AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿದ್ಯಾರ್ಥಿ ಜೀವನದ ನೆನಪು, ಅಮ್ಮನಂತೆ ಅಕ್ಕರೆ ತೋರಿಸುವ ಶಿಕ್ಷಕಿಯ ಬರ್ತ್​​​ ಡೇ ಸರ್ಪ್ರೈಸ್ ಹೇಗಿತ್ತು ನೋಡಿ 

ಕಾಲೇಜಿನಲ್ಲಿ ವಿದ್ಯಾರ್ಥಿಗಳ ಗುಂಪೊಂದು ಶಿಕ್ಷಕಿಯೊಬ್ಬರು ತರಗತಿಯೊಳಗೆ ಬರುತ್ತಿದ್ದಂತೆ ಜಗಳವಾಡುತ್ತಿದ್ದಂತೆ ನಟಿಸಿ, ಆ ಶಿಕ್ಷಕಿ ಅವರ ಜಗಳವನ್ನು ಬಿಡಿಸಲೆಂದು ಬರುವಾಗ ವಿದ್ಯಾರ್ಥಿಗಳು ಜೋರಾಗಿ ಕೂಗುತ್ತಾ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಾರೆ. ವಿದ್ಯಾರ್ಥಿಗಳು ನೀಡಿದ ಈ ಸರ್ಪ್ರೈಸ್ ಕಂಡು ಶಿಕ್ಷಕಿ ಭಾವುಕರಾಗಿದ್ದಾರೆ. ಶಿಕ್ಷಕಿ ಮತ್ತು ವಿದ್ಯಾರ್ಥಿಗಳ ಸುಂದರ ಬಾಂಧವ್ಯದ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. 

Viral Video: ವಿದ್ಯಾರ್ಥಿ ಜೀವನದ ನೆನಪು, ಅಮ್ಮನಂತೆ ಅಕ್ಕರೆ ತೋರಿಸುವ ಶಿಕ್ಷಕಿಯ ಬರ್ತ್​​​ ಡೇ ಸರ್ಪ್ರೈಸ್ ಹೇಗಿತ್ತು ನೋಡಿ 
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Nov 20, 2023 | 5:35 PM

Share

ನಮ್ಮ ಜೀವನದಲ್ಲಿ ತಂದೆ ತಾಯಿಯ ನಂತರ ಗುರುವಿಗೆ ಪ್ರಮುಖ ಸ್ಥಾನವಿದೆ.  ಅವರು ನಮಗೆ ಕೇವಲ ಶಿಕ್ಷಣ ನೀಡುವುದು ಮಾತ್ರವಲ್ಲದೆ, ಜೀವನದ ಮೌಲ್ಯವನ್ನು ಕಲಿಸುತ್ತಾ,  ತಪ್ಪುಗಳನ್ನು ತಿದ್ದಿ ತೀಡಿ,  ನಮ್ಮನ್ನು ಉತ್ತಮ ಮನುಷ್ಯರನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ.  ಎಲ್ಲರ ಜೀವನದಲ್ಲೂ ಒಬ್ಬ ನೆಚ್ಚಿನ ಶಿಕ್ಷಕರಿರುತ್ತಾರೆ. ಅಂತಹ ಶಿಕ್ಷಕರನ್ನು ಹಲವು ವರ್ಷಗಳ ಬಳಿಕ ಭೇಟಿಯಾಗುವ  ಮೂಲಕ,  ಉಡುಗೊರೆಗಳನ್ನು ನೀಡುವ ಮೂಲಕ ಶಿಕ್ಷಕರನ್ನು ಸಂತೋಷಪಡಿಸುತ್ತಾರೆ. ಅದೇ ರೀತಿ ಇಲ್ಲೊಂದು ವಿದ್ಯಾರ್ಥಿಗಳ ಗುಂಪು ತಮ್ಮ ನೆಚ್ಚಿನ ಶಿಕ್ಷಕಿಗೆ ಹುಟ್ಟುಹಬ್ಬದ ಸರ್ಪ್ರೈಸ್  ಕೊಟ್ಟಿದ್ದು, ಆ ಶಿಕ್ಷಕಿ ವಿದ್ಯಾರ್ಥಿಗಳ ಪ್ರೀತಿಯನ್ನು  ಭಾವುಕರಾಗಿದ್ದಾರೆ. ಈ ಹೃದಯಸ್ಪರ್ಶಿ ವೀಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

@konappumedia ಎಂಬ ಇನ್ಸ್ಟಾಗ್ರಾಮ್ ಪೇಜ್ನಲ್ಲಿ ಹಂಚಿಕೊಳ್ಳಲಾದ  ಈ ವಿಡಿಯೋದಲ್ಲಿ ವಿದ್ಯಾರ್ಥಿಗಳು ತಮ್ಮ ನೆಚ್ಚಿನ ಶಿಕ್ಷಕಿಗೆ ಹುಟ್ಟುಹಬ್ಬದ ಸರ್ಪ್ರೈಸ್ ಕೊಡುತ್ತಿರುವುದನ್ನು ಕಾಣಬಹುದು. ಈ ವೈರಲ್ ವೀಡಿಯೋದಲ್ಲಿ ಶಿಕ್ಷಕಿ ತರಗತಿ ಒಳಗಡೆ ಬರುವ ಸಂದರ್ಭದಲ್ಲಿ ಒಂದಿಷ್ಟು ಕಾಲೇಜು ವಿದ್ಯಾರ್ಥಿಗಳು ತಮ್ಮತಮ್ಮಲೇ ಜಗಳವಾಡಲು ಶುರುಮಾಡಿಕೊಳ್ಳುತ್ತಾರೆ. ವಿದ್ಯಾರ್ಥಿಗಳು ಜಗಳವಾಡುವುದನ್ನು ಕಂಡು ಅವರ ಗಲಾಟೆಯನ್ನು ನಿಲ್ಲಿಸಲೆಂದು ಶಿಕ್ಷಕಿ ಅಲ್ಲಿಗೆ ಓಡೋಡಿ ಬರುತ್ತಾರೆ. ಅಷ್ಟರಲ್ಲಿ ಅಲ್ಲಿ ಜಗಳವಾಡುತ್ತಿದ್ದ ವಿದ್ಯಾರ್ಥಿಗಳು ಶಿಕ್ಷಕಿಗೆ ಜೋರಾಗಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರುತ್ತಾರೆ. ವಿದ್ಯಾರ್ಥಿಗಳ ಈ ಸರ್ಪ್ರೈಸ್ ಕಂಡು  ಆ ಶಿಕ್ಷಕಿ ಭಾವುಕರಾಗಿದ್ದಾರೆ.  ವಿದ್ಯಾರ್ಥಿಗಳು ಮತ್ತು ಶಿಕ್ಷಕಿಯ ಈ ಸುಂದರ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ  ವೈರಲ್ ಆಗಿದೆ.

ಇದನ್ನೂ ಓದಿ: ಈ ಪುಟ್ಟಿ ಅಪ್ಪನೆದುರು ಶಾಂತಮಯೀ, ಅಮ್ಮನೆದುರು ರುದ್ರಭಯಂಕರೀ

ವೈರಲ್​​ ವಿಡಿಯೋ ಇಲ್ಲಿದೆ:

View this post on Instagram

A post shared by ⚡️ (@konappumedia)

ನಾಲ್ಕು ದಿನಗಳ ಹಿಂದೆ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಳ್ಳಲಾದ ಈ ವೀಡಿಯೋ  9.8 ಮಿಲಿಯನ್ ವೀಕ್ಷಣೆಗಳನ್ನು ಹಾಗೂ 1 ಮಿಲಿಯನ್ ಲೈಕ್ಸ್ಗಳನ್ನು ಪಡೆದುಕೊಂಡಿದೆ.  ಅಲ್ಲದೆ ಹಲವಾರು ಕಮೆಂಟ್ಸ್ಗಳು ಹರಿದು ಬಂದಿವೆ. ಒಬ್ಬ ಬಳಕೆದಾರರು ಈ ಸುಂದರ ಕ್ಷಣವನ್ನು ಕಂಡು ನನ್ನ ಕಣ್ಣಂಚಲ್ಲೂ ನೀರು ತುಂಬಿತು  ಎಂದು ಹೇಳಿದ್ದಾರೆ.  ಇನ್ನೊಬ್ಬ ಬಳಕೆದಾರರು ಎಲ್ಲರನ್ನೂ ತನ್ನ ಮಕ್ಕಳಂತೆ ಕಾಣಲು, ಮಕ್ಕಳಿಗೆ ತಾಯಿಯಷ್ಟೇ ಪ್ರೀತಿ ಮತ್ತು ಧೈರ್ಯ ತುಂಬಲು ಕೇಲವ ಶಿಕ್ಷಕರಿಗೆ ಮಾತ್ರ ಸಾಧ್ಯ ಎಂದು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಇನ್ನೂ ಹಲವರು ಎಂತಹ ಸುಂದರವಾದ  ಕ್ಷಣವಿದು ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ: ಕ್ಯಾಪ್ಟನ್ ಗಿಲ್ಲಿ ನಟ ಯಾರ ಪರ?
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಕಾರಿಗೆ ಗುದ್ದಿ ಪಾದಚಾರಿ ಮೇಲೆ ಕ್ಯಾಂಟರ್ ಪಲ್ಟಿ​​: ಎದೆ ಝಲ್ ಎನಿಸೋ ದೃಶ್ಯ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ಬಾರ್​ಗೆ ನುಗ್ಗಿದ ಕೊಬ್ಬರಿ ಹೋರಿ, ಮದ್ಯಪ್ರಿಯರು ಕಕ್ಕಾಬಿಕ್ಕಿ!
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ರಾಯಚೂರಲ್ಲೂ ಘರ್ಜಿಸಿದ ಜೆಸಿಬಿಗಳು: 20ಕ್ಕೂ ಅಧಿಕ ಮನೆಗಳ ತೆರವು
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಅಪಾರ್ಟ್ಮೆಂಟ್​​ನಲ್ಲಿ ಸಿಲುಕಿಕೊಂಡ ಬೆಕ್ಕನ್ನು ಕಾಪಾಡಿದ ಅಗ್ನಿಶಾಮಕ ದಳ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಬಿಗ್ ಬಾಸ್​​ನಿಂದ ಹೊರ ಬರಲು ಅದುವೇ ಕಾರಣವಾಯ್ತು; ಸೂರಜ್ ಬೇಸರ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಹುಟ್ಟೂರಿನಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸಿದ ಹೆಚ್.ಡಿ.ದೇವೇಗೌಡ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಿಲ್ಲದ ಹಿಂಸಾಚಾರ, ಹಿಂದೂಗಳ ಮನೆಗಳಿಗೆ ಬೆಂಕಿ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ
ಬಾರ್​​​ನಲ್ಲಿ ಸಿಗರೇಟ್ ವಿಚಾರಕ್ಕೆ ಜಗಳ:ಚಾಕು ಇರಿದು ಯುವಕನಿಗೆ ಹಲ್ಲೆ