AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಷಕಾರಿ ಸರ್ಪದೊಂದಿಗೆ ಗೆಳೆಯನಿಗಾಗಿ ಹೋರಾಟ ಮಾಡಿದ ಅಳಿಲು , ಮುಂದೇನಾಯ್ತು ನೋಡಿ

ಪ್ರಾಣಿ   ಸಾಮ್ರಾಜ್ಯಕ್ಕೆ ಸಂಬಂಧಿಸಿದ ಭಾವನಾತ್ಮಕ, ಹಾಸ್ಯಮಯ  ವಿಡಿಯೋಗಳು ಪ್ರತಿನಿತ್ಯ ಹರಿದಾಡುತ್ತಿರುತ್ತವೆ. ಇದೀಗ ಅದೇ ರೀತಿಯ ಹೃದಯಸ್ಪರ್ಶಿ ವಿಡಿಯೋವೊಂದು ವೈರಲ್ ಆಗಿದ್ದು,  ಪುಟ್ಟ ಅಳಿಲೊಂದು ವಿಷಕಾರಿ ಹಾವಿನೊಂದಿಗೆ ಹೋರಾಡಿ ತನ್ನ ಗೆಳೆಯನ ಪ್ರಾಣವನ್ನು ರಕ್ಷಿಸಿದೆ.  ಈ ನಿಷ್ಕಲ್ಮಶ ಸ್ನೇಹ ನೋಡುಗರ   ಮನ ಗೆದ್ದಿದೆ.

Viral Video: ವಿಷಕಾರಿ ಸರ್ಪದೊಂದಿಗೆ ಗೆಳೆಯನಿಗಾಗಿ ಹೋರಾಟ ಮಾಡಿದ ಅಳಿಲು , ಮುಂದೇನಾಯ್ತು ನೋಡಿ
ಮಾಲಾಶ್ರೀ ಅಂಚನ್​
| Edited By: |

Updated on:Apr 17, 2024 | 11:55 AM

Share

ಈ ಕಾಲದಲ್ಲಿ ಮನುಷ್ಯ ಮಾನವೀಯತೆಯನ್ನೇ ಮರೆತಿದ್ದಾನೆ. ಅಪರಿಚಿತರು ಬಿಡಿ, ಕಷ್ಟದ ಕಾಲದಲ್ಲಿ ಸತ್ತರೆ ಸಾಯ್ಲಿ ಎನ್ನುತ್ತಾ ತಮ್ಮ ಆಪ್ತರ ಸಹಾಯಕ್ಕೂ ಹೋಗದ ಅದೆಷ್ಟೋ ಜನರಿದ್ದಾರೆ.  ಆದರೆ ಪ್ರಾಣಿ, ಪಕ್ಷಿಗಳಲ್ಲಿ ಮಾತ್ರ ನಿಷ್ಕಲ್ಮಶ ಸ್ನೇಹ, ಪ್ರೀತಿ, ಮಾನವೀಯತೆ ಇಂದಿಗೂ ಜೀವಂತವಾಗಿದೆ. ಇದಕ್ಕೆ ಸೂಕ್ತ ನಿದರ್ಶನದಂತಿರುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪುಟ್ಟ ಅಳಿಲೊಂದು ವಿಷಕಾರಿ ಹಾವಿನೊಂದಿಗೆ ಹೋರಾಡಿ ತನ್ನ ಜೀವದ ಗೆಳೆಯನ ಪ್ರಾಣವನ್ನು ರಕ್ಷಿಸಿದೆ. ಈ ನಿಷ್ಕಲ್ಮಶ ಸ್ನೇಹ ನೆಟ್ಟಿಗರ  ಮನ ಗೆದ್ದಿದೆ.

ಈ ವಿಡಿಯೋವನ್ನು @HumanityChad ಎಂಬ ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ವಿಷಕಾರಿ ಹಾವೊಂದು ಪುಟ್ಟ ಅಳಿಲನ್ನು ಬೇಟೆಯಾಡಲು ಮುಂದಾಗುತ್ತದೆ. ಅಷ್ಟರಲ್ಲಿ ತನ್ನ ಗೆಳೆಯ ಪ್ರಾಣಾಪಾಯದಲ್ಲಿ ಇದ್ದಾನೆ ಎಂದು ತಿಳಿದ ಇನ್ನೊಂದು ಅಳಿಲು, ಹಾವಿನ ಬಳಿ ಬಂದು ತನ್ನ ಪ್ರಾಣವನ್ನೂ ಲೆಕ್ಕಿಸದೆ, ವಿಷಕಾರಿ ಹಾವಿನೊಂದಿಗೆ ಹೋರಾಡಿ ಗೆಳೆಯನ ಪ್ರಾಣವನ್ನು ರಕ್ಷಿಸುವಂತಹ ಹೃದಯಸ್ಪರ್ಶಿ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವೈದ್ಯರ ಬಳಿ ಹೋಗಿ ತನ್ನ ಎರಡು ಬೆರಳುಗಳನ್ನು ಕತ್ತರಿಸುವಂತೆ ಹಠ ಹಿಡಿದ ವ್ಯಕ್ತಿ

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ  20 ಸಾವಿರಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದ್ದು,  ಸ್ವಾರ್ಥವಿಲ್ಲದ ಸ್ನೇಹ ಅಂದ್ರೆ ಇದಪ್ಪಾ ಎನ್ನುತ್ತಾ ಅಳಿಲುಗಳ ನಿಷ್ಕಲ್ಮಶ ಸ್ನೇಹಕ್ಕೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:15 pm, Mon, 15 April 24

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್