‘Smile Designing’ Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ

ನಿಮ್ಮ ಹಲ್ಲುಗಳು ಹಳದಿ ಅಥವಾ ಓರೆಕೋರೆಯಾಗಿದ್ದರೆ, ಅಥವಾ ಒಂದೇ ಗಾತ್ರದಲ್ಲಿ ಸಮನಾಗಿ ಇಲ್ಲದಿದ್ದರೆ ದಂತ ವೈದ್ಯರು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಮೂಲಕ ಹಲ್ಲಿಗೆ ಹೊಸ ರೂಪ ನೀಡುತ್ತಾರೆ. ಅದೇ ರೀತಿ ಮೃತ ಲಕ್ಷ್ಮೀ ನಾರಾಯಣ ಕೂಡ ಮದುವೆಯಲ್ಲಿ ಸುಂದರವಾಗಿ ಕಾಣಬೇಕು ಎಂದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಆಕರ್ಷಣೆಗೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾನೆ.

'Smile Designing' Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ
'Smile Designing' SurgeryImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on:Feb 20, 2024 | 5:38 PM

ಹೈದರಾಬಾದ್‌: ಇನ್ನೇನು ಮದುವೆಗೆ ಒಂದೇ ತಿಂಗಳು ಬಾಕಿ ಇರುವಾಗ ಮದುಮಗನೊರ್ವ ತಾನು ಕೂಡ ಎಲ್ಲರ ಮುಂದೆ ಚೆನ್ನಾಗಿ ನಗಬೇಕು ಎಂದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾನೆ. ಆದರೆ ದುರಾದೃಷ್ಟವಶಾತ್  ಶಸ್ತ್ರಚಿಕಿತ್ಸೆಯ​ ಸಂರ್ಭದಲ್ಲೇ ಪ್ರಜ್ಞೆ ತಪ್ಪಿ ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಮೃತ ಲಕ್ಷ್ಮೀ ನಾರಾಯಣ(28) ಫೆಬ್ರವರಿ 16 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನಲ್ಲಿರುವ ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಹೋಗಿದ್ದಾನೆ. ಆದರೆ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದಂತೆ ಇದ್ದಕ್ಕಿದ್ದಂತೆ ಆತನ ಮೂರ್ಛೆ ಹೋಗಿದೆ. ಕೆಲ ಹೊತ್ತಿನ ಬಳಿಕ ಲಕ್ಷ್ಮೀ ನಾರಾಯಣ ಮೃತಪಟ್ಟಿರುವುದಾಗಿ ವೈದ್ಯರು ಫೋಷಿಸಿದ್ದಾರೆ.

ಏನಿದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆ?

ನಿಮ್ಮ ಹಲ್ಲುಗಳು ಹಳದಿ ಅಥವಾ ಓರೆಕೋರೆಯಾಗಿದ್ದರೆ, ಅಥವಾ ಒಂದೇ ಗಾತ್ರದಲ್ಲಿ ಸಮನಾಗಿ ಇಲ್ಲದಿದ್ದರೆ ದಂತ ವೈದ್ಯರು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಮೂಲಕ ಹಲ್ಲಿಗೆ ಹೊಸ ರೂಪ ನೀಡುತ್ತಾರೆ. ಅದೇ ರೀತಿ ಮೃತ ಲಕ್ಷ್ಮೀ ನಾರಾಯಣ ಕೂಡ ಮದುವೆಯಲ್ಲಿ ಸುಂದರವಾಗಿ ಕಾಣಬೇಕು ಎಂದು ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಯ ಆಕರ್ಷಣೆಗೆ ಒಳಗಾಗಿ ಶಸ್ತ್ರಚಿಕಿತ್ಸೆಗೆ ಮುಂದಾಗಿದ್ದಾನೆ.

ಇದನ್ನೂ ಓದಿ: ನಿಮ್ಮ ನೆಚ್ಚಿನ ಡೋರೆಮಾನ್ ಕಾರ್ಟೂನ್ ಪಾತ್ರಗಳ ಹಿನ್ನೆಲೆ ಧ್ವನಿ ಈ ಸುಂದರಿಯದ್ದು

‘ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ನೀಡಲಾಗುವ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ನನ್ನ ಮಗ ಸಾವನ್ನಪ್ಪಿದ್ದಾನೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ’ ಎಂದು ಫೋಷಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಸ್ತ್ರ ಚಿಕಿತ್ಸೆ ಬಗ್ಗೆ ತಮ್ಮ ಮಗ ನಮಗೆ ತಿಳಿಸಿರಲಿಲ್ಲ. ಅವನಿಗೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ, ಅವರ ಸಾವಿಗೆ ವೈದ್ಯರೇ ಕಾರಣ ಎಂದು ಮೃತ ಲಕ್ಷ್ಮೀ ನಾರಾಯಣ ಅವರ ತಂದೆ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:37 pm, Tue, 20 February 24

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಕುಡಿದ ಅಮಲಿನಲ್ಲಿ ಬೈಕ್​ಗೆ ಟ್ರಕ್ ಡಿಕ್ಕಿ;3 ವರ್ಷದ ಮಗು ಸೇರಿ ಇಬ್ಬರು ಸಾವು
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ
ಕೆನ್-ಬೇತ್ವಾ ನದಿ ಜೋಡಣೆ ಯೋಜನೆಗೆ ಮೋದಿ ಶಂಕುಸ್ಥಾಪನೆ