Viral: ಪರ್ವತದ ಮೇಲಿನಿಂದ ಸೆಲ್ಫಿ ತೆಗೆದುಕೊಳ್ಳಲು ಹೋಗಿ 262 ಅಡಿ ಕಂದಕಕ್ಕೆ ಬಿದ್ದು ಯುವತಿ ಸಾವು

ಈ ಸೆಲ್ಫಿ ಹುಚ್ಚಿನಿಂದ ಅದೆಷ್ಟೋ ಜನರು ತಮ್ಮ ಅಮೂಲ್ಯವಾದ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅಪಾಯಕಾರಿ ಸ್ಥಳಗಳಲ್ಲಿ ನಿಂತು ಸೆಲ್ಫಿ, ಫೋಟೊ ಕ್ಲಿಕ್ಕಿಸಬಾರದು ಎಂದು ಹೇಳಿದ್ರೂ ಕೂಡಾ ಕೆಲವೊಬ್ರು ಹುಚ್ಚು ಸಾಹಸಕ್ಕೆ ಕೈ ಹಾಕಿ ಪ್ರಾಣಕ್ಕೆ ಅಪಾಯವನ್ನು ತಂದೊಂಡುತ್ತಿರುತ್ತಾರೆ. ಅದೇ ರೀತಿ ಇಲ್ಲೊಬ್ಳು ಯುವತಿ ಕೂಡಾ ಎತ್ತರದ ಪರ್ತತದ ಅಂಚಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಆಯತಪ್ಪಿ 262 ಅಡಿ ಆಳದ ಕಂದಕಕ್ಕೆ ಬಿದ್ದು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಈ ಸುದ್ದಿ ಇದೀಗ ಭಾರೀ ವೈರಲ್‌ ಆಗುತ್ತಿದೆ.

Viral: ಪರ್ವತದ ಮೇಲಿನಿಂದ ಸೆಲ್ಫಿ ತೆಗೆದುಕೊಳ್ಳಲು ಹೋಗಿ 262 ಅಡಿ ಕಂದಕಕ್ಕೆ ಬಿದ್ದು ಯುವತಿ ಸಾವು
ವೈರಲ್​​​ ಪೋಸ್ಟ್​​​
Edited By:

Updated on: Aug 28, 2024 | 3:31 PM

ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಸೆಲ್ಫಿ ಕ್ಲಿಕ್ಕಿಸುವುದು ಒಂದು ಕ್ರೇಜ್‌ ಆಗಿಬಿಟ್ಟಿದೆ. ಸುಂದರ ತಾಣಗಳಿಗೆ ಹೋಗಿ ಅಮೂಲ್ಯವಾದ ಕ್ಷಣ ಹಾಗೂ ಸುಂದರ ಕ್ಷಣಗಳನ್ನು ಸೆರೆ ಹಿಡಿಯಲು ಸೆಲ್ಫಿ ತೆಗೆದುಕೊಳ್ಳುತ್ತಾರೆ. ಇನ್ನೂ ಕೆಲವರಿಗೆ ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ಕ್ಲಿಕ್ಕಿಸುವ ಹುಚ್ಚು. ಇಂತಹ ಹುಚ್ಚು ಸಾಹಸಕ್ಕೆ ಕೈ ಹಾಕಿ ತಮ್ಮ ಅಮೂಲ್ಯ ಜೀವವನ್ನೇ ಕಳೆದುಕೊಂಡ ಹಲವರಿದ್ದಾರೆ. ಈ ರೀತಿಯ ನಿದರ್ಶನಗಳು ಕಣ್ಣ ಮುಂದೆ ಇದ್ರೂ ಕೂಡಾ ಈ ಕೆಲವೊಬ್ರು ಅಪಾಯಕಾರಿ ಸ್ಥಳಗಳಲ್ಲಿ ಸೆಲ್ಫಿ ಕ್ಲಿಕ್ಕಿಸುವ, ರೀಲ್ಸ್‌ ಮಾಡುವ ಸಾಹಸಕ್ಕೆ ಕೈ ಹಾಕುತ್ತಾರೆ. ಅದೇ ರೀತಿ ಇಲ್ಲೊಬ್ಳು ಯುವತಿ ಕೂಡಾ ಎತ್ತರದ ಪರ್ತತದ ಅಂಚಿನಲ್ಲಿ ಸೆಲ್ಫಿ ಕ್ಲಿಕ್ಕಿಸಲು ಹೋಗಿ ಆಯತಪ್ಪಿ 262 ಅಡಿ ಆಳದ ಕಂದಕಕ್ಕೆ ಬಿದ್ದು ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ. ಈ ಸುದ್ದಿ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಜೆಕೊಸ್ಲೊವಾಕಿಯಾದ 23 ರ ಹರೆಯದ ಸ್ಟಾರ್‌ ಜಿಮ್ನಾಸ್ಟ್‌ ನಟಾಲಿ ಸ್ಟಿಚೋವಾ ಸೆಲ್ಫಿ ಹುಚ್ಚಿನಿಂದ ಪ್ರಾಣ ಕಳೆದುಕೊಂಡ ದುರ್ದೈವಿ. ಆಕೆ ಜರ್ಮನಿಯ ಟೆಗೆಲ್ಬರ್ಗ್‌ ಪರ್ವತದ ನ್ಯೂಶ್ವಾನ್‌ಸ್ಟೈನ್‌ ಕೋಟೆ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಜಾರಿ ಬಿದ್ದು 262 ಅಡಿ ಆಳದ ಕಂದಕ್ಕೆ ಬಿದ್ದಿದ್ದಾಳೆ.

ಇದನ್ನೂ ಓದಿ: ವಿಟ್ಲಪಿಂಡಿ ಉತ್ಸವಕ್ಕೆ ಬಂದು ಉಡುಪಿಯಲ್ಲಿ ರಸ್ತೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದ ಯಮರಾಜ

ವೈರಲ್​​ ಪೋಸ್ಟ್​​​​​ ಇಲ್ಲಿದೆ ನೋಡಿ;

ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೆದುಳಿಗೆ ಬಲವಾದ ಪೆಟ್ಟು ಬಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಈ ಕುರಿತ ಪೋಸ್ಟ್‌ ಒಂದನ್ನು True Crime Updates ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ನೆಟ್ಟಿಗರು ಸ್ಟಾರ್‌ ಜಿಮ್ನಾಸ್ಟ್‌ ನಟಾಲಿ ಸ್ಟಿಚೋವಾ ದುರಂತ ಸಾವಿಗೆ ಸಂತಾಪವನ್ನು ಸೂಚಿಸಿದ್ದಾರೆ.

ವೈರಲ್​​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us