AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ; ದೇವರಂತೆ ಬಂದು ಆಕೆಯನ್ನು ಕಾಪಾಡಿದ ಬೀದಿ ನಾಯಿ

ನಾಯಿ ಮತ್ತು ಮನುಷ್ಯನ ಸಂಬಂಧ ಎಂತಹದ್ದು ಎಂದು ವಿವರಿಸಬೇಕಿಲ್ಲ. ವಿಶ್ವಾಸಕ್ಕೆ ಅನ್ವರ್ಥವಾಗಿರುವ ಶ್ವಾನಗಳು ನಮಗಾಗಿ ಎಂತಹ ತ್ಯಾಗಕ್ಕೂ, ಅಪಾಯಗಳನ್ನು ಎದುರಿಸಲು ಹಿಂಜರಿಯುವುದಿಲ್ಲ. ಇದಕ್ಕೆ ಸೂಕ್ತ ನಿದರ್ಶನದಂತಿರುವ ಘಟನೆಯೊಂದು ಇದೀಗ ನಡೆದಿದ್ದು, ಬೀದಿನಾಯಿಯೊಂದು ಮಹಿಳೆಯೊಬ್ಬರನ್ನು ಅತ್ಯಾಚಾರದಿಂದ ರಕ್ಷಿಸಿದೆ. ಈ ಸುದ್ದಿ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

Viral: ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ; ದೇವರಂತೆ ಬಂದು ಆಕೆಯನ್ನು ಕಾಪಾಡಿದ ಬೀದಿ ನಾಯಿ
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ|

Updated on: Jul 07, 2024 | 5:56 PM

Share

ಮುಂಬೈ: ನಿಯತ್ತಿಗೆ ಮತ್ತೊಂದು ಹೆಸರೇ ನಾಯಿ. ವಿಶ್ವಾಸಕ್ಕೆ ಅನ್ವರ್ಥವಾಗಿರುವ ಶ್ವಾನಗಳು ತಮ್ಮ ಮಾಲೀಕನಾಗಿ ಎಂತಹ ತ್ಯಾಗಕ್ಕೂ, ಎಂತಹ ಅಪಾಯಗಳನ್ನು ಎದುರಿಸಲು ಕೂಡ ಹಿಂಜರಿಯುವುದಿಲ್ಲ. ಅಷ್ಟೇ ಅಲ್ಲದೆ ಬೀದಿ ನಾಯಿಗಳೂ ಮನುಷ್ಯನ ಸಹಾಯಕ್ಕೆ ಧಾವಿಸಿದ ಅದೆಷ್ಟೋ ನಿದರ್ಶನಗಳಿವೆ. ಇದೀಗ ಅಂತಹದೇ ಘಟನೆಯೊಂದು ನಡೆದಿದ್ದು, ಕಾಮುಕನೊಬ್ಬನಿಂದ ಅತ್ಯಾಚಾರಕ್ಕೊಳಗಾಗುತ್ತಿದ್ದ ಮಹಿಳೆಯನ್ನು ಬೀದಿ ನಾಯಿಯೊಂದು ಕಾಪಾಡಿದೆ. ಈ ಸುದ್ದಿ ಇದೀಗ ಎಲ್ಲೆಡೆ ವೈರಲ್‌ ಆಗುತ್ತಿದೆ.

ಈ ಘಟನೆ ಜೂನ್‌ 30 ರಂದು ಮುಂಬೈನ ವಾಸಯಿಯಲ್ಲಿ ನಡೆದಿದ್ದು, ಇಲ್ಲಿನ ಮಾಣಿಕ್‌ಪುರ ಗಲ್ಲಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ 32 ವರ್ಷದ ಮಹಿಳೆಯ ಮೇಲೆ 35 ವರ್ಷ ಸಂದೀಪ್‌ ಖೋತ್‌ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವೃತ್ತಿಯಲ್ಲಿ ಅಕೌಂಟೆಂಟ್‌ ಆಗಿರುವ ಆ ಮಹಿಳೆ ಮಧ್ಯರಾತ್ರಿ ಸುಮಾರು 1.30 ರ ಹೊತ್ತಿಗೆ ಕೆಲಸದಿಂದ ಬರುತ್ತಿರುವ ಸಂದರ್ಭದಲ್ಲಿ ಆಕೆಯನ್ನು ಹಿಂಬಾಲಿಸುತ್ತಾ ಬಂದ ಸಂದೀಪ್‌ ನಿನ್ನನ್ನು ಅತ್ಯಾಚಾರ ಮಾಡುವುದಾಗಿ ಬೆದರಿಸಿ, ನಂತರ ಆಕೆಯ ಬಾಯಿಯನ್ನು ಬಿಗಿಯಾಗಿ ಹಿಡಿದು, ಅಕೆಯನ್ನು ನೆಲಕ್ಕೆ ತಳ್ಳಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಆ ಸಂದರ್ಭದಲ್ಲಿ ಅಲ್ಲಿಗೆ ಬಂದಂತಹ ಬೀದಿನಾಯಿಯೊಂದು ಕಾಮುಕನ ಮೇಲೆ ಜೋರಾಗಿ ಬೊಗಳಲು ಪ್ರಾರಂಭಿಸುತ್ತದೆ. ಇದರಿಂದ ಆತ ಕಕ್ಕಾಬಿಕ್ಕಿಯಾಗುತ್ತಾನೆ. ಇದರ ಸದುಪಯೋಗವನ್ನು ಪಡೆದುಕೊಂಡ ಮಹಿಳೆ ಆ ತಕ್ಷಣ ಅಲ್ಲಿಂದ ಓಡಿ ಹೋಗಿದ್ದಾರೆ.

ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರನ್ನು ನೀಡಿದ್ದು, “ನಾನು ಕತ್ತಲಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ 25 ರಿಂದ 30 ವರ್ಷದ ವ್ಯಕ್ತಿಯೊಬ್ಬ ನನ್ನನ್ನು ಹಿಂಬಾಲಿಸುತ್ತಾ ಬಂದು ಅತ್ಯಾಚಾರ ಮಾಡುತ್ತೇನೆ ಎಂದು ಬೆದರಿಸಿ, ನಂತರ ನನ್ನ ಬಾಯಿಯನ್ನು ಬಿಗಿಯಾಗಿ ಹಿಡಿದು ಕೆಳಗೆ ತಳ್ಳಿ ಹಾಕಿ ಅತ್ಯಾಚಾರ ಮಾಡಲು ಯತ್ನಿಸಿದ್ದಾನೆ. ಆ ವೇಳೆ ಲೈಂಗಿಕ ದೌರ್ಜನ್ಯವೆಸಗಲು ಮುಂದಾದ ಆ ವ್ಯಕ್ತಿಗೆ ಬೀದಿ ನಾಯಿ ಜೋರಾಗಿ ಬೊಗಳುತ್ತದೆ. ಆ ಸಂದರ್ಭದಲ್ಲಿ ಅಲ್ಲಿಂದ ಓಡಿ ಹೋಗಲು ನಾನು ಯತ್ನಿಸಿದಾಗ ನನ್ನ ಐಫೋನ್‌ ಅನ್ನು ಆತ ಕಸಿದುಕೊಂಡ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ತನ್ನ ಮನೆಯ ಬಾಲ್ಕನಿಯನ್ನು ಬಾಡಿಗೆಗೆ ನೀಡಿದ ವ್ಯಕ್ತಿ, ಬಾಡಿಗೆ ಕೇಳಿದರೆ ಶಾಕ್​​ ಆಗುವುದಂತೂ ಖಂಡಿತಾ!

ಮಹಿಳೆಯ ದೂರಿನ ಮೇರೆಗೆ ಆ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿ ಟಿವಿ ದೃಶ್ಯಾವಳಿಯನ್ನು ಪರಿಶೀಲಿಸಿದಾಗ ಆ ಮಹಿಳೆಯನ್ನು ಯಾರೋ ಅಟ್ಟಾಡಿಸಿಕೊಂಡು ಹೋಗುತ್ತಿರುವ ದೃಶ್ಯ ಕಂಡು ಬಂದಿದೆ. ಈ ಘಟನೆ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಲಾಗಿದೆ. ಎಂದು ಪೊಲೀಸ್‌ ಇನ್‌ಸ್ಪೆಕ್ಟರ್‌ ಹರೀಶ್‌ ಪಾಟೀಲ್‌ ತಿಳಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ