AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ; ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ

ಪಿಟಿಐ ಪ್ರಕಾರ, ವಿದ್ಯಾರ್ಥಿಯ ದೇಹವು ಪೇಯಿಂಗ್-ಗೆಸ್ಟ್(PG) ವಸತಿಗೃಹದಲ್ಲಿ ಕೋಣೆಯೊಂದರಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉತ್ತರ ಪ್ರದೇಶದ ಇಟಾವಾದಿಂದ ಬಂದ ಮೃತ ಬಾಲಕ ಅರ್ಜುನ್ ಸಕ್ಸೇನಾ 12 ನೇ ತರಗತಿ ಪರೀಕ್ಷೆಯೊಂದಿಗೆ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸಲು ದೆಹಲಿಗೆ ಬಂದಿದ್ದ ಎಂದು ತಿಳಿದುಬಂದಿದೆ.

ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ (ಸಾಂದರ್ಭಿಕ ಚಿತ್ರ)
ಅಕ್ಷತಾ ವರ್ಕಾಡಿ
|

Updated on: May 14, 2024 | 3:46 PM

Share

ದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 12 ನೇ ತರಗತಿಯ ಬೋರ್ಡ್ ಫಲಿತಾಂಶಗಳನ್ನು 2024 ಮೇ 13 ರಂದು ಅಂದರೆ ನಿನ್ನೆ ಘೋಷಿಸಲಾಗಿತ್ತು. ಇದೀಗ ಪರೀಕ್ಷೆಯಲ್ಲಿ ಎರಡು ವಿಷಯಗಳಲ್ಲಿ ಅನುತ್ತೀರ್ಣನಾದ 16 ವರ್ಷದ ಬಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸೋಮವಾರ ಪೂರ್ವ ದೆಹಲಿಯ ಲಕ್ಷ್ಮೀ ನಗರ ಪ್ರದೇಶದಲ್ಲಿ ಪೊಲೀಸರು ತಿಳಿಸಿದ್ದಾರೆ.

ಪಿಟಿಐ ಪ್ರಕಾರ, ವಿದ್ಯಾರ್ಥಿಯ ದೇಹವು ಪೇಯಿಂಗ್-ಗೆಸ್ಟ್(PG) ವಸತಿಗೃಹದಲ್ಲಿ ಕೋಣೆಯೊಂದರಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಉತ್ತರ ಪ್ರದೇಶದ ಇಟಾವಾದಿಂದ ಬಂದ ಮೃತ ಬಾಲಕ ಅರ್ಜುನ್ ಸಕ್ಸೇನಾ 12 ನೇ ತರಗತಿ ಪರೀಕ್ಷೆಯೊಂದಿಗೆ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗೆ ತಯಾರಿ ನಡೆಸಲು ದೆಹಲಿಗೆ ಬಂದಿದ್ದ ಎಂದು ತಿಳಿದುಬಂದಿದೆ.

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಪಿಯು ಪರೀಕ್ಷೆಗಳಲ್ಲಿ ಅವರು ಎರಡು ವಿಷಯಗಳಲ್ಲಿ ಫೇಲ್​ ಆಗಿದ್ದು, ಖಿನ್ನತೆಗೆ ಒಳಗಾಗಿದ್ದ ಎಂದು ವಸತಿಗೃಹದಲ್ಲಿ ಉಳಿದುಕೊಂಡಿರುವ ಇತರರ ಹೇಳಿಕೆಗಳನ್ನು ಉಲ್ಲೇಖಿಸಿ ಅಧಿಕಾರಿ ಹೇಳಿದ್ದಾರೆ.

ಇದನ್ನೂ ಓದಿ: Viral News: 5 ರೂ. ಕುರ್ಕುರೆ ತಂದಿಲ್ಲ ಎಂದು ಗಂಡನಿಗೆ ಡಿವೋರ್ಸ್​​​ ನೀಡಿದ ಪತ್ನಿ

ಘಟನೆಯ ಬಗ್ಗೆ ಸಕ್ಸೇನಾ ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರದಲ್ಲಿ ಇರಿಸಲಾಗಿದೆ. ಸಾವಿನ ನಿಖರವಾದ ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ

ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್

ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ

ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ

ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ

ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ

ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..