AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಕೈ ಡೈವಿಂಗ್ ವೇಳೆ 820 ಅಡಿ ಎತ್ತರದಿಂದ ಬಿದ್ದುಅನುಭವಿ ತರಬೇತುದಾರ ಸಾವು

ಸ್ಕೈಡೈವಿಂಗ್ ವೇಳೆ ವ್ಯಕ್ತಿಯೊಬ್ಬ ಪರ್ವತದಿಂದ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ಬ್ರೆಜಿಲ್‌ನ ಸಾವೊ ಕಾನ್ರಾಡೊದಲ್ಲಿ ನಡೆದಿದೆ. ಇಡೀ ಘಟನೆ ಸಮೀಪದಲ್ಲಿ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯ ಫೋನ್‌ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

Viral Video: ಸ್ಕೈ ಡೈವಿಂಗ್ ವೇಳೆ 820 ಅಡಿ ಎತ್ತರದಿಂದ ಬಿದ್ದುಅನುಭವಿ ತರಬೇತುದಾರ ಸಾವು
Skydiving Tragedy
ಅಕ್ಷತಾ ವರ್ಕಾಡಿ
|

Updated on:Nov 08, 2024 | 12:52 PM

Share

ಅನೇಕ ಜನರು ಜೀವನದಲ್ಲಿ ಸಾಹಸ ಮತ್ತು ಥ್ರಿಲ್ ಬಯಸುತ್ತಾರೆ. ಇದಕ್ಕಾಗಿ ಅನೇಕ ಸಾಹಸ ಕ್ರೀಡೆಗಳನ್ನು ಆಡುತ್ತಾರೆ. ಆದರೆ ಈ ಸಾಹಸ ಚಟುವಟಿಕೆಗಳನ್ನು ಮಾಡುವಾಗ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.ಅನೇಕ ಬಾರಿ ಸಣ್ಣ ತಪ್ಪಿನಿಂದ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ. ಇದೀಗ ಅಂತದ್ದೇ ಘಟನೆಯೊಂದು ಬೆಳಕಿಗೆ ಬಂದಿದೆ. ಸ್ಕೈಡೈವಿಂಗ್ ವೇಳೆ ವ್ಯಕ್ತಿಯೊಬ್ಬ ಪರ್ವತದಿಂದ ಕೆಳಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ. ಇಡೀ ಘಟನೆ ಸಮೀಪದಲ್ಲಿ ವಿಡಿಯೋ ಮಾಡುತ್ತಿದ್ದ ವ್ಯಕ್ತಿಯ ಫೋನ್‌ನಲ್ಲಿ ಸೆರೆಹಿಡಿಯಲಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಸ್ಕೈ ಡೈವಿಂಗ್ ತರಬೇತುದಾರ ಅಪಘಾತದಲ್ಲಿ ಸಾವು:

20 ವರ್ಷಗಳಿಂದ ಸ್ಕೈ ಡೈವಿಂಗ್ ತರಬೇತುದಾರಾಗಿ ಕೆಲಸ ಮಾಡುತ್ತಿದ್ದ ಬ್ರೆಜಿಲ್‌ನ ಜೋಸ್ ಡಿ ಅಲೆಂಕಾರ್ ಲಿಮಾ ಜೂನಿಯರ್ ಎತ್ತರದ ಬೆಟ್ಟದಿಂದ ನೇರವಾಗಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಬ್ರೆಜಿಲ್‌ನ ಸಾವೊ ಕಾನ್ರಾಡೊ ಪ್ರದೇಶದಲ್ಲಿ 820 ಅಡಿ ಎತ್ತರದಿಂದ ಸ್ಕೈಡೈವಿಂಗ್ ಮಾಡಲು ತಯಾರಿ ನಡೆಸುತ್ತಿರುವ ವೇಳೆ ಈ ಘಟನೆ ನಡೆದಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: Success Story: ಯೂಟ್ಯೂಬ್​ನಲ್ಲಿ ಅಡುಗೆ ಚಾನಲ್ ಪ್ರಾರಂಭಿಸಿ ನಂ. 1 ಶ್ರೀಮಂತೆಯಾದ ನಿಶಾ ಮಧುಲಿಕಾ

ನ್ಯೂಯಾರ್ಕ್ ಪೋಸ್ಟ್ ವರದಿಯ ಪ್ರಕಾರ, ಲಿಮಾ ಜಿಗಿಯಲು ಮುಂದಾದ ತಕ್ಷಣ, ಅವರ ಪ್ಯಾರಾಚೂಟ್ ಕಂದಕಕ್ಕೆ ಬಿದ್ದಿದೆ. ಇದೀಗ ಬ್ರೆಜಿಲ್ ಪೊಲೀಸರು ಅವರ ಸ್ಕೈಡೈವಿಂಗ್ ಉಪಕರಣಗಳಲ್ಲಿ ಏನಾದರೂ ದೋಷವಿತ್ತೇ ಎಂದು ತನಿಖೆ ನಡೆಸುತ್ತಿದ್ದಾರೆ. ಸದ್ಯ ಘಟನೆಗೆ ಸಂಬಂಧಿಸಿದ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ಭಾರೀ ವೈರಲ್​ ಆಗುತ್ತಿದ್ದಂತೆ ನೆಟ್ಟಿ್ರು ಬಗೆಬಗೆಯಾಗಿ ಕಾಮೆಂಟ್​ ಮಾಡಿದ್ದಾರೆ. “ನನ್ನ ಜೀವನದಲ್ಲಿ ನಾನು ಸ್ಕೈ ಡೈವಿಂಗ್ ಮಾಡುವುದಿಲ್ಲ” ಎಂದು ಒಬ್ಬ ಬಳಕೆದಾರರು ಬರೆದರೆ, ಮತ್ತೊಬ್ಬರು ” ಇಂತಹ ಸಾಹಸ ಕ್ರೀಡೆ ನಿಷೇಧಿಸಬೇಕೆಂದು” ಒತ್ತಾಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:50 pm, Fri, 8 November 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ನಂದಿ ಧ್ವಜಕ್ಕೆ ಡಿಕೆಶಿ ಪೂಜೆ ಸಲ್ಲಿಕೆ:ಮೈಸೂರಿನಲ್ಲಿ ಮರುಕಳಿಸಿದ ಗತ ವೈಭವ
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಮೊದಲ ಬಾರಿ ವಜ್ರಮುಷ್ಠಿ ಕಾಳಗ ರದ್ದು, ಮೈಸೂರಿನ ಜಟ್ಟಿ ಮಹೇಶ್ ರಿಯಾಕ್ಷನ್
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
ಸೌಜನ್ಯ ಪ್ರಕರಣ: ಇನ್ನೆರಡು ದಿನದಲ್ಲಿ ಅಪರಾಧ ಸ್ಥಳಕ್ಕೆ ಎಸ್​ಐಟಿ ಭೇಟಿ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
Live: ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ನೇರಪ್ರಸಾರ
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಡಿಕೆಶಿ ಭೇಟಿ!
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ
ಅರಮನೆಯಿಂದಲೇ ಅಮ್ಮನ ಜೊತೆಗೆ ಆದ್ಯವೀರ್, ಯುಗಾಧ್ಯಕ್ಷ ಪೂಜೆ ವೀಕ್ಷಣೆ
ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಬಂದ ಸಿಎಂ ಹೇಳಿದ್ದೇನು ನೋಡಿ
ಜಂಬೂ ಸವಾರಿಗೆ ಚಾಲನೆ ನೀಡಲು ಮೈಸೂರಿಗೆ ಬಂದ ಸಿಎಂ ಹೇಳಿದ್ದೇನು ನೋಡಿ
ಮೈಸೂರು ದಸರಾ 2026: ಆನೆಗಳ ಮೈಮೇಲೆ ಮೂಡಿದ ಬಣ್ಣ ಬಣ್ಣದ ಚಿತ್ತಾರ
ಮೈಸೂರು ದಸರಾ 2026: ಆನೆಗಳ ಮೈಮೇಲೆ ಮೂಡಿದ ಬಣ್ಣ ಬಣ್ಣದ ಚಿತ್ತಾರ
ಮೈಸೂರು ದಸರಾ: ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಮೈಸೂರು ದಸರಾ: ಬನ್ನಿ ವೃಕ್ಷಕ್ಕೆ ಪೂಜೆ ಸಲ್ಲಿಸಿದ ಯದುವೀರ್ ಒಡೆಯರ್
ಮೈಸೂರು ದಸರಾ 2026: ಗೊಂದಲಗಳ ನಡುವೆ ವಜ್ರಮುಷ್ಟಿ ಕಾಳಗ ರದ್ದು!
ಮೈಸೂರು ದಸರಾ 2026: ಗೊಂದಲಗಳ ನಡುವೆ ವಜ್ರಮುಷ್ಟಿ ಕಾಳಗ ರದ್ದು!