Video Viral: ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು; ವಿಡಿಯೋ ಇಲ್ಲಿದೆ ನೋಡಿ

ಹಾವನ್ನು ಓಡಿಸಲು ವಿವಿಧ ರೀತಿಯ ಶಬ್ದಗಳನ್ನೂ ಮಾಡುತ್ತಿರುವುದನ್ನು ಕಾಣಬಹುದು. ಆದರೆ ಹಾವು ಅದಾಗಲೇ ಮಗುವಿನ ತೊಟ್ಟಿಲ ಮೇಲೆ ಹತ್ತಿದೆ. ಬಳಿಕ ಹಗ್ಗದ ಮೇಲಿಂದ ತೆವಳುತ್ತಾ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Video Viral: ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು; ವಿಡಿಯೋ ಇಲ್ಲಿದೆ ನೋಡಿ
ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದ ನಾಗರಹಾವು
Follow us
ಅಕ್ಷತಾ ವರ್ಕಾಡಿ
|

Updated on:Jun 12, 2024 | 12:43 PM

ಮಲಗಿದ್ದ ಮಗುವಿನ ತೊಟ್ಟಿಲ ಮೇಲೆ ನಾಗರಹಾವೊಂದು ಸರಸರನೆ ಹತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋ ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವುದಂತೂ ಖಂಡಿತಾ. ವೈರಲ್ ಆಗಿರುವ ವಿಡಿಯೋದಲ್ಲಿ ಪ್ರಾರಂಭದಲ್ಲಿ ಹೊಲ ಮಧ್ಯೆ ಹಾವು ಮತ್ತು ಮುಂಗುಸಿ ನಡುವೆ ಭೀಕರ ಯುದ್ಧ ನಡೆಯುತ್ತಿರುವುದನ್ನು ಕಾಣಬಹುದು. ಬಳಿಕ ಮುಂಗುಸಿಯಿಂದ ತಪ್ಪಿಸಿಕೊಂಡ ಹಾವು ಮಗು ಮಲಗಿದ್ದ ತೊಟ್ಟಿಲ ಮೇಲೆ ಹತ್ತಿದೆ.

ಈ ದೃಶ್ಯವನ್ನು ಕಂಡ ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಹಾವನ್ನು ಓಡಿಸಲು ವಿವಿಧ ರೀತಿಯ ಶಬ್ದಗಳನ್ನೂ ಮಾಡುತ್ತಿರುವುದನ್ನು ಕಾಣಬಹುದು. ಆದರೆ ಹಾವು ಅದಾಗಲೇ ಮಗುವಿನ ಬಟ್ಟೆಯ ಮೇಲೆ ಹತ್ತಿದೆ.. ಬಟ್ಟೆಯ ಹಗ್ಗದಿಂದ ಪಕ್ಕದ ಒಣ ಬಟ್ಟೆಯವರೆಗೂ ತೆವಳುತ್ತಾ ಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ನಿಯಂತ್ರಣ ತಪ್ಪಿದ ಕಾರು ; ನಡುರಸ್ತೆಯಲ್ಲೇ 3 ವಾಹನಗಳಿಗೆ ಡಿಕ್ಕಿ

ಅದೃಷ್ಟವಶಾತ್ ನಾಗರಹಾವು ಮಗುವಿಗೆ ಯಾವುದೇ ಹಾನಿಯಾಗದಂತೆ ದೂರ ಹೋಗಿದೆ. ಏತನ್ಮಧ್ಯೆ, ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. @umeshshahane72 ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ಜೂನ್​​​ 2ರಂದು ವಿಡಿಯೋ ಹಂಚಿಕೊಳ್ಳಲಾಗಿದೆ. ವಿಡಿಯೋ ಹಂಚಿಕೊಂಡ ಕೇವಲ 10 ದಿನದಲ್ಲಿ 4 ಮಿಲಿಯನ್​​​ 40ಲಕ್ಷ ವೀಕ್ಷಣೆಯನ್ನು ಪಡೆದುಕೊಂಡಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:38 pm, Wed, 12 June 24

ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಸತ್ತವರ ಹೆಸರಲ್ಲಿ ಅರ್ಚನೆ! ಸಂಕಲ್ಪ ಮಾಡಿಸಬಹುದಾ? ವಿಡಿಯೋ ನೋಡಿ
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಈ ರಾಶಿಯವರು ಮದುವೆ ಮತ್ತು ಮನೆ ವಿಷಯಗಳಲ್ಲಿ ಇಂದು ಶುಭ ಸುದ್ದಿ ಕೇಳುವರು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್​ ಪ್ರಮಾಣ ವಚನದ ನೇರಪ್ರಸಾರ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?