೇಂದ್ರ ಚೌಧರಿ ಅವರ ಪ್ರಕಾರ, ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯಲ್ಲಿ, 2021 ರ ಅಕ್ಟೋಬರ್ 25 ರಂದು ಮಕ್ಕಳು ಪೊಲೀಸ್ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಮೊಬೈಲ್ ಬಳಸಿದರೆ ಮನೆಯಲ್ಲಿ ಅಪ್ಪ ಅಮ್ಮ ಹೊಡೆಯುತ್ತಾರೆ, ಗದರಿಸುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪಾಲಕರ ವಿರುದ್ಧ ಬಾಲನ್ಯಾಯ ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಅನಾರೋಗ್ಯದಿಂದ ತಾಯಿ ಸಾವು, ಯಾರಿಗೂ ಹೇಳದೆ ಮೃತದೇಹದೊಂದಿಗೆ 4 ದಿನ ಕಳೆದ 14 ವರ್ಷದ ಮಗ

ಎಫ್‌ಐಆರ್ ದಾಖಲಾದ ನಂತರ ಇಬ್ಬರೂ ಮಕ್ಕಳು ತಮ್ಮ ಚಿಕ್ಕಮ್ಮನೊಂದಿಗೆ ವಾಸಿಸುತ್ತಿರುವುದಾಗಿ ವರದಿಯಾಗಿದೆ. ಮಕ್ಕಳು ಮೊಬೈಲ್, ಟಿವಿ ಚಟದಿಂದ ಪ್ರತಿ ಪೋಷಕರೂ ತೊಂದರೆ ಅನುಭವಿಸುತ್ತಿದ್ದಾರೆ. ಮಕ್ಕಳನ್ನು ಬೈಯುವುದು ತೀರಾ ಸಾಮಾನ್ಯ ಸಂಗತಿ, ಇದರಲ್ಲಿ ಕೋರ್ಟ್​​ ಕೇಸು ಅಗತ್ಯವಿರಲಿಲ್ಲ ಎಂದು ಎಫ್‌ಐಆರ್ ದಾಖಲಿಸುವ ಮುನ್ನ ದಂಪತಿ ನ್ಯಾಯಾಲಯದಲ್ಲಿ ಹಲವು ಬಾರಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:06 am, Sat, 3 August 24

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್