Video Viral : ವೃದ್ದೆಯನ್ನು ಅಲ್ಯೂಮಿನಿಯಂ ಪಾತ್ರೆಯಲ್ಲಿ ಕೂರಿಸಿ ಹೊಳೆ ದಾಟಿ ಆಸ್ಪತ್ರೆಗೆ ಕರೆದುಕೊಂಡು ಬಂದ ವ್ಯಕ್ತಿ

|

Updated on: Jul 30, 2024 | 12:10 PM

ಮಳೆಯಿಂದಾಗಿ ಒಂದು ಕಡೆಯಿಂದ ಮತ್ತೊಂದು ಸ್ಥಳಕ್ಕೆ ತೆರಳಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದ್ದು,ಇದೀಗ ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ದೆಯೊಬ್ಬರನ್ನು ದೊಡ್ಡ ಅಲ್ಯೂಮಿನಿಯಂ ಪಾತ್ರೆಯಲ್ಲಿ ಕುಳ್ಳಿರಿಸಿ ಪ್ರವಾಹದ ಹೊಳೆಯನ್ನು ದಾಟಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

Video Viral : ವೃದ್ದೆಯನ್ನು ಅಲ್ಯೂಮಿನಿಯಂ ಪಾತ್ರೆಯಲ್ಲಿ ಕೂರಿಸಿ ಹೊಳೆ ದಾಟಿ ಆಸ್ಪತ್ರೆಗೆ ಕರೆದುಕೊಂಡು ಬಂದ ವ್ಯಕ್ತಿ
Follow us on

ವಿಶಾಖಪಟ್ಟಣಂ: ದೇಶದ ಹಲವು ಗ್ರಾಮಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ. ಅತಿವೃಷ್ಟಿಯಿಂದಾಗಿ ದೇಶದ ಹಲವೆಡೆ ಪ್ರವಾಹ ಉಂಟಾಗಿದ್ದು, ಜನರು ಒಂದು ಕಡೆಯಿಂದ ಮತ್ತೊಂದು ಸ್ಥಳಕ್ಕೆ ತೆರಳಲು ಪರದಾಡುವಂತಾಗಿದೆ. ಇದೇ ರೀತಿಯ ಘಟನೆಯಲ್ಲಿ, ಆಂಧ್ರಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ದೆಯನ್ನು ದೊಡ್ಡ ಅಲ್ಯೂಮಿನಿಯಂ ಪಾತ್ರೆಯಲ್ಲಿ ಕುಳ್ಳಿರಿಸಿ ಪ್ರವಾಹದ ಹೊಳೆಯನ್ನು ದಾಟಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದೆ.

ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಪೇಡದ ಜಾಮಿಗುಡಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಹಿರಿಯ ಮಹಿಳೆಯೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ತುರ್ತಾಗಿ ಭೇಟಿ ನೀಡಬೇಕಾಗಿತ್ತು. ಆದರೆ, ನಿರಂತರ ಮಳೆಯಿಂದಾಗಿ ಗ್ರಾಮವು ಜಿಲ್ಲೆಯಿಂದ ಸಂಪರ್ಕ ಕಡಿತಗೊಂಡಿದ್ದರಿಂದ ಆಕೆಗೆ ಪ್ರಯಾಣಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಗ್ರಾಮಸ್ಥರು ಮಹಿಳೆಯನ್ನು ಅಲ್ಯೂಮಿನಿಯಂ ಪಾತ್ರೆಯಲ್ಲಿ ಕುಳ್ಳಿರಿಸಿ ಪ್ರವಾಹದ ಹೊಳೆಯನ್ನು ದಾಟಿಸಿದ್ದಾರೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಕ್ಲಾಸ್​​ ರೂಮ್​​ನಲ್ಲೇ ನಿದ್ದೆಗೆ ಜಾರಿದ ಶಿಕ್ಷಕಿ, ಬೀಸಣಿಗೆಯಿಂದ ಗಾಳಿ ಹಾಕಿದ ಪುಟ್ಟ ಮಕ್ಕಳು: ವಿಡಿಯೋ ನೋಡಿ

ವೈರಲ್​ ಆಗಿರುವ ವಿಡಿಯೋದಲ್ಲಿ ದೊಡ್ಡ ವೃದ್ಧೆಯನ್ನು ಅಲ್ಯೂಮಿನಿಯಂ ಪಾತ್ರೆಯಲ್ಲಿ ಕುಳ್ಳಿರಿಸಿ ತುಂವಿ ಹರಿಯುತ್ತಿದ್ದ ಹೊಳೆಯನ್ನು ದಾಟಿಸುತ್ತಿರುವುದು ಸೆರೆಯಾಗಿದೆ. ದೊಡ್ಡ ಪಾತ್ರೆಯನ್ನು ನೀರಿನಲ್ಲಿ ದೂಡುತ್ತಾ ಬಹಳ ಕಷ್ಟದಿಂದ ಹೊಳೆಯನ್ನು ದಾಟುತ್ತಿರುವುದನ್ನು ಕಾಣಬಹುದು. ವಿಡಿಯೋ ಎಲ್ಲೆಡೆ ವೈರಲ್​ ಆಗುತ್ತಿದ್ದಂತೆ ನೆಟ್ಟಿಗರಿಂದ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆಂಧ್ರಪ್ರದೇಶದಲ್ಲಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೇತೃತ್ವದ ನೂತನ ಸರ್ಕಾರವು ಆದಿವಾಸಿಗಳು ನಿತ್ಯವೂ ತೊಂದರೆ ಎದುರಿಸುತ್ತಿರುವ ಈ ಗ್ರಾಮಗಳ ಮೂಲಸೌಕರ್ಯಗಳ ಸುಧಾರಣೆಗೆ ಮೊದಲು ಶ್ರಮಿಸಬೇಕು ಎಂದು ನೆಟ್ಟಿಗರು ಕಾಮೆಂಟ್​​​ನಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:02 pm, Tue, 30 July 24