AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಯುವಕ ಎರಡೂ ಕೈಗಳಲ್ಲಿ ಕಂತೆ ಕಂತೆ ನೋಟುಗಳನ್ನು ಇಟ್ಟುಕೊಂಡು ರಸ್ತೆಯ ವಾಹನ ಸಂಚಾರದ ನಡುವೆಯೂ ಹಣ ಎಸೆಯುತ್ತಿರುವುದು ಸೆರೆಯಾಗಿದೆ. ಹಣದ ಸುರಿಮಳೆಯನ್ನು ಕಂಡು ಜನರು ಹಣ ಹೆಕ್ಕಲು ಮುಗಿಬಿದ್ದಿದ್ದಾರೆ.

Viral Video: ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ
ಅಕ್ಷತಾ ವರ್ಕಾಡಿ
|

Updated on: Aug 22, 2024 | 5:49 PM

Share

ಹೈದರಾಬಾದ್‌: ಸೋಶಿಯಲ್​​ ಮೀಡಿಯಾ ಪ್ರಭಾವಿಯೊಬ್ಬ ಕಂತೆ ಕಂತೆ ನೋಟುಗಳನ್ನು ರಸ್ತೆಗೆ ಎಸೆದಿರುವ ಘಟನೆ ಹೈದರಾಬಾದ್‌ನ ಕುಕಟ್‌ಪಲ್ಲಿಯಲ್ಲಿ ನಡೆದಿದೆ. ವಾಹನ ದಟ್ಟನೆಯಿರುವ ನಡು ರಸ್ತೆಯಲ್ಲೇ ನಿಂತು ಈ ಯುವಕ ನೋಟುಗಳನ್ನು ರಸ್ತೆಗೆ ಎಸೆದಿದ್ದು, ನೋಟುಗಳ ಸುರಿಮಳೆ ಸುರಿಯುತ್ತಿದ್ದಂತೆ ಸ್ಥಳೀಯರು ಶಾಕ್​ ಆಗಿದ್ದಾರೆ. ಹಣದ ಸುರಿಮಳೆಯನ್ನು ಕಂಡು ಜನರು ಹಣ ಹೆಕ್ಕಲು ಮುಗಿಬಿದ್ದಿದ್ದಾರೆ.

@indian66669296 ಎಂಬ ಟ್ವಿಟರ್​ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ಭಾರೀ ವೈರಲ್​​ ಆಗಿದೆ. ಆಗಸ್ಟ್​​​ 21 ರಂದು ಹಂಚಿಕೊಂಡಿರುವ ವೀಡಿಯೋ ಒಂದೇ ದಿನದಲ್ಲಿ ಒಂದು ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಹೋಮ್‌ವರ್ಕ್ ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಿವಿ ಮೂಗಿನಲ್ಲಿ ರಕ್ತ ಬರುವಂತೆ ಹೊಡೆದ ಶಿಕ್ಷಕ

ವೈರಲ್​​ ಆಗಿರುವ ವಿಡಿಯೋದಲ್ಲಿ ಯುವಕ ಎರಡೂ ಕೈಗಳಲ್ಲಿ ಕಂತೆ ಕಂತೆ ನೋಟುಗಳನ್ನು ಇಟ್ಟುಕೊಂಡು ರಸ್ತೆಯ ವಾಹನ ಸಂಚಾರದ ನಡುವೆಯೂ ಹಣ ಎಸೆಯುತ್ತಿರುವುದು ಸೆರೆಯಾಗಿದೆ. ವಿಡಿಯೋ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ನೆಟ್ಟಿಗರಿಂದ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. “ದಯವಿಟ್ಟು ಈತನ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ” ಎಂದು ನಗರ ಪೊಲೀಸರಿಗೆ ಟ್ಯಾಗ್ ಮಾಡಿ ನೆಟ್ಟಿಗರೊಬ್ಬರು ಕಾಮೆಂಟ್​​ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಚೆನ್ನೈನಲ್ಲಿ ಮೋದಿ ರೋಡ್‌ ಶೋ: 13 ಸಾವಿರ ಕೋಟಿ ರೂ. ಯೋಜನೆಗಳಿಗೆ ಚಾಲನೆ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ಬಿಗ್ ಬಾಸ್ ಕನ್ನಡ ಸೀಸನ್ 13: ವೈಲ್ಡ್ ಕಾರ್ಡ್ ಮೂಲಕ ಕಾಮನರ್ ಕುಮಾರಿ ಎಂಟ್ರಿ
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ತುಮಕೂರು: ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿದ್ಧಗಂಗಾ ಶ್ರೀಗಳು
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ನೇಪಾಳದ ಬುಧಿ ಗಂಡಕಿ ನದಿಯಲ್ಲಿ ಹಠಾತ್ ಪ್ರವಾಹ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ಮೈಸೂರು ದಸರಾ ಉದ್ಘಾಟನೆಗೂ ಮುನ್ನ ಅವಘಡ: ಮುರಿದುಬಿದ್ದ ನಂದಿ ಧ್ವಜ ಕಂಬ!
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ
ದಸರಾ ಉದ್ಘಾಟನೆಗೂ ಮುನ್ನ ಚಾಮುಂಡೇಶ್ವರಿ ದರ್ಶನ ಪಡೆದ ಗವಿಸಿದ್ದೇಶ್ವರ ಶ್ರೀ