AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ರೈಲ್ವೇ ನಿಲ್ದಾಣದಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ

Social Media Influencer : ಸಾಮಾಜಿಕ ಜಾಲತಾಣಗಳಲ್ಲಿ ಲೈಕ್ಸ್​, ಶೇರ್​ಗಳಿಗಾಗಿ ಇಂಥ ಅಪಾಯಕ್ಕೆ ತೆರೆದುಕೊಳ್ಳುವವರಿಗೆ ಪೊಲೀಸರ ಈ ನಡೆ ಎಚ್ಚರಿಕೆ ಹುಟ್ಟಿಸಲಿ ಎಂದು ನೆಟ್ಟಿಗರು ಈ ಟ್ವೀಟ್​ಗೆ ಬೆಂಬಲಿಸುತ್ತಿದ್ದಾರೆ.

Viral Video: ರೈಲ್ವೇ ನಿಲ್ದಾಣದಲ್ಲಿ ಸ್ಟಂಟ್ ಮಾಡುತ್ತಿದ್ದ ಯುವಕನ ಬಂಧನ
ಬಿಹಾರದ ಮನ್ಪುರ್​ ರೈಲು ನಿಲ್ದಾಣದಲ್ಲಿ ಸ್ಟಂಟ್ ಮಾಡುತ್ತಿರುವ ಯುವಕ.
ಶ್ರೀದೇವಿ ಕಳಸದ
|

Updated on:Jul 12, 2023 | 3:08 PM

Share

Bihar : ಸಾಮಾಜಿಕ ಜಾಲತಾಣಗಳಲ್ಲಿರುವ ಡಿಜಿಟಲ್ ಕ್ರಿಯೇಟರ್ಸ್​ (Digital Creators) ಬಗ್ಗೆ ಪ್ರತೀ ದಿನ ಒಂದಿಲ್ಲಾ ಒಂದು ತಕರಾರು ಕೇಳಿಬರುತ್ತಲೇ ಇರುತ್ತದೆ. ಅದರಲ್ಲೂ ದೆಹಲಿ ಮೆಟ್ರೋಗೆ ಸಂಬಂಧಿಸಿದ ಪ್ರಕರಣಗಳಿಗಂತೂ ಲೆಕ್ಕವೇ ಇಲ್ಲ. ರೈಲ್ವೆ ಒಳಗೆ ಮತ್ತು ಪ್ಲ್ಯಾಟ್​ಫಾರ್ಮ್ ಮೇಲೆ ರೀಲ್​ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರೈಲ್ವೆ ಅಧಿಕಾರಿಗಳು ಹೇಳಿಕೆ ಕೊಡುತ್ತಾರೆ ವಿನಾ ಫಲಿತಾಂಶ ಮಾತ್ರ ಶೂನ್ಯ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಬಿಹಾರದ ಮನ್ಪುರ್ (Manpur) ರೈಲು ನಿಲ್ದಾಣದಲ್ಲಿ ಸ್ಟಂಟ್​ ಮಾಡಿದ ಯುವಕನ ವಿಡಿಯೋ ಅನ್ನು ರೈಲ್ವೇ ರಕ್ಷಣಾ ಪಡೆ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಇದೀಗ ಈ ಯುವಕ ಪೊಲೀಸರ ಬಂಧನದಲ್ಲಿದ್ದಾನೆ.

ಸಾಮಾಜಿಕ ಮಾಧ್ಯಮಗಳಲ್ಲಿ ಖ್ಯಾತಿ ಹೊಂದಲು ಇಂಥ ಅಪಾಯಕರ ಪ್ರವೃತ್ತಿಗೆ ತೆರೆದುಕೊಳ್ಳುವವರಿಗೆ ಇದು ಒಂದು ಪಾಠ ಎಂದು ಭಾವಿಸುತ್ತೇವೆ ಎಂದಿದ್ದಾರೆ ರೈಲ್ವೇ ರಕ್ಷಣಾ ಪಡೆಯ ಪೊಲೀಸರು. ಈಗಾಗಲೇ ಈ ವಿಡಿಯೋ ಅನ್ನು ಸುಮಾರು 1.8 ಲಕ್ಷ ಜನರು ನೋಡಿದ್ದಾರೆ. 1,500 ಜನರು ಈ ವಿಡಿಯೋ ಲೈಕ್ ಮಾಡಿದ್ದಾರೆ, ಕೆಲ ಜನರು ರೀಟ್ವೀಟ್ ಮಾಡಿದ್ದಾರೆ. ಈ ವಿಡಿಯೋ ಅನ್ನು ಜು.10ರಂದು ಟ್ವೀಟ್ ಮಾಡಲಾಗಿದೆ. ಪೊಲೀಸರ ಈ ಕ್ರಮವನ್ನು ನೆಟ್ಟಿಗರು ತಮ್ಮ ಪ್ರತಿಕ್ರಿಯೆಗಳ ಮೂಲಕ ಬೆಂಬಲಿಸಿದ್ದಾರೆ.

ಇದನ್ನೂ ಓದಿ : Viral Video: ಕರುನಾಡ ಸರಸ್ವತಿ ಅಂಕಿತಾ ಕುಂಡುಗೆ ಅಭಿಮಾನಿಗಳಿಂದ ಖಡಕ್​ ಪತ್ರ

ಪೊಲೀಸರು ಈ ಕ್ರಮ ಕೈಗೊಂಡಿದ್ದು ಒಳ್ಳೆಯದಾಯಿತು, ಇನ್ನಾದರೂ ಸಾಮಾಜಿಕ ಜಾಲತಾಣಗಳ ಪ್ರಭಾವಿ ವ್ಯಕ್ತಿಗಳು ಪಾಠ ಕಲಿಯಲಿ ಎಂದಿದ್ದಾರೆ ಕೆಲವರು. ಪ್ರತಿಭಾ ಪ್ರದರ್ಶನ ಇರಲಿ, ಆದರೆ ಸಾರ್ವಜನಿಕ ಸ್ಥಳಗಳಲ್ಲಿ ಸಲ್ಲದು. ಇದರಿಂದ ತಮಗೂ ಉಳಿದವರಿಗೂ ತೊಂದರೆ ಅಥವಾ ಅಪಾಯವಾಗುವ ಸಾಧ್ಯತೆ ಇರುತ್ತದೆ ಎಂದು ಕೆಲವರು ಹೇಳಿದ್ದಾರೆ.

ನೀವೇನಂತೀರಿ?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 3:04 pm, Wed, 12 July 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ