Viral: ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು; ಶಸ್ತ್ರಚಿಕಿತ್ಸೆಯ ಮೂಲಕ ಹೊರ ತೆಗೆದ ವೈದ್ಯರು

CT ಸ್ಕ್ಯಾನ್ ಪ್ರಕಾರ, ಕಲ್ಲುಗಳು 5 ಎಂಎಂ ಮತ್ತು 2 ಸೆಂ.ಮೀ ಗಾತ್ರಕ್ಕೆ ಬೆಳೆದಿರುವುದು ತಿಳಿದುಬಂದಿದೆ. ಇದಲ್ಲದೇ ರಕ್ತಪರೀಕ್ಷೆಯಲ್ಲಿ ಬಿಳಿರಕ್ತಕಣಗಳ ಸಂಖ್ಯೆಯೂ ಅಧಿಕವಾಗಿರುವುದು ಕಂಡುಬಂದಿದೆ. ಇದಕ್ಕೆ ಕಾರಣವನ್ನು ತಿಳಿಯಲು ವೈದ್ಯರು ಎಲ್ಲಾ ಪರೀಕ್ಷೆಗಳನ್ನು ಮಾಡಿದ್ದು, ಕೂಲಂಕಷವಾಗಿ ವಿಚಾರಣೆ ನಡೆಸಿದಾಗ ಆಕೆ ಒಂದು ಹನಿ ನೀರನ್ನೂ ಕುಡಿದಿಲ್ಲ ಎಂದು ಗೊತ್ತಾಗಿದೆ.

Viral: ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು; ಶಸ್ತ್ರಚಿಕಿತ್ಸೆಯ ಮೂಲಕ ಹೊರ ತೆಗೆದ ವೈದ್ಯರು
Follow us
|

Updated on: May 19, 2024 | 7:23 PM

ತೈವಾನ್: ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ ತಂಪು ಪಾನೀಯ ಮತ್ತು ಜ್ಯೂಸ್‌ಗಳನ್ನು ಮಾತ್ರ ಸೇವಿಸುತ್ತಿದ್ದ ಮಹಿಳೆ. ಈ ಕೃತಕ ಸಿಹಿಕಾರಕಗಳನ್ನು ಬಳಸಿ ತಯಾರಿಸಿದ ಪಾನೀಯದ ಅತಿಯಾದ ಸೇವನೆಯಿಂದಲೇ ಮಹಿಳೆ ಅಸ್ವಸ್ಥತೆಗೆ ಒಳಗಾಗಿದ್ದಾಳೆ. ಆಕೆಯ ಸಮಸ್ಯೆಯನ್ನು ಪತ್ತೆ ಹಚ್ಚಲು ವೈದ್ಯರು ಅಲ್ಟ್ರಾಸೌಂಡ್ ಸ್ಕ್ಯಾನ್ ನಡೆಸಿದಾಗ ಆಕೆಯ ಬಲ ಕಿಡ್ನಿ ದ್ರವದಿಂದ ಊದಿಕೊಂಡಿದ್ದು ಅದರಲ್ಲಿ ನೂರಾರು ಕಲ್ಲುಗಳು ಇರುವುದು ಪತ್ತೆಯಾಗಿವೆ.

CT ಸ್ಕ್ಯಾನ್ ಪ್ರಕಾರ, ಕಲ್ಲುಗಳು 5 ಎಂಎಂ ಮತ್ತು 2 ಸೆಂ.ಮೀ ಗಾತ್ರಕ್ಕೆ ಬೆಳೆದಿರುವುದು ತಿಳಿದುಬಂದಿದೆ. ಇದಲ್ಲದೇ ರಕ್ತಪರೀಕ್ಷೆಯಲ್ಲಿ ಬಿಳಿರಕ್ತಕಣಗಳ ಸಂಖ್ಯೆಯೂ ಅಧಿಕವಾಗಿರುವುದು ಕಂಡುಬಂದಿದೆ. ಇದಕ್ಕೆ ಕಾರಣವನ್ನು ತಿಳಿಯಲು ವೈದ್ಯರು ಎಲ್ಲಾ ಪರೀಕ್ಷೆಗಳನ್ನು ಮಾಡಿದ್ದು, ಕೂಲಂಕಷವಾಗಿ ವಿಚಾರಣೆ ನಡೆಸಿದಾಗ ಆಕೆ ಒಂದು ಹನಿ ನೀರನ್ನೂ ಕುಡಿದಿಲ್ಲ ಎಂದು ತಿಳಿದುಬಂದಿದೆ. ನೀರಿನ ಬದಲು ಬಬಲ್ ಟೀ, ಫ್ರೂಟ್ ಜ್ಯೂಸ್ ಮತ್ತು ಆಲ್ಕೋಹಾಲ್ ಪಾನೀಯಗಳನ್ನು ಸೇವಿಸಿ ತನ್ನನ್ನು ತಾನು ಹೈಡ್ರೇಟ್ ಮಾಡಿಕೊಳ್ಳುತ್ತೇನೆ ಎಂದು ವೈದ್ಯರಿಗೆ ತಿಳಿಸಿದ್ದಾಳೆ. ಇದರಿಂದ ಆಕೆಯ ಕಿಡ್ನಿಯಲ್ಲಿ ಇಷ್ಟೊಂದು ಕಲ್ಲುಗಳು ಇರಲು ಕಾರಣವಾಯಿತು ಎಂದು ವೈದ್ಯರು ತಿಳಿಸಿದ್ದಾರೆ . 2 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಆಕೆಯ ಮೂತ್ರಪಿಂಡದಿಂದ ಸುಮಾರು 300 ಕಲ್ಲುಗಳನ್ನು ಹೊರತೆಗೆಯುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಕೇವಲ 5ವರ್ಷ ದುಡಿದು, ಜೀವನಪೂರ್ತಿ ಆರಾಮಾಗಿರಿ, ವಿದ್ಯಾರ್ಹತೆ ಅಗತ್ಯವಿಲ್ಲ; ಜಾಹೀರಾತು ವೈರಲ್​​

ಮೂತ್ರಪಿಂಡದ ಕಲ್ಲುಗಳ ಕಾರಣಗಳು:

ಕಡಿಮೆ ನೀರಿನ ಸೇವನೆ, ತೂಕ ನಷ್ಟದ ಶಸ್ತ್ರಚಿಕಿತ್ಸೆ ಅಥವಾ ಉಪ್ಪು ಅಥವಾ ಸಕ್ಕರೆ ಹೆಚ್ಚಿರುವ ಆಹಾರ ಸೇವನೆಯಿಂದ ಕಿಡ್ನಿ ಸ್ಟೋನ್ ಸಮಸ್ಯೆ ಉಂಟಾಗಬಹುದು. ಅಲ್ಲದೇ ವ್ಯಾಯಾಮ ಮಾಡದವರ ದೇಹದಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಉಂಟಾಗುವ ಸಾಧ್ಯತೆ ಇದೆ ಎನ್ನುತ್ತಾರೆ ವೈದ್ಯರು. ಮೂತ್ರಪಿಂಡದ ಕಲ್ಲುಗಳನ್ನು ಕಡಿಮೆ ಮಾಡಲು ಹೆಚ್ಚು ನೀರು ಕುಡಿಯುವುದು ಅವಶ್ಯಕ. ದೇಹದಲ್ಲಿ ಸಾಕಷ್ಟು ನೀರು ಇಲ್ಲದಿದ್ದರೆ, ಮೂತ್ರಪಿಂಡಗಳಲ್ಲಿ ಕಲ್ಲುಗಳು ಸುಲಭವಾಗಿ ಶೇಖರಗೊಳ್ಳುತ್ತವೆ. ದೇಹದಲ್ಲಿ ನೀರಿನಂಶ ಕಡಿಮೆಯಾಗುವುದರಿಂದ ಕಲ್ಲುಗಳ ರಚನೆಯ ಅಪಾಯ ಹೆಚ್ಚಾಗುತ್ತದೆ. ಸಾಮಾನ್ಯವಾಗಿ, ಮಹಿಳೆಯರಿಗಿಂತ ಪುರುಷರು ಮೂತ್ರಪಿಂಡದ ಕಲ್ಲುಗಳನ್ನು ಅಭಿವೃದ್ಧಿಪಡಿಸುವ ಸಾಧ್ಯತೆ ಮೂರು ಪಟ್ಟು ಹೆಚ್ಚು ಎಂದು ವೈದ್ಯರು ಎಚ್ಚರಿಸುತ್ತಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ