AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು

ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​ನಲ್ಲಿರುವ 'ಒನ್ ಚಿಪ್ ಚಾಲೆಂಜ್‌'ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

Spicy Chip: ಅತ್ಯಂತ ಖಾರದ ಚಿಪ್ಸ್​​ ತಿಂದು 14ರ ಬಾಲಕ ಸಾವು
ಅಕ್ಷತಾ ವರ್ಕಾಡಿ
|

Updated on: May 17, 2024 | 12:51 PM

Share

ವಿಶ್ವದ ಅತ್ಯಂತ ಖಾರವಾದ ಚಿಪ್ಸ್​​​ ತಿಂದು 14ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಇಂಗ್ಲೆಂಡ್‌ನ ವೋರ್ಸೆಸ್ಟರ್ ನಗರದಲ್ಲಿ ನಡೆದಿದೆ. ಮೃತ ಬಾಲಕ ಹ್ಯಾರಿಸ್ ವೊಲೊಬಾಹ್(14) ಸೋಶಿಯಲ್​ ಮೀಡಿಯಾಗಳಲ್ಲಿ ಸಖತ್​​ ಆಕ್ಟೀವ್​ ಆಗಿದ್ದು, ಇದೀಗ ರೀಲ್ಸ್​​ ಹುಚ್ಚು ಆತನ ಪ್ರಾಣವನ್ನೇ ತೆಗೆದಿದೆ. ಸೋಶಿಯಲ್​ ಮೀಡಿಯಾಗಳಲ್ಲಿ ಅತ್ಯಂತ ಟ್ರೆಂಡಿಂಗ್​​ನಲ್ಲಿದ್ದ ‘ಒನ್ ಚಿಪ್ ಚಾಲೆಂಜ್‌’ವೊಂದರಲ್ಲಿ ಭಾಗವಹಿಸಿದ್ದ ಬಾಲಕ. ಈ ಚಾಲೆಂಜ್​ ಮೂಲಕ ಅತ್ಯಂತ ಖಾರದ ಚಿಪ್ಸ್​​ ತಿಂದ ಪರಿಣಾಮ ಆತನ ಆರೋಗ್ಯದಲ್ಲಿ ಏರುಪೇರಾಗಿದ್ದು, ಹೃದಯ ಸ್ತಂಭನದಿಂದ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಪಿಸಿದ್ದಾರೆ.

ಏನಿದು’ಒನ್ ಚಿಪ್ ಚಾಲೆಂಜ್‌’?

ಚಿಪ್ಸ್​​ ಬ್ರಾಂಡ್​​ ಒಂದು ವಿಶ್ವದಲ್ಲೇ ಅತ್ಯಂತ ಖಾರವಾದ ಚಿಪ್​ಸ್​​​​​​​ ಅನ್ನು ತಯಾರಿಸಿದ್ದು, ಇದನ್ನು ಖರೀದಿಸಿ ತಿನ್ನಲು ಚಾಲೆಂಜ್​​ವೊಂದನ್ನು ನೀಡುತ್ತಿದೆ. ಈ ಚಿಪ್ಸ್​​ ಖರೀದಿಸಿ ತಿನ್ನಿ, ಈ ಮೂಲಕ ನಿಮ್ಮ ರಿಯಕ್ಷನ್​​​ ಅನ್ನು ವಿಡಿಯೋ ಮಾಡಿ, ನಮ್ಮನ್ನು ಟ್ಯಾಗ್​ ಮಾಡಿ ಸೋಶಿಯಲ್​​ ಮೀಡಿಯಾದಲ್ಲಿ ಅಪ್ಲೋಡ್ ಮಾಡಿ ಎಂಬ ಚಾಲೆಂಜನ್ನು ನೀಡುತ್ತಿದೆ.

ಇದನ್ನೂ ಓದಿ: ಚಲಿಸುತ್ತಿರುವ ರೈಲಿನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿ, ಥಳಿಸಿ ಪರಾರಿಯಾದ ಪತಿ

ಟ್ರೆಂಡಿಂಗ್​ನಲ್ಲಿದ್ದ ಈ ಚಾಲೆಂಜನ್ನು ಬಾಲಕ ಸ್ವೀಕರಿಸಿದ್ದು, ಅತ್ಯಂತ ಖಾರದವಾದ ಚಿಪ್ಸ್​​ ಅನ್ನು ತಿಂದಿದ್ದಾನೆ. ಕೆಲ ಹೊತ್ತಿನಲ್ಲೇ ಬಾಲಕನ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಿದ ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾನೆ. ಅಸೋಸಿಯೇಟೆಡ್ ಪ್ರೆಸ್ ಪಡೆದ ಶವಪರೀಕ್ಷೆ ವರದಿಯ ಪ್ರಕಾರ , ಸಾಮಾಜಿಕ ಮಾಧ್ಯಮದಲ್ಲಿ ಮಸಾಲೆಯುಕ್ತ ಟೋರ್ಟಿಲ್ಲಾ ಚಿಪ್ ಚಾಲೆಂಜ್‌ನಲ್ಲಿ ಭಾಗವಹಿಸಿದ ಬಾಲಕ ಹೆಚ್ಚಿನ ಪ್ರಮಾಣದ ಖಾರವನ್ನು ಸೇವಿಸುವುದರಿಂದ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು