Viral Video: ಕೆನಡಾದಲ್ಲಿ ಬೀದಿ ಜಗಳ, ತಾನು ಸಾಕಿದ ಹೆಬ್ಬಾವಿನಿಂದ ಅಪರಿಚಿತ ವ್ಯಕ್ತಿಗೆ ಹಲ್ಲೆ

ಟೊರೊಂಟೊದಲ್ಲಿ 45 ವರ್ಷದ ವ್ಯಕ್ತಿಯೊಬ್ಬ ತಾನು ಸಾಕಿದ ಹೆಬ್ಬಾವಿನಿಂದ ಥಳಿಸಿ, ಅಪರಿಚಿತ ವ್ಯಕ್ತಿ ಮೇಲೆ ದಾಳಿ ಮಾಡಿದ್ದಾನೆ. ಈ ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Viral Video: ಕೆನಡಾದಲ್ಲಿ ಬೀದಿ ಜಗಳ, ತಾನು ಸಾಕಿದ ಹೆಬ್ಬಾವಿನಿಂದ ಅಪರಿಚಿತ ವ್ಯಕ್ತಿಗೆ ಹಲ್ಲೆ
ವೈರಲ್ ವೀಡಿಯೊ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: May 18, 2023 | 6:15 PM

ನೀವು ಸಾಮಾನ್ಯವಾಗಿ ಬೀದಿ ಜಗಳ ನೋಡಿರಬಹುದು. ಆದರೆ ಟೊರೊಂಟೊದಲ್ಲಿ ನಡೆದ ಈ ಜಗಳವನ್ನು ನೀವು ಹಿಂದೆಂದೂ ನೋಡಿರಲೂ ಸಾಧ್ಯವಿಲ್ಲ. ಏಕೆಂದ್ರೆ ನೀವು ಕೈ ಕೈ ಮಿಲಾಯಿಸುವುದು, ಅಥವಾ ಇನ್ನಿತರೇ ರೀತಿಯಲ್ಲಿ ಜಗಳವಾಡಿ ಊರು ಕೇರಿ ಸೇರಿಸುವುದು ಏನು ಹೊಸದಲ್ಲ. ಆದರೆ ಟೊರೊಂಟೊನಲ್ಲಿ 45 ವರ್ಷದ ವ್ಯಕ್ತಿಯೊಬ್ಬ ತಾನು ಸಾಕಿದ ಹೆಬ್ಬಾವಿನಿಂದ ಇನ್ನೊಬ್ಬ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾನೆ. ನಿಮಗೆ ಇದು ಸುಳ್ಳು ಎನಿಸಬಹುದು ಆದರೆ ಇದು ಸತ್ಯ. ಟೊರೊಂಟೊ ಪೊಲೀಸರ ಪತ್ರಿಕಾ ಪ್ರಕಟಣೆಯ ಪ್ರಕಾರ ರಾತ್ರಿ ಸಮಯದಲ್ಲಿ ಡುಂಡಾಸ್ ಸ್ಟ್ರೀಟ್ ವೆಸ್ಟ್ ಮತ್ತು ಮ್ಯಾನಿಂಗ್ ಅವೆನ್ಯೂದಲ್ಲಿ ಈ ಘಟನೆ ನಡೆದಿದೆ. ಆ ಸಮಯದಲ್ಲಿ ಇಬ್ಬರು ವ್ಯಕ್ತಿಗಳು ದೈಹಿಕವಾಗಿ ವಾಗ್ವಾದ ನಡೆದ ಬಳಿಕ ಅದರಲ್ಲೊಬ್ಬ ವ್ಯಕ್ತಿಯು ತಾನು ಸಾಕಿದ ಹೆಬ್ಬಾವನ್ನು ಆಯುಧವಾಗಿ ಬಳಸಿ ವ್ಯಕ್ತಿಯ ಮೇಲೆ ದಾಳಿ ಮಾಡಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ ಮತ್ತು ಇದು ಅನೇಕರ ಗಮನ ಸೆಳೆದಿದೆ. ಕ್ರೇಜಿ ಕ್ಲಿಪ್ಸ್ ಎಂಬ ಟ್ವಿಟರ್ ಪೇಜ್ ಇದನ್ನು ಶೇರ್ ಮಾಡಿದ್ದು ಈ ವಿಡಿಯೋದಲ್ಲಿ, ಒಬ್ಬ ವ್ಯಕ್ತಿಯು ಇನ್ನೊಬ್ಬ ವ್ಯಕ್ತಿಯ ಮೇಲೆ ಹೆಬ್ಬಾವನ್ನು ಬೀಸಿ ಬೀಸಿ ಹೊಡೆಯುತ್ತಿರುವುದನ್ನು ನೀವು ನೋಡಬಹುದು. ಕತ್ತಿ, ಚಾಕು ಬಳಸಿದ ಹಾಗೇ ಹಾವನ್ನು ಉಪಯೋಗ ಮಾಡಿರುವುದನ್ನು ನೀವು ಈ ವಿಡಿಯೋದಲ್ಲಿ ಕಾಣಬಹುದು. ನಿರಂತರವಾಗಿ ಅವನ ಮೇಲೆ ಆಕ್ರಮಣ ಮಾಡಿದ್ದು ಕೆಲವೇ ನಿಮಿಷಗಳಲ್ಲಿ, ಟೊರೊಂಟೊ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಹಾವನ್ನು ನೆಲದ ಮೇಲೆ ಕೆಡುವುದರ ಮೂಲಕ ವ್ಯಕ್ತಿಯನ್ನು ರಕ್ಷಿಸಿದ್ದಾರೆ. ಬಳಿಕ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Viral News : ಶಸ್ತ್ರಚಿಕಿತ್ಸೆ ಮೂಲಕ ಗುಪ್ತಾಂಗದಿಂದ ಬುಲೆಟ್ ತೆಗೆದು ಹಾಕಿದ ಮಹಿಳೆ!

ಈ ವೀಡಿಯೊವನ್ನು ಒಂದು ದಿನದ ಹಿಂದೆ ಹಂಚಿಕೊಳ್ಳಲಾಗಿದೆ. ಪೋಸ್ಟ್ ಮಾಡಿದಾಗಿನಿಂದ, ಇದನ್ನು 14 ಮಿಲಿಯನ್ ಬಾರಿ ವೀಕ್ಷಿಸಲಾಗಿದೆ. ಈ ಸಂಖ್ಯೆ ಇನ್ನೂ ಹೆಚ್ಚಾಗುತ್ತಲೇ ಇದೆ. ಈ ಪೋಸ್ಟ್ನಲ್ಲಿ ಹಲವಾರು ಜನರು ಕಾಮೆಂಟ್​​​ಗಳನ್ನು ಸಹ ಹಂಚಿಕೊಂಡಿದ್ದಾರೆ. ಅದರಲ್ಲಿ ಕೆಲವರು ಪ್ರಾಣಿ ನಿಂದನೆ ಮಾಡಿದ್ದಕ್ಕಾಗಿ ಅವನನ್ನು ಬಂಧಿಸಿ” ಎಂದು ಬರೆದುಕೊಂಡಿದ್ದಾರೆ. “ಹಾಗಾದರೆ ಅವನು ತನ್ನ ಸಾಕು ಹಾವಿನೊಂದಿಗೆ ‘ತಿರುಗಾಡುತ್ತಿದ್ದಾನಾ? ಎಂದು ಇನ್ನೊಬ್ಬರು ಕೇಳಿದ್ದಾರೆ. ಮತ್ತೊಬ್ಬರು “ಪ್ರಾಣಿಗಳ ದುರುಪಯೋಗ. ಹಾವುಗಳು ಮತ್ತು ಪಕ್ಷಿಗಳನ್ನು ಸಾಕುಪ್ರಾಣಿಗಳಾಗಿ ಇಟ್ಟುಕೊಳ್ಳುವ ಜನರ ಬಗ್ಗೆ ನನಗೆ ಬೇಸರವಾಗುತ್ತದೆ. ಇದು ಅಸಹ್ಯಕರವಾಗಿದೆ, ಮತ್ತು ಆ ಹಾವಿನ ದುರುಪಯೋಗಕ್ಕಾಗಿ ಈ ಮನುಷ್ಯನನ್ನು ವಿಚಾರಣೆಗೆ ಒಳಪಡಿಸಬೇಕಾಗಿದೆ. ” ಎಂದು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ಇದರ ಹೊರತಾಗಿ ಅನೇಕ ಜನರು ಹಲವು ರೀತಿಯಲ್ಲಿ ತಮ್ಮ ಅನಿಸಿಕೆಯನ್ನು ವ್ಯಕ್ತ ಪಡಿಸಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ