ಅವಳಿ ಸಹೋದರಿಯರನ್ನು ಮದುವೆಯಾದ ವರ; ವಿಡಿಯೋ ವೈರಲ್

Twin Sister’s Marriage : ಚಿಕ್ಕಂದಿನಿಂದಲೂ ಒಟ್ಟಿಗೆ ವಾಸಿಸುತ್ತಿದ್ದ ಈ ಮೂವರು ಪರಸ್ಪರ ಕುಟುಂಬದ ಒಪ್ಪಿಗೆಯ ಮೇರೆಗೆ ಮದುವೆಯಾಗಿದ್ದಾರೆ. ಆದರೆ ಮಹಾರಾಷ್ಟ್ರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅವಳಿ ಸಹೋದರಿಯರನ್ನು ಮದುವೆಯಾದ ವರ; ವಿಡಿಯೋ ವೈರಲ್
ರಿಂಕಿ ಪಿಂಕಿಯೊಂದಿಗೆ ಮದುವೆಯಾದ ಅತುಲ್ ಆಠವಡೆ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Dec 05, 2022 | 11:53 AM

Viral Video : 19 ವರ್ಷದ ಹುಡುಗಿ 70 ವರ್ಷದ ವ್ಯಕ್ತಿಯನ್ನು ಮದುವೆಯಾದ ವಿಡಿಯೋ ವೈರಲ್ ಆಗಿದ್ದನ್ನು ನೋಡಿದ್ದೀರಿ. 17 ವರ್ಷದ ಶ್ರೀಮಂತ ಮನೆತನದ ಏಕೈಕ ಪುತ್ರಿ  ಕಾರ್​ ಡ್ರೈವರ್​ನನ್ನು ಮದುವೆಯಾದ ವಿಡಿಯೋ ವೈರಲ್ ಆಗಿದ್ದನ್ನೂ ನೋಡಿದ್ದೀರಿ. 22 ವರ್ಷದ ಯುವಕ 65 ವರ್ಷದ ಮಹಿಳೆಯನ್ನು ಮದುವೆಯಾದ ಸುದ್ದಿ ಓದಿದ್ದೀರಿ. ಇದೀಗ ವೈರಲ್ ಆಗಿರುವ ವಿಡಿಯೋ ಮುಂಬೈ ಮೂಲದ್ದು. ಮಹಾರಾಷ್ಟ್ರದ ಸೊಲ್ಲಾಪುರದ ವರನೊಬ್ಬ ಮುಂಬೈನ ಅವಳಿ ಸಹೋದರಿಯರನ್ನು ಶುಕ್ರವಾರದಂದು ಮದುವೆಯಾಗಿದ್ದಾನೆ. ನೆಟ್ಟಿಗರೆಲ್ಲ ಹುಬ್ಬೇರಿಸಿ ಈ ಬಗ್ಗೆ ಚರ್ಚಿಸುತ್ತಿದ್ದಾರೆ.

ರಿಂಕಿ ಮತ್ತು ಪಿಂಕಿ ಅವಳಿ ಸಹೋದರಿಯರು ಮುಂಬೈ ಮೂಲದವರಾಗಿದ್ದು ಸಾಫ್ಟ್​ವೇರ್ ಎಂಜಿನಿಯರ್ ಆಗಿದ್ದಾರೆ. ನೋಟದಲ್ಲಿಯೂ ತದ್ರೂಪಿಗಳು. ಇವರಿಬ್ಬರನ್ನೂ ಮದುವೆಯಾದ ವರನ ಹೆಸರು ಅತುಲ್​ ಅವಠಡೆ. ಈ ಮದುವೆಯ ವಿಡಿಯೋ ಆನ್​ಲೈನ್​ನಲ್ಲಿ ವೈರಲ್ ಆಗುತ್ತಿದ್ದಂತೆ ಪೊಲೀಸರ ಗಮನಕ್ಕೆ ಬಂದಿದೆ, ಹಿಂದೂ ವಿವಾಹ ಕಾಯ್ದೆಗೆ ವಿರುದ್ಧವಾಗಿ ಈ ತ್ರಿಕೋನ ಮದುವೆ ನಡೆದಿದೆ ಎಂಬ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆದರೆ ಪಿಂಕಿ-ರಿಂಕಿಯ ಕುಟುಂಬ ಮತ್ತು ವರನ ಕುಟುಂಬ ಪರಸ್ಪರ ಒಪ್ಪಿಗೆಯ ಮೇಲೆ ಈ ವಿವಾಹ ನಡೆದಿದೆ. ಕಾರಣ, ಈ ಸಹೋದರಿಯರು ಮತ್ತು ಅತುಲ್​ ಚಿಕ್ಕಂದಿನಿಂದಲೂ ಒಂದೇ ಕಡೆ ವಾಸಿಸುತ್ತಿದ್ದರು ಕ್ರಮೇಣ ಮೂವರು ಸೇರಿ ಮದುವೆಯ ನಿರ್ಧಾರಕ್ಕೆ ಬಂದರು ಎಂದು ವರದಿಯಾಗಿದೆ. ಆದರೆ ನೆಟ್ಟಿಗರು ಮಾತ್ರ ಕಾನೂನು ಮತ್ತು ನೈತಿಕ ಜವಾಬ್ದಾರಿಯ ಬಗ್ಗೆ ಪ್ರಶ್ನಿಸಿದ್ದಾರೆ.

ಸೊಲ್ಲಾಪುರ ಪೊಲೀಸರು ಅತುಲ್​ನ ವಿರುದ್ಧ ಐಪಿಸಿ ಸೆಕ್ಷನ್​ 494ರ ಅಡಿ ಪ್ರಕರಣ ದಾಖಲಿಸಿದ್ದಾರೆ.

ಮತ್ತಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ