Viral Video: ಈ ಮಹಿಳೆ 34ನೇ ವಯಸ್ಸಿಗೆ ಅಜ್ಜಿಯಾಗಿದ್ದಾಳೆ!

“ನನ್ನ 17 ವರ್ಷದ ಮಗ ತಂದೆಯಾಗಿದ್ದಾನೆ. ಈ ಮೂಲಕ ನಾನು 34ನೇ ವಯಸ್ಸಿನಲ್ಲಿ ಅಜ್ಜಿ ಪಟ್ಟವನ್ನು ಖುಷಿಯಿಂದ ಸ್ವೀಕರಿಸುತ್ತಿದ್ದೇನೆ. ಮನೆಯಲ್ಲಿ ಸಂಭ್ರಮದ ವಾತಾವರಣವಿದೆ" ಎಂದು ಶೆರ್ಲಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

Viral Video: ಈ ಮಹಿಳೆ 34ನೇ ವಯಸ್ಸಿಗೆ ಅಜ್ಜಿಯಾಗಿದ್ದಾಳೆ!
Shirli Ling Image Credit source: instagram
Follow us
ಅಕ್ಷತಾ ವರ್ಕಾಡಿ
|

Updated on:Apr 03, 2024 | 10:39 AM

ಅಜ್ಜಿ ಎಂದರೆ ಸಾಮಾನ್ಯವಾಗಿ ಸುಮಾರು 50ರಿಂದ 60ವರ್ಷ ಮೇಲ್ಪಟ್ಟವರಾಗಿರುತ್ತಾರೆ. ಆದರೆ ಇಲ್ಲೊಂದು ಮಹಿಳೆ ತನ್ನ 34ನೇ ವಯಸ್ಸಿಗೆ ಅಜ್ಜಿಯಾಗಿದ್ದಾಳೆ. ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​​ ಆಕ್ಟೀವ್​​​ ಆಗಿರುವ ಸಿಂಗಾಪುರ ಮೂಲದ ಶೆರ್ಲಿ(34) ತಾನು ಅಜ್ಜಿಯಾಗಿರುವುದಾಗಿ ಬಹಿರಂಗಪಡಿಸಿದ್ದಾಳೆ. “ನನ್ನ 17 ವರ್ಷದ ಮಗ ತಂದೆಯಾಗಿದ್ದಾನೆ. ಈ ಮೂಲಕ ನಾನು 34ನೇ ವಯಸ್ಸಿನಲ್ಲಿ ಅಜ್ಜಿ ಪಟ್ಟವನ್ನು ಖುಷಿಯಿಂದ ಸ್ವೀಕರಿಸುತ್ತಿದ್ದೇನೆ. ಮನೆಯಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದೆ ಎಂದು ಶೆರ್ಲಿ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ಹೇಳಿಕೊಂಡಿದ್ದಾರೆ.

“ಇಷ್ಟು ಚಿಕ್ಕ ವಯಸ್ಸಿನಲ್ಲಿ ನನ್ನ ಮಗ ತಂದೆಯಾದ ಬಗ್ಗೆ ನನಗೆ ಕೋಪವಿಲ್ಲ. ಅವನು ಓದುತ್ತಿದ್ದಾನೆ. ನನ್ನ ಮಗನಿಗೆ ಆದಾಯದ ಮೂಲವಿಲ್ಲ. ಹಾಗಾಗಿ ನಾನು ಅವನಿಗೆ ಸಹಾಯ ಮಾಡಲು ಸಿದ್ಧನಿದ್ದೇನೆ. ಅಂತಹ ಪರಿಸ್ಥಿತಿಯಲ್ಲಿ ನಾನು ನನ್ನ ಮಗನಿಗೆ ಧೈರ್ಯ ತುಂಬುತ್ತೇನೆ. ಹೀಗಾಗಿ ಅವನು ತನ್ನ ಜವಾಬ್ದಾರಿಗಳನ್ನು ಚೆನ್ನಾಗಿ ಅರ್ಥಮಾಡಿಕೊಂಡಿದ್ದಾನೆ. ಈಗ ಜಗತ್ತು ಅವನೊಂದಿಗಿದೆಯೋ ಇಲ್ಲವೋ, ನಾನು ಯಾವಾಗಲೂ ಅವನೊಂದಿಗೆ ಇರುತ್ತೇನೆ” ಎಂದು ವಿಡಿಯೋದಲ್ಲಿ ಹೇಳಿರುವುದನ್ನು ಕಾಣಬಹುದು.

View this post on Instagram

A post shared by Shirli Ling (@shirli_ling)

ಇದನ್ನೂ ಓದಿ: ಕಲ್ಲು ಗಾಳಿಯಲ್ಲಿ ತೇಲುತ್ತಿರುವಂತೆ ಕಾಣುತ್ತಿದೆಯೇ? ಆದರೆ ಹಾಗಿಲ್ಲ ಸರಿಯಾಗಿ ಗಮನಿಸಿ

“ಚಿಕ್ಕ ವಯಸ್ಸಿನಲ್ಲಿ ಪೋಷಕರಾಗುವುದು ಹೇಗೆ ಎಂದು ನನಗೆ ತಿಳಿದಿದೆ. ನಾನು ಮೂರು ಬಾರಿ ಮದುವೆಯಾಗಿದ್ದೇನೆ. ನನಗೆ ಐದು ಮಕ್ಕಳಿದ್ದಾರೆ. ನಾನು 17 ವರ್ಷದವಳಿದ್ದಾಗ ಮೊದಲ ಮಗುವಿಗೆ ಜನ್ಮ ನೀಡಿದ್ದೇನೆ” ಎಂದು ಹೇಳಿಕೊಂಡಿದ್ದಾರೆ.

ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿರುವ ಶೆರ್ಲಿ ಇನ್ಸ್ಟಾಗ್ರಾಮ್​​ ಖಾತೆಯಲ್ಲಿ 18ಸಾವಿರಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:37 am, Wed, 3 April 24

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್