AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳ ಜತೆಗೆ ನಿಂತು ಪ್ರಾರ್ಥನೆಯಲ್ಲಿ ಭಾಗಿಯಾದ ಶ್ವಾನ

ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ವಿಡಿಯೋಗಳು ಬಹುಬೇಗನೆ ನೆಟ್ಟಿಗರ ಹೃದಯ ಗೆಲ್ಲುತ್ತದೆ. ಇದೀಗ ಬೀದಿ ನಾಯಿಯೊಂದು ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳ ಜತೆಗೆ ಸಾಲಿನಿಂದ ನಿಂತುಕೊಂಡಿರುವ ವಿಡಿಯೋ ವೈರಲ್ ಆಗಿದೆ. ಈ ದೃಶ್ಯ ನೆಟ್ಟಿಗರ ಗಮನ ಸೆಳೆದಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಸ್ಕೂಲ್ ಅಸೆಂಬ್ಲಿಯಲ್ಲಿ ಮಕ್ಕಳ ಜತೆಗೆ ನಿಂತು ಪ್ರಾರ್ಥನೆಯಲ್ಲಿ ಭಾಗಿಯಾದ ಶ್ವಾನ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: May 26, 2026 | 7:26 PM

Share

ಸಿಕ್ಕಿಂ, ಮೇ 26: ಶ್ವಾನಗಳ (Dog) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿ ಇಲ್ಲ. ಮನೆಯಲ್ಲಿ ಸಾಕಿದ ಶ್ವಾನವೇ ಇರಲಿ, ಬೀದಿ ನಾಯಿಯೇ ಇರಲಿ, ಒಮ್ಮೆ ಪ್ರೀತಿ ತೋರಿದರೆ ಅವುಗಳು ಜೀವನ ಪರ್ಯಂತ ನೆನೆಪಿಟ್ಟುಕೊಳ್ಳುತ್ತದೆ. ಹೀಗಿರುವಾಗ ಬೀದಿ ನಾಯಿಯೊಂದು ವಿದ್ಯಾರ್ಥಿಗಳನ್ನೇ ಫ್ರೆಂಡ್ಸ್ ಮಾಡಿಕೊಂಡಿದೆ. ಇದೀಗ ಸ್ಕೂಲ್ ಅಸೆಂಬ್ಲಿಯ ವೇಳೆ ಸಿಕ್ಕಿಂನ (Sikkim) ಶಾಲೆಯೊಂದರಲ್ಲಿನ ಅಪರೂಪದ ದೃಶ್ಯವೊಂದು ಕಂಡು ಬಂದಿದೆ. ಹೌದು, ಮಕ್ಕಳ ಜತೆಗೆ ಸಾಲಿನಲ್ಲಿ ನಿಂತು ಪ್ರಾರ್ಥನೆಯಲ್ಲಿ ಭಾಗಿಯಾಗಿರುವ ದೃಶ್ಯವು ಎಲ್ಲರ ಗಮನ ಸೆಳೆದಿದೆ.

ಪ್ರಸನ್ನ ಪಖ್ರಿನ್ (Prasanna Pakhrin) ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಶ್ವಾನವೊಂದು ಸ್ಕೂಲ್ ಅಸೆಂಬ್ಲಿಯಲ್ಲಿ ಭಾಗಿಯಾಗಿರುವ ವಿಡಿಯೋ ಹಂಚಿಕೊಂಡಿದ್ದಾರೆ. ವಿದ್ಯಾರ್ಥಿಗಳು ಸಾಲಾಗಿ ಶಾಲಾ ಆವರಣದಲ್ಲಿ ನಿಂತುಕೊಂಡಿರುವುದನ್ನು ಕಾಣಬಹುದು. ಇದೇ ವೇಳೆ ಬೀದಿ ನಾಯಿಯೊಂದು ಸ್ಕೂಲ್ ಅಸೆಂಬ್ಲಿ ನಡೆಯುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದೆ. ಮಕ್ಕಳ ಜತೆಗೆ ಸಾಲಿನಲ್ಲಿ ನಿಂತುಕೊಂಡ ಶ್ವಾನವು ತನ್ನ ಎರಡು ಕಾಲುಗಳನ್ನು ಮೇಲೆತ್ತಿಕೊಂಡು ಪ್ರಾರ್ಥನೆಯಲ್ಲಿ ಭಾಗಿಯಾಗಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ಮುಗ್ಧ ಮನಸ್ಸುಗಳ ಶುದ್ಧ ಸ್ನೇಹ: ಬೀದಿ ನಾಯಿ ಜತೆಗೆ ಆಟವಾಡಿದ ಪುಟಾಣಿಗಳು

ಈ ವಿಡಿಯೋ ಒಂಭತ್ತು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಶ್ವಾನವು ಈ ಪುಟಾಣಿಗಳ ಆಪ್ತ ಸ್ನೇಹಿತ ಎಂದಿದ್ದಾರೆ. ಇನ್ನೊಬ್ಬರು, ಮಕ್ಕಳಿಗಿಂತ ಈ ಶ್ವಾನವೇ ಶಿಸ್ತಿನ ಸಿಪಾಯಿಯಂತಿದೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಮುದ್ದಾಗಿದೆ ಈ ವಿಡಿಯೋ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ